Homeಮುಖಪುಟರಾಜಸ್ಥಾನದಿಂದ ರಾಹುಲ್ ಗಾಂಧಿಯ 'ಭಾರತ್ ಜೋಡೋ ನ್ಯಾಯ ಯಾತ್ರೆ' ಪುನರಾರಂಭ

ರಾಜಸ್ಥಾನದಿಂದ ರಾಹುಲ್ ಗಾಂಧಿಯ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಪುನರಾರಂಭ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಶನಿವಾರ(ಮಾ.2) ಮಧ್ಯಾಹ್ನ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಿಂದ ಪುನರಾರಂಭಗೊಂಡಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುಖಜಿಂದರ್ ರಾಂಧವಾ ಮತ್ತು ಇತರ ನಾಯಕರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ರಾಹುಲ್ ಯಾತ್ರೆಯನ್ನು ಪುನರಾರಂಭಿಸಿದ್ದಾರೆ.

ತೆರದ ವಾಹನದಲ್ಲಿ ಪಕ್ಷದ ಧ್ವಜ ಬೀಸಿ ರಾಹುಲ್ ಗಾಂಧಿ ಯಾತ್ರೆಗೆ ಚಾಲನೆ ಕೊಟ್ಟರು. ಸಾವಿರಾರು ಮಂದಿ ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.

ಐದು ದಿನಗಳ ವಿರಾಮದ ನಂತರ ಇಂದು ಮಧ್ಯಾಹ್ನ ರಾಜಸ್ಥಾನದ ದೋಲ್ಪುರ ಜಿಲ್ಲೆಯಲ್ಲಿ ಪುನರಾರಂಭಗೊಂಡ ಯಾತ್ರೆಯು, ಸಂಜೆಯ ಹೊತ್ತಿಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಗೆ ಪ್ರವೇಶಿಸಿದೆ. ಇಂದು ರಾತ್ರಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಎರಡು ವಿಶೇಷ ಉಪನ್ಯಾಸಗಳನ್ನು ನೀಡಲು ಮತ್ತು ನವದೆಹಲಿಯಲ್ಲಿ ಪ್ರಮುಖ ಸಭೆಗಳಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ತೆರಳಿದ್ದ ಕಾರಣ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯು ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಸ್ಥಗಿತಗೊಂಡಿತ್ತು.

ಮಣಿಪುರದಿಂದ-ಮುಂಬೈಗೆ 15 ರಾಜ್ಯಗಳ ಮೂಲಕ 6,700 ಕಿಲೋಮೀಟರ್‌ಗಳಷ್ಟು ದೂರದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ರಾಹುಲ್ ಗಾಂಧಿ ಹಮ್ಮಿಕೊಂಡಿದ್ದು, ಪ್ರಸ್ತುತ ಮಧ್ಯಪ್ರದೇಶದಲ್ಲಿ ಯಾತ್ರೆ ಮುಂದುವರೆಯುತ್ತಿದೆ.

ಇದನ್ನೂ ಓದಿ : ಮುಗಿಯದ ಹಿಮಾಚಲ ಬಿಕ್ಕಟ್ಟು: ಕನಿಷ್ಠ 9 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಅನರ್ಹ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...