Homeಕರ್ನಾಟಕಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೈತ ಹೋರಾಟದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದಿಂದ ತಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೈತ ಹೋರಾಟದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದಿಂದ ತಡೆ

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಡೆ ಒಡ್ಡಿದೆ.

ಸೆನ್ಸಾರ್ ಮಾಡಿಸದ ಚಿತ್ರಗಳ ಪ್ರದರ್ಶನಕ್ಕೆ ಮುನ್ನ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಅನುಮತಿ ಪಡೆದುಕೊಳ್ಳಬೇಕು. ಹಾಗಾಗಿ, ಅನುಮತಿ ಪಡೆಯಲು ರಾಜ್ಯ ಸರ್ಕಾರ ಪಟ್ಟಿ ಕಳುಹಿಸಿತ್ತು. ಈ ವೇಳೆ ಕಿಸಾನ್ ಸತ್ಯಾಗ್ರಹ ಸಾಕ್ಷ್ಯಚಿತ್ರ, ಇಸ್ರೇಲ್ ಮತ್ತು ಉಕ್ರೇನ್‌ನ ಎರಡು ಸಿನಿಮಾಗಳ ಪ್ರದರ್ಶನಕ್ಕೆ ಸಚಿವಾಲಯ ತಡೆ ನೀಡಿದೆ ಎಂದು ತಿಳಿದು ಬಂದಿದೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ಸಾಕ್ಷ್ಯಚಿತ್ರ ನಿರ್ದೇಶಕ ಕೇಸರಿ ಹರವು, “ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದಿಂದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರದಿಂದ ನನಗೆ ಮಾಹಿತಿ ಬಂದಿದೆ. ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರ ಪಡೆಯದ ಚಿತ್ರಗಳ ಪ್ರದರ್ಶನ ಚಲನಚಿತ್ರೋತ್ಸವದಲ್ಲಿ ಮಾಡುವಂತಿಲ್ಲ ಎಂಬ ನಿಯಮ ಇಲ್ಲ. ಆದರೆ, ಪ್ರಮಾಣ ಪತ್ರ ಪಡೆಯದ ಸಿನಿಮಾ, ಸಾಕ್ಷ್ಯಚಿತ್ರಗಳ ಪ್ರದರ್ಶನಕ್ಕೆ ಮುನ್ನ ಕೇಂದ್ರಕ್ಕೆ ಪಟ್ಟಿ ನೀಡಬೇಕಿದೆ. ಅದರಂತೆ ರಾಜ್ಯ ಸರ್ಕಾರ ಪಟ್ಟಿ ಕಳಿಸಿತ್ತು. ಪ್ರಮಾಣ ಪತ್ರ ಪಡೆದಿಲ್ಲ ಎಂಬ ಕಾರಣ ನೀಡಿ ಪ್ರದರ್ಶನಕ್ಕೆ ತಡೆ ನೀಡಿದ್ದಾರೆ ಎಂಬ ಮಾಹಿತಿ ದೊರೆತಿದೆ” ಎಂದಿದ್ದಾರೆ.

“ನಮ್ಮ ಸಾಕ್ಷ್ಯಚಿತ್ರದ ಜೊತೆಗೆ ಉಕ್ರೇನ್ ಮತ್ತು ಇಸ್ರೇಲ್‌ನ ಎರಡು ಸಿನಿಮಾಗಳ ಪ್ರದರ್ಶನಕ್ಕೆ ತಡೆ ಒಡ್ಡಲಾಗಿದೆ. ಅವುಗಳೂ ಕೂಡ ಯುದ್ಧಕ್ಕೆ ಸಂಬಂಧಿಸಿದ್ದಾಗಿವೆ” ಎಂದು ಹರವು ಹೇಳಿದ್ದಾರೆ.

“ಕಳೆದ ವರ್ಷ ನಮ್ಮ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಅವಕಾಶ ಕೋರಿದ್ದೆವು. ಆಗ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸುವುದಿಲ್ಲ ಎಂದು ಸರ್ಕಾರದ ಕಡೆಯಿಂದ ತಿಳಿಸಿದ್ದರು. ಬಳಿಕ, ಅವರು ಕೆಲ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ನನಗೆ ಅವರು ಸುಳ್ಳು ಹೇಳಿದ್ದರು. ಈ ಬಾರಿ ನಾವು ಪ್ರದರ್ಶನಕ್ಕೆ ಮನವಿ ಮಾಡಿರಲಿಲ್ಲ. ಆದರೆ, ಸರ್ಕಾರದ ಕಡೆಯಿಂದಲೇ ಪ್ರದರ್ಶನಕ್ಕೆ ಅನುಮತಿ ಕೇಳಿದ್ದರು. ಚಲನಚಿತ್ರೋತ್ಸವದ ಮಾಹಿತಿ ಕೈಪಿಡಿಯ 236ನೇ ಪುಟದಲ್ಲಿ ನಮ್ಮ ಚಿತ್ರ ಪ್ರದರ್ಶನದ ಬಗ್ಗೆ ಪ್ರಕಟಿಸಲಾಗಿದೆ. ಆದರೆ, ಈಗ ಕೇಂದ್ರದಿಂದ ತಡೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮ್ಮದು ದೆಹಲಿಯ ರೈತ ಹೋರಾಟದ ಕುರಿತ ಸಾಕ್ಷ್ಯ ಚಿತ್ರ. ಉಕ್ರೇನ್ ಮತ್ತು ಇಸ್ರೇಲ್‌ನದ್ದು ಅಲ್ಲಿನ ಯುದ್ಧ ಭೀಕರತೆಯ ಕುರಿತ ಚಿತ್ರಗಳಾಗಿವೆ. ಈ ಮೂರು ಚಿತ್ರಗಳ ಪ್ರದರ್ಶನದ ತಡೆ ಹಿಡಿದಿರುವುದರ ಹಿಂದೆ ದುರುದ್ದೇಶವಿದೆ” ಎಂದು ಹರವು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...