Homeಮುಖಪುಟದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು  ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಹಗೆತನದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದು, ತಳ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವುದು ಇದಕ್ಕೆ ಒಂದು ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಕೇರಳ ಉತ್ತರ ಜಿಲ್ಲೆಯ ಬುಡಕಟ್ಟು ಮತ್ತು ದಲಿತ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಮುಖ್ಯಮಂತ್ರಿಗಳ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಪಿಣರಾಯ್‌ ವಿಜಯನ್‌, ರಾಜ್ಯದಲ್ಲಿ ಎಡ ಸರ್ಕಾರವು ಸಮಾಜದಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ದಲಿತ ಮತ್ತು ಬುಡಕಟ್ಟು ಸಮುದಾಯಗಳ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಉನ್ನತಿಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ, ಹಿಂದುಳಿದ ಸಮುದಾಯಗಳ ಜೀವನಮಟ್ಟವನ್ನು ಸುಧಾರಿಸುವುದರ ಜೊತೆಗೆ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಮಾನವೀಯ ಜಾತಿ ವ್ಯವಸ್ಥೆಯನ್ನು ಬೇರುಸಹಿತ ಕಿತ್ತೆಸೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮಕ್ಕಳ ಅಭ್ಯುದಯಕ್ಕಾಗಿ ತಮ್ಮ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಕ್ರಮಗಳ ಕುರಿತು ವಿವರಿಸಿದ ಅವರು, ಕೇಂದ್ರವು ಹಿಂದುಳಿದ ವರ್ಗಗಳ ಜನರನ್ನು ನಿರ್ಲಕ್ಷಿಸುತ್ತಿದೆ. ಕೇಂದ್ರ ಸರಕಾರವು ದಲಿತ ಸಮುದಾಯದ ಬಗ್ಗೆ ದ್ವೇಷದ ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ ಅವರಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನಿಲ್ಲಿಸಿರುವುದಾಗಿದೆ. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿಲ್ಲ. ಬದಲಾಗಿ 2.5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಕುಟುಂಬಗಳ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಎಂಟನೇ ತರಗತಿವರೆಗಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಸಂಪೂರ್ಣ ಮೊತ್ತವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಸಾಮಾಜಿಕ ಬದ್ಧತೆಯಾಗಿದೆ. ಇವೆಲ್ಲವೂ ಸಮುದಾಯದ ಅಂಚಿನಲ್ಲಿರುವ ವರ್ಗಗಳ ಬಗ್ಗೆ ರಾಜ್ಯ ಸರ್ಕಾರ ಹೊಂದಿರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಐತಿಹಾಸಿಕ ಕಾರಣಗಳಿಂದಾಗಿ ಎಸ್ಸಿ-ಎಸ್ಟಿ ಸಮುದಾಯದವರು ಸಾಮಾಜಿಕ ಪ್ರಗತಿಯಲ್ಲಿ ತೀರಾ ಹಿಂದುಳಿದಿದ್ದಾರೆ ಎಂದು ತಿಳಿಸಿದ ಪಿಣರಾಯ್‌ ವಿಜಯನ್, ಆ ಕಾರಣಗಳನ್ನು ‘ಚಾತುರ್ವರ್ಣ’ ಮತ್ತು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಪುರೋಹಿತಶಾಹಿ ವ್ಯವಸ್ಥೆಗಳು ಸಮಾಜದ ಮೇಲೆ ಹೇರಿವೆ. ಆ ಅಸಮಾನತೆಗಳನ್ನು ದೂರ ಮಾಡುವುದು ಆಧುನಿಕ ಸಮಾಜದ ಬಹುದೊಡ್ಡ ಜವಾಬ್ದಾರಿಯಾಗಿದೆ, ಕೇರಳವು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

2025ರ ವೇಳೆಗೆ ಎಸ್‌ಸಿ, ಎಸ್‌ಟಿ ಮತ್ತು ಆದಿವಾಸಿ ಸಮುದಾಯಗಳಿಗೆ ಸೇರಿದ ಎಲ್ಲಾ ಭೂರಹಿತ ಮತ್ತು ವಸತಿ ರಹಿತರಿಗೆ ಭೂಮಿ ಮತ್ತು ವಸತಿ ಒದಗಿಸುವುದು ನಮ್ಮ ಘೋಷಿತ ನೀತಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್‌ಸಿಗಳಿಗೆ 98,317 ನಿವೇಸನಗಳು ಮತ್ತು ಎಸ್‌ಟಿ 41,804 ನಿವೇಸನಗಳು ಸೇರಿದಂತೆ ಒಟ್ಟು 1,40,121 ನಿವೇಸನಗಳನ್ನು ಹಂಚಲಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಆಧುನಿಕ ಯುಗದ ಸವಾಲುಗಳನ್ನು ಎದುರಿಸಲು ಅನುವು ಮಾಡಿಕೊಡುವ ಕಾರ್ಯಚಟುವಟಿಕೆಗಳು ಈಗಾಗಲೇ ರಾಜ್ಯ ಸರ್ಕಾರದಿಂದ ಪ್ರಾರಂಭವಾಗಿವೆ. ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಈ ಸಮುದಾಯದ ವಿದ್ಯಾರ್ಥಿಗಳನ್ನು ಕಳುಹಿಸಲು ಮತ್ತು ದೇಶ-ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ಪರಿಣಾಮಕಾರಿಯಾಗಿ ಮಧ್ಯಪ್ರವೇಶಿಸುತ್ತಿದೆ. ರಾಜ್ಯದಲ್ಲಿ ಜಾರಿಗೆ ತರುತ್ತಿರುವ ವಿದೇಶಿ ಶಿಕ್ಷಣ ಕಾರ್ಯಕ್ರಮದಡಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಗಳ 425 ವಿದ್ಯಾರ್ಥಿಗಳಿಗೆ ಇದುವರೆಗೆ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ 10 ಲಕ್ಷದಿಂದ 25 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿವಿಧ ಹಿಂದುಳಿದ ಸಮುದಾಯಗಳ ಜೀವನ ಮಟ್ಟವು ಇತರ ರಾಜ್ಯಗಳಿಗಿಂತ ಕೇರಳದಲ್ಲಿ ಉತ್ತಮವಾಗಿದೆ ಎಂದು ಹೇಳಿದ ವಿಜಯನ್, ತಮ್ಮ ಸರ್ಕಾರವು ವಿವಿಧ ಕಾರ್ಯಕ್ರಮಗಳ ಮೂಲಕ ಅದನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುತ್ತಿದೆ. ನಮ್ಮ ಸಾರ್ವಜನಿಕ ಜಾಗೃತಿಗೆ ಮೂಢನಂಬಿಕೆ, ಅಸ್ಪೃಶ್ಯತೆ  ಮುಂತಾದವುಗಳನ್ನು ತುಂಬುವ ಪ್ರಯತ್ನಗಳು ನಡೆಯುತ್ತಿವೆ. ಈ ಪ್ರವೃತ್ತಿಗಳ ವಿರುದ್ಧ ನಾವು ಬಹಳ ಜಾಗರೂಕರಾಗಿರಬೇಕು ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಇದನ್ನು ಓದಿ: ಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...