Homeಕರ್ನಾಟಕದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

- Advertisement -
- Advertisement -

ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿ ಮಾದ್ಯಮ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರಗಳನ್ನು ಮಾಡುತ್ತಿದ್ದ ಬೆನ್ನಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದು, ಬಿಜೆಪಿ ಹೇಳುವಂತೆ ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ ಎಂದು ರಾಜ್ಯದ ಜನತೆಗೆ ಸ್ಪಷ್ಟನೆಯನ್ನು ಕೊಟ್ಟಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಸಲಹೆಗಾರ ರಾಧಾಕೃಷ್ಣ, ರಾಜ್ಯದ ಎ ದರ್ಜೆಯ ದೇವಸ್ಥಾನಗಳಲ್ಲಿ ನೂರಾರು ಕೋಟಿ ವ್ಯವಹಾರ ನಡೆಯುತ್ತಿದೆ. ಈ ಅಭಿವೃದ್ಧಿ ಸಹಿಸಲಾಗದೆ ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೂ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಎ ದರ್ಜೆಯ ದೇವಸ್ಥಾನಗಳಲ್ಲಿ ಆಗುತ್ತಿದೆ. ಇದನ್ನು ಬಿಜೆಪಿ ಸಹಿಸುತ್ತಿಲ್ಲ, ಕಾಂಗ್ರೆಸ್ ಸರಕಾರದ ಈ ಅವಧಿಯಲ್ಲಿ ದೇವಾಲಯಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ನೀವು ದೇವಸ್ಥಾನಗಳನ್ನು ರಾಜಕೀಯಕ್ಕೆ ಎಳೆದು ತರವುದನ್ನು ನಿಲ್ಲಿಸಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಎ ಗ್ರೇಡ್ ದೇವಾಸ್ಥಾನಗಳಲ್ಲಿ ನಡೆದ ಕಾಮಗಾರಿ ಸೇರಿದಂತೆ ಇತರೆ ಟೆಂಡರ್ ಗಳನ್ನು ಯಾರಿಗೆ ನೀಡಲಾಗಿತ್ತು ಎಂದು ತನಿಖೆ ನಡೆಸಿದರೆ ಬಿಜೆಪಿಯವರ ಯೋಗ್ಯತೆ ತಿಳಿಯುತ್ತದೆ. ಇದನ್ನು ಮುಚ್ಚಿ ಹಾಕುವುದಕ್ಕಾಗಿ ಬಿಜೆಪಿಯವರು ವಿವಾದ ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಮಾತನಾಡಿ, ಕಾಂಗ್ರೆಸ್ ಸರಕಾರದಿಂದ ದೇವಾಲಯಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಆದರೆ ಬಿಜೆಪಿ ನಾಯಕರು ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿತ್ಯ ಕೋಟ್ಯಂತರ ಹಣ ಸಂಗ್ರಹ ಆಗುತ್ತಿದ್ದು, ಇದನ್ನು ಬಿಜೆಪಿ ಸಹಿಸುತ್ತಿಲ್ಲ. ಬಿಜೆಪಿಯವರು  ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ 50 ವರ್ಷದಿಂದ ನಾವು ಹೋರಾಟ ನಡೆಸುತ್ತಿದ್ದು 42 ಸಾವಿರ ದೇವಾಲಯಗಳು ಬೀದಿ ಪಾಲಾಗಿದ್ದವು. ಅದಕ್ಕೆ ಪರಿಹಾರವಾಗಿ ತಸ್ತಿಕ್ ನೀಡಲಾಗುತ್ತಿದೆ. ನಾವೂ ಆ ಹಣದಲ್ಲಿ ದೇವಾಲಯದ ಪೂಜೆಗಳನ್ನು ಮಾಡುತ್ತೇವೆ. ರಾಮಲಿಂಗಾ ರೆಡ್ಡಿ ನಮ್ಮ ಹಲವು ಬೇಡಿಕೆ ಈಡೇರಿಸಿದ್ದಾರೆ. ಈ ಹಿಂದಿನ ಸರಕಾರ ನಮಗೆ ತಸ್ತಿಕ್ ಕೊಟ್ಟಿರಲಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಹೊಸ ಸರಕಾರ ಬಂದ ತಕ್ಷಣ ಬೇಡಿಕೆ ಈಡೇರಿದೆ ಎಂದು ಹೇಳಿದ್ದಾರೆ.

ನಮ್ಮ ದೇವಾಲಯದ ಹಣವನ್ನು ಚರ್ಚ್ ಮತ್ತು ಮಸೀದಿಗಳಿಗೆ ನೀಡಲಾಗುತ್ತಿದೆ. ನಮ್ಮ ದೇವಾಲಯದ ಹಣವನ್ನು ನಮ್ಮ ದೇವಾಲಯಕ್ಕೆ ನೀಡದೆ ಮಸೀದಿ, ಚರ್ಚ್‌ಗಳಿಗೆ ನೀಡುತ್ತಿರುವುದು ಯಾವ ನ್ಯಾಯ ಎಂದು ಇತ್ತೀಚೆಗೆ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಪ್ರಶ್ನಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಅನಂತ್‌ ಕುಮಾರ್‌ ಹೆಗಡೆ, ಲೋಕಸಭೆ ಚುನಾವಣೆ ವೇಳೆ ಕೊಟ್ಟ ಈ ಹೇಳಿಕೆ ಕೂಡ ಸುಳ್ಳು ಎನ್ನುವುದನ್ನು ಅರ್ಚಕರ ಸಂಘವೇ ಬಯಲುಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...