Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...