Homeಮುಖಪುಟರಾಜಸ್ಥಾನ: ಅತ್ಯಾಚಾರ ಸಂತ್ರಸ್ತೆಗೆ ಗುಂಡು ಹಾರಿಸಿದ ಆರೋಪಿ; ಆಕೆಯ ಸಹೋದರನ ಮೇಲೆ ಮಾರಣಾಂತಿಕ ದಾಳಿ

ರಾಜಸ್ಥಾನ: ಅತ್ಯಾಚಾರ ಸಂತ್ರಸ್ತೆಗೆ ಗುಂಡು ಹಾರಿಸಿದ ಆರೋಪಿ; ಆಕೆಯ ಸಹೋದರನ ಮೇಲೆ ಮಾರಣಾಂತಿಕ ದಾಳಿ

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಸಹೋದರನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿ, ಆತನ ಇಬ್ಬರು ಸಹಚರರು ಚೂಪಾದ ಆಯುಧಗಳಿಂದ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತನ್ನ ಸಹೋದರನೊಂದಿಗೆ ಮನೆಗೆ ಹಿಂದಿರುಗುತ್ತಿದ್ದ ಸಂತ್ರಸ್ತೆ ಬೆನ್ನಿಗೆ ಆರೋಪಿಗಳು ಗುಂಡು ಹಾರಿಸಿದ್ದು, ಪ್ರಸ್ತುತ ಜೈಪುರದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಗ್ಪುರ ಗ್ರಾಮದ ಪೊಲೀಸ್ ಠಾಣೆಯಿಂದ ಕೇವಲ 20 ಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ.

ಸ್ಥಳದಿಂದ ಪರಾರಿಯಾಗುವ ಮೊದಲು ಮೂವರು ಪುರುಷರು ಮಹಿಳೆ ಮತ್ತು ಆಕೆಯ ಸಹೋದರನ ಮೇಲೆ ಕೊಡಲಿಯಂತಹ ಆಯುಧವನ್ನು ಬಳಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಬದುಕುಳಿದ ಅವರಿಗೆ, ತಲೆ, ಕಾಲುಗಳು, ಕೈಗಳು ಮತ್ತು ಭುಜಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಆರೋಪಿಯ ಇಬ್ಬರು ಸಹಚರರಾದ ಮಹಿಪಾಲ್ ಗುರ್ಜರ್ ಮತ್ತು ರಾಹುಲ್ ಗುರ್ಜರ್ ಅವರನ್ನು ಬಂಧಿಸಲಾಗಿದೆ. ಘಟನೆ ನಂತರ, ಆರೋಪಿ ರಾಜೇಂದ್ರ ಯಾದವ್ ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ತೀವ್ರ ಗಾಯಗಳೊಂದಿಗೆ ಕಂಡುಬಂದಿದ್ದಾನೆ. ಈ ಗಾಯಗಳು ಅಪಘಾತದಿಂದ ಉಂಟಾಗಿದೆಯೇ ಅಥವಾ ಆತ್ಮಹತ್ಯೆಯ ಪ್ರಯತ್ನವೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯಾದವ್ ರೈಲಿನ ಮುಂದೆ ನಿಂತು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ವರದಿಗಳು ಸೂಚಿಸುತ್ತವೆ, ಇದರಿಂದಾಗಿ ಆತ ತನ್ನ ಒಂದು ಕಾಲು ಕಳೆದುಕೊಂಡಿದ್ದಾನೆ.

24 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆ ಆರೋಪಿ ರಾಜೇಂದ್ರ ಯಾದವ್ ವಿರುದ್ಧ ಜೂನ್ 2023 ರಲ್ಲಿ ಪ್ರಕರಣ ದಾಖಲಿಸಿದ್ದರು. ಆ ಸಮಯದಲ್ಲಿ ಯಾದವ್ ಅವರನ್ನು ಬಂಧಿಸಲಾಯಿತು. ನಂತರ, ಆತ ತನ್ನ ಕೆಲಸ ಕಳೆದುಕೊಂಡಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡ ಅವನು, ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಲು ಆರಂಭಿಸಿದ್ದ. ಆಕೆ ನಿರಾಕರಿಸಿದ್ದಕ್ಕೆ ಪ್ರತೀಕಾರವಾಗಿ ಇತ್ತೀಚಿನ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಯಾದವ್ ಸ್ಥಳೀಯ ರಾಜಕಾರಣಿಗಳೊಂದಿಗೆ ತೆಗೆಸಿಕೊಂಡಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ. ಅಪರಾಧಿಗಳು ಮತ್ತು ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಗಳ ನಡುವಿನ ಸಂಪರ್ಕದ ಬಗ್ಗೆ ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಇದನ್ನೂ ಓದಿ; ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...