Homeಕರ್ನಾಟಕಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಒಮ್ಮೆ ಕನ್ನಡಿ ನೋಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಒಮ್ಮೆ ಕನ್ನಡಿ ನೋಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬೆಂಗಳೂರಿನ ರಾಮೇರ್ಶವರಂ ಕೆಫೆ ಸ್ಫೋಟದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ವಿರುದ್ಧ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ‘ಅವರು ಕನ್ನಡಿಗರನ್ನು ನೋಡಬೇಕು’ ಎಂದು ಹೇಳಿದ್ದಾರೆ.

“ಅವರಿಗೆ ಯರ ರಾಜೀನಾಮೆ ಬೇಕೇ? ಯಾರು ಬೇಕಾದರೂ ರಾಜೀನಾಮೆ ಕೊಡುತ್ತೇವೆ. ಅವರು ಕೇವಲ ರಾಜಕೀಯ ಮಾಡಿ ಬೆಂಗಳೂರಿನ ಇಮೇಜ್ ಹಾಳು ಮಾಡುತ್ತಿದ್ದಾರೆ. ಅವರ ಕಾಲದಲ್ಲಿ ಕರ್ನಾಟಕದಲ್ಲಿ ಏನಾಗಿದೆ, ಅವರು ಕನ್ನಡಿಯನ್ನು ನೋಡಬೇಕು. ಅವರು ಕರ್ನಾಟಕಕ್ಕೆ ನೋವುಂಟುಮಾಡಿದರೆ, ಬಿಜೆಪಿ ಹೈಕಮಾಂಡ್ ದೇಶ ಮತ್ತು ತಮ್ಮನ್ನು ನೋಯಿಸುತ್ತಿದೆ’ ಎಂದು ಶಿವಕುಮಾರ್ ಕಿಡಿಕಾರಿದ್ದಾರೆ.

ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ಅಪರಾಧ ದಳ ಶನಿವಾರ ನಾಲ್ವರನ್ನು ವಶಕ್ಕೆ ಪಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಕೆಫೆಯಲ್ಲಿ ಬಾಂಬ್ ಇಟ್ಟ ವ್ಯಕ್ತಿಗೆ ಅವರು ಸಹಾಯ ಮಾಡಿರಬಹುದು ಎನ್ನಲಾಗುತ್ತಿದೆ.

ಕೆಫೆಯಲ್ಲಿ ಇಡ್ಲಿ ಆರ್ಡರ್ ಮಾಡಿದ ವ್ಯಕ್ತಿಯೇ ಪ್ರಮುಖ ಶಂಕಿತ. ಶಂಕಿತ ವ್ಯಕ್ತಿ ಕೆಫೆಗೆ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಸಿಕ್ಕಿವೆ. ತನಿಖೆ ನಡೆಯುತ್ತಿದ್ದು, ಪ್ರಮುಖ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಆರೋಪಿಯ ಫೋನ್ ನಂಬರ್ ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸ್ಫೋಟದ ಸಮಯದಲ್ಲಿ ಈ ಪ್ರದೇಶದಲ್ಲಿ 500 ಸಕ್ರಿಯ ಸಂಖ್ಯೆಗಳು ಬಳಕೆಯಲ್ಲಿದ್ದವು. ಶಂಕಿತ ಆರೋಪಿ ಬನಶಂಕರಿಯಿಂದ ಐಟಿಪಿಎಲ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಕುಂದಲಹಳ್ಳಿ ಬಳಿ ವೋಲ್ವೋ ಬಸ್ ಸಂಖ್ಯೆ ಕೆಎ-57-ಎಫ್ 186 ಹತ್ತಿ ಸಿಎಂಆರ್‌ಐಟಿ ಕಾಲೇಜು ನಿಲ್ದಾಣದಲ್ಲಿ ಇಳಿದಿದ್ದಾನೆ.

ಸ್ಫೋಟದ ಬಗ್ಗೆ ಬಿಜೆಪಿ ಆರೋಪ

ರಾಜ್ಯದಲ್ಲಿ ಇತ್ತೀಚೆಗೆ ಎದ್ದಿರುವ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳಿಗೂ ಸ್ಫೋಟಕ್ಕೂ ಸಂಬಂಧವಿದೆ ಎಂದು ಬಿಜೆಪಿಯ ರಾಜೀವ್ ಚಂದ್ರಶೇಖರ್ ಶಂಕಿಸಿದ್ದಾರೆ. ‘ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಎತ್ತಲಾಯಿತು ಮತ್ತು ಎರಡು ದಿನಗಳ ನಂತರ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ. ಇವೆರಡರ ನಡುವೆ ಸಂಬಂಧವಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...