HomeUncategorizedಬೆಂಗಳೂರಿನ ಕೊಳವೆ ಬಾವಿಗಳಿಂದ ನೀರು ಪೂರೈಸುವ ಟ್ಯಾಂಕರ್‌ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ಕೊಳವೆ ಬಾವಿಗಳಿಂದ ನೀರು ಪೂರೈಸುವ ಟ್ಯಾಂಕರ್‌ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆ ಬಾವಿಗಳಿಂದ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದ ಬಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು “ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್‌ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆ ಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ನನ್ನ ಇಲಾಖೆಯ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಬೋರ್‌ವೆಲ್‌ಗಳು ಬತ್ತಿ ಹೋಗಿ ಜನರು ಸಂಕಷ್ಟಪಡುವಂತಾಗಿದೆ. ಇದನ್ನೇ ಲಾಭ ಮಾಡಿಕೊಂಡಿರುವ ನೀರು ಪೂರೈಕೆದಾರರು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿ ಜನರಿಂದ ಹೆಚ್ಚಿನ ಹಣ ಪೀಕುತ್ತಿರು ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನ ಬೆನ್ನುಹತ್ತಿದ ಪೊಲೀಸ್ ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...