Homeಮುಖಪುಟಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

ಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಬಹದ್ದೂರ್‌ಗಢದ ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್, ಬಹದ್ದೂರ್‌ಗಢ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸರೋಜ್ ರಥೀ ಅವರ ಪತಿ ರಮೇಶ್ ರಾಥಿ, ಅವರ ನಿಕಟವರ್ತಿಗಳಾದ ಕರಂಬಿರ್ ರಥಿ ಮತ್ತು ಕಮಲ್ ರಥಿ, ಮಾಜಿ ಸಚಿವ ಮಾಂಗೆ ರಾಮ್ ರಥಿ ಅವರ ಪುತ್ರ ಸತೀಶ್ ನಂಬರ್‌ದಾರ್, ಮೊಮ್ಮಗ ಗೌರವ್, ರಾಹುಲ್ ಮತ್ತು ಐವರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಪಟ್ಟು:

ಆರೋಪಿಗಳನ್ನು ಬಂಧಿಸುವವರೆಗೆ ದಾಳಿಯಲ್ಲಿ ಹತರಾದ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್ ರಾಥಿ ಮತ್ತು ಅವರ ಭದ್ರತಾ ತಂಡದ ಸದಸ್ಯ ಜೈ ಕಿಶನ್ ಅವರ ಶವಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ನಫೆ ಸಿಂಗ್ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮೃತರ ಶವಗಳನ್ನು ಇರಿಸಲಾಗಿರುವ ಬಹದ್ದೂರ್‌ಗಢ ಸಿವಿಲ್ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಎಫ್‌ಐಆರ್‌:

ಘಟನೆಯ ಬಗ್ಗೆ ನಫೆ ಸಿಂಗ್ ರಾಥಿ ಅವರ ಸೋದರಳಿಯ ಮತ್ತು ಚಾಲಕ ರಾಕೇಶ್ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ರಾಕೇಶ್ ಅವರು ಬಿಳಿ ಬಣ್ಣದ ಫಾರ್ಚುನರ್ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಫೆ ಸಿಂಗ್ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಐಎನ್‌ಎಲ್‌ಡಿ ನಾಯಕ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರೆ, ಅವರ ಇಬ್ಬರು ಭದ್ರತಾ ಸಿಬ್ಬಂದಿಗಳಾದ ಸಂಜೀತ್ ಮತ್ತು ಜೈ ಕಿಶನ್ ಹಿಂದೆ ಇದ್ದರು. ಕಾರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ರಾಕೇಶ್ ಅವರು ಕಾರನ್ನು ವೇಗಗೊಳಿಸಲು ಪ್ರಯತ್ನಿಸಿದರು ಆದರೆ ಅವರು ದಾರಿಯಲ್ಲಿದ್ದ ರೈಲ್ವೆ ಕ್ರಾಸಿಂಗ್‌ನ ಗೇಟ್ ಮುಚ್ಚಿದ್ದರಿಂದ ನಿಲ್ಲಿಸಬೇಕಾಯಿತು. ಅವರು ಕಾರನ್ನು ನಿಲ್ಲಿಸಿದಾಗ, ಪಿಸ್ತೂಲುಗಳೊಂದಿಗೆ ಶಸ್ತ್ರಸಜ್ಜಿತವಾದ ಐವರು ದಾಳಿಕೋರರು ಹೊರಬಂದು ಗುಂಡಿನ ದಾಳಿಯನ್ನು ನಡೆಸಿದ್ದಾರೆ.

ದುಷ್ಕರ್ಮಿಗಳು ಈ ವೇಳೆ ಸತೀಶ್, ಕರಂಬಿರ್ ರಥಿ ಮತ್ತು ನರೇಶ್ ಕೌಶಿಕ್ ಜೊತೆ ದ್ವೇಷ ಬೆಳೆಸಿಕೊಂಡಿದ್ದಕ್ಕೆ ಪಾಠ ಕಲಿಸುತ್ತೇವೆಂದು ಗುಂಡಿನ ದಾಳಿ ನಡೆಸುತ್ತೇವೆ ಎಂದು ಹೇಳಿ ಫೈರಿಂಗ್‌ ಮಾಡಿದ್ದಾರೆ. ಅವರಲ್ಲೊಬ್ಬ ನನ್ನ ಕಡೆಗೆ ಬಂದು ನಾನು ನಿನ್ನನ್ನು ಜೀವಂತವಾಗಿ ಬಿಡುತ್ತಿದ್ದೇನೆ. ನರೇಶ್ ಕೌಶಿಕ್, ಕರಂಬಿರ್ ರಾಥಿ, ಸತೀಶ್ ರಾಥಿ, ಗೌರವ್ ರಾಥಿ, ರಾಹುಲ್ ಮತ್ತು ಕಮಲ್ ವಿರುದ್ಧ ನ್ಯಾಯಾಲಯಕ್ಕೆ ಹೋದರೆ ಅವರನ್ನು ಕೂಡ ಕೊಲ್ಲಲಾಗುವುದು ಎಂದು ಅವರ ಕುಟುಂಬಕ್ಕೆ ಹೇಳಿ ಎಂದು ಹೇಳಿರುವುದಾಗಿ ರಾಕೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಚಿಕ್ಕಪ್ಪ ನಫೆ ಸಿಂಗ್ ಮತ್ತು ಜೈ ಕಿಶನ್ ಆ ವೇಳೆಗೆ ಮೃತಪಟ್ಟಿರುವುದನ್ನು ನಾನು ನೋಡಿದೆ, ಆದರೆ ಸಂಜೀತ್ ಗಂಭೀರ ಸ್ಥಿತಿಯಲ್ಲಿದ್ದರು. ವ್ಯಕ್ತಿಯೊಬ್ಬರು ಅವರನ್ನು ಬಹದ್ದೂರ್‌ಗಢದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ರಾಕೇಶ್ ಹೇಳಿದ್ದಾರೆ. ತನ್ನ ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಸಂಚು ರೂಪಿಸಿ ಕೊಲೆಯ ಹಿಂದೆ ಇದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಹರ್ಯಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಘಟನೆಯ ಬಗ್ಗೆ ಸಂತಾಪ ಸೂಚನೆಗಳ ಸಂದರ್ಭದಲ್ಲಿ ಹರ್ಯಾಣದಲ್ಲಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದೆ. ನಫೆ ಸಿಂಗ್ ಅವರ ಹತ್ಯೆಯನ್ನು ರಾಜಕೀಯ ಹತ್ಯೆ ಎಂದು ಕರೆದ ಪ್ರತಿಪಕ್ಷಗಳು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ.

ಜನವರಿ 2023ರಲ್ಲಿ ಮಾಜಿ ಸಚಿವ ಮಂಗೇ ರಾಮ್ ಅವರ ಪುತ್ರ, ಸ್ಥಳೀಯ ಬಿಜೆಪಿ ನಾಯಕ ಜಗದೀಶ್ ನಂಬರ್‌ದಾರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ನಫೆ ಸಿಂಗ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮೃತರ ಮಗ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ರಾಜಕೀಯ ಪಿತೂರಿಯ ಭಾಗವಾಗಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಐಎನ್‌ಎಲ್‌ಡಿ ಹಿರಿಯ ನಾಯಕ ಅಭಯ್ ಸಿಂಗ್ ಚೌಟಾಲಾ ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...