Homeಕರ್ನಾಟಕಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ: ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟ ನಾಸಿರ್ ಹುಸೇನ್

ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ: ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟ ನಾಸಿರ್ ಹುಸೇನ್

- Advertisement -
- Advertisement -

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾಂದ್’ ಘೋಷಣೆ ಕೂಗಲಾಗಿದೆ ಎಂಬ ಬಿಜೆಪಿ ಮತ್ತು ಮಾಧ್ಯಮಗಳ ಆರೋಪದ ಕುರಿತು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ್ ನಾಸಿರ್ ಹುಸೇನ್ ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, “ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ, ನಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ನಾನೂ ಅಲ್ಲಿದ್ದೆ. ನಮ್ಮ ಬೆಂಬಲಿಗರು ನಾಸಿರ್ ಹುಸೇನ್ ಝಿಂದಾಬಾದ್, ನಾಸಿರ್ ಖಾನ್ ಝಿಂದಾಬಾದ್, ನಾಸಿರ್ ಸಾಬ್ ಝಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ” ಎಂದಿದ್ದಾರೆ.

“ನಾನು ಮನೆಗೆ ಹೊರಟಾಗ ಮಾಧ್ಯಮಗಳಿಂದ ನನಗೆ ಕರೆ ಬಂತು. ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಅವರು ಹೇಳಿದರು. ಅದಕ್ಕೆ ಉತ್ತರಿಸಿದ ನಾನು, ಅಲ್ಲಿ ಹಲವು ಘೋಷಣೆಗಳನ್ನು ಕೂಗಲಾಗಿದೆ. ಪಾಕಿಸ್ತಾನ್ ಝಿಂದಾಬಾದ್ ಎಂಬ ಘೋಷಣೆ ಕೂಗಿರುವುದು ನನ್ನ ಕಿವಿಗೆ ಬಿದ್ದಿಲ್ಲ ಎಂದಿದ್ದೇನೆ. ಅದು ಏನೇ ಆಗಿದ್ದರೂ ತನಿಖೆ ನಡೆಸುವಂತೆ ಪೊಲೀಸರನ್ನು ಕೇಳುತ್ತೇನೆ. ಅವರು ತನಿಖೆ ನಡೆಸಲಿ” ಎಂದು ನಾಸಿರ್ ಹುಸೇನ್ ಹೇಳಿದ್ದಾರೆ.

“ಯಾರಾದರು ಆ ರೀತಿಯ ಘೋಷಣೆ ಕೂಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತು ತನಿಖೆಯಾಗಬೇಕು. ವಿಡಿಯೋವನ್ನು ತಿರುಚಿದ್ದರೆ ಆ ಬಗ್ಗೆಯೂ ತನಿಖೆ ನಡೆಯಬೇಕು. ಯಾರಾದರು ಘೋಷಣೆ ಕೂಗಿದ್ದರೆ, ಆ ವ್ಯಕ್ತಿ ಯಾರು? ಆತ ಎಲ್ಲಿಯವನು? ಮತ್ತು ಆತ ವಿಧಾನಸೌಧಕ್ಕೆ ಪ್ರವೇಶ ಪಡೆದಿದ್ದು ಹೇಗೆ? ಈ ರೀತಿ ಘೋಷಣೆ ಕೂಗಿರುವುದರ ಹಿಂದಿನ ಉದ್ದೇಶವೇನು? ಈ ಎಲ್ಲದರ ಬಗ್ಗೆ ತನಿಖೆ ಆಗಬೇಕು” ಎಂದಿದ್ದಾರೆ.

“ನನ್ನ ಗಮನಕ್ಕೆ ಬಂದ ಹಾಗೆ ಆ ಸ್ಥಳದಲ್ಲಿ ಆ ರೀತಿಯ ಯಾವುದೇ ಘೋಷಣೆ ಕೂಗಲಾಗಿಲ್ಲ. ಒಂದು ವೇಳೆ ನನ್ನ ಸಮ್ಮುಖದಲ್ಲಿ ಯಾರಾದರೂ ಅಂತಹ ಘೋಷಣೆ ಕೂಗಿದ್ದರೆ ನಾನು ಸುಮ್ಮನಿರುತ್ತಿರಲಿಲ್ಲ. ಯಾವುದೇ ಒಬ್ಬ ಭಾರತೀಯ ಅಂತಹದ್ದನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಬಗ್ಗೆ ತನಿಖೆ ನಡೆಯುವವರೆಗೂ ಕಾಯೋಣ’ ಎಂದು ಹೇಳಿದ್ದಾರೆ.

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದಾರೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...