Homeಮುಖಪುಟಪಾಲ್ಘರ್ ನಕಲಿ ಎನ್‌ಕೌಂಟರ್‌ ಪ್ರಕರಣ: ಇಬ್ಬರು ಪೊಲೀಸರು ಬಂಧನ

ಪಾಲ್ಘರ್ ನಕಲಿ ಎನ್‌ಕೌಂಟರ್‌ ಪ್ರಕರಣ: ಇಬ್ಬರು ಪೊಲೀಸರು ಬಂಧನ

- Advertisement -
- Advertisement -

ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿ 2018ರಲ್ಲಿ ಕಳ್ಳತನ ಪ್ರಕರಣದ ಆರೋಪಿಯ ನಕಲಿ ಎನ್‌ಕೌಂಟರ್‌ಗೆ ಸಂಬಂಧಿಸಿ ಇಬ್ಬರು ಪೊಲೀಸರನ್ನು ವಿಶೇಷ ತನಿಖಾ ತಂಡವು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮೀರಾ ಭಯಾಂಡರ್ ವಸಾಯಿ ಪೊಲೀಸ್ ಠಾಣೆಯ ಪೊಲೀಸ್‌ ಮಂಗೇಶ್ ಚವಾಣ್ ಮತ್ತು ಮನೋಜ್ ಸಕ್ಪಾಲ್ ಬಂಧಿತರು ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಜೋಗಿಂದರ್ ರಾಣಾ  ನಕಲಿ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ಎಸ್‌ಐಟಿಯನ್ನು ಸ್ಥಾಪಿಸಲು ಆದೇಶಿಸಿತ್ತು. ರಾಣಾ ಅವರ ಸಹೋದರ ಸುರೇಂದ್ರ ರಾಣಾ ಅವರು ನಕಲಿ ಎನ್‌ಕೌಂಟರ್‌ನ್ನು ನಲಸೋಪಾರಾದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸ್ಥಳೀಯ ಅಪರಾಧ ವಿಭಾಗದ ಪೊಲೀಸರಾದ ಮನೋಜ್ ಸಕ್ಪಾಲ್ ಮತ್ತು ಹೆಡ್ ಪೊಲೀಸ್ ಕಾನ್‌ಸ್ಟೆಬಲ್ ಮಂಗೇಶ್ ಚವಾಣ್ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಈ ಕುರಿತು ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಪೊಲೀಸರು 2023ರಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ ಶಿಕ್ಷೆ) ಮತ್ತು 201 (ಸಾಕ್ಷ್ಯ ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪಿ ಪೊಲೀಸರನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಮಾರ್ಚ್ 11 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠವು ತನಿಖೆಯ ಪ್ರಗತಿಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿತ್ತು. 2018ರಲ್ಲಿ ಥಾಣೆ ಪೊಲೀಸ್ ಕಮಿಷನರ್ ಜೈಜೀತ್ ಸಿಂಗ್ ನೇತೃತ್ವದ ಎಸ್‌ಐಟಿ ರಚನೆಯಾದ ನಂತರ ಯಾವುದೇ ಮಹತ್ವದ ಬೆಳವಣಿಗೆ ಪ್ರಕರಣದಲ್ಲಿ ಆಗಿಲ್ಲ ಎಂದು ಗಮನಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಾದ ನಂತರ ಅತ್ಯಗತ್ಯವಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಪೊಲೀಸರನ್ನು ನ್ಯಾಯಾಲಯ ಟೀಕಿಸಿದೆ. 2023ರ ನವೆಂಬರ್‌ನಲ್ಲಿ 12 ವಾರಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಉಲ್ಲಾಸ್‌ನಗರದ ಉಪ ಪೊಲೀಸ್ ಆಯುಕ್ತರು ನೀಡಿದ ಭರವಸೆಗಳ ಸಿಂಧುತ್ವವನ್ನು ಸಹ ಕೂಡ ಪ್ರಶ್ನಿಸಿತ್ತು. ತನಿಖೆಯ ಪ್ರತಿಯೊಂದು ಸಣ್ಣ ಅಂಶವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಜಿಲ್ಲಾಧಿಕಾರಿಯವರೊಂದಿಗೆ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ವಿವರವಾದ ಹೇಳಿಕೆ ನೀಡುವಂತೆ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಪಿಪಿ ಶಿಂಧೆ ಅವರನ್ನು ಕೋರಿದ್ದು, ಸೋಮವಾರಕ್ಕೆ ಪ್ರಕರಣವನ್ನು ಮುಂದೂಡಲಾಗಿತ್ತು.

ಜೋಗಿಂದರ್ ರಾಣಾ ಅವರ ಸಹೋದರ ಸುರೇಂದ್ರ ರಾಣಾ ಅವರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ತನಿಖೆ ಅಥವಾ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ 2018ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ನಂತರ ಪ್ರಕರಣವು ಭಾರೀ ಸುದ್ದು ಮಾಡಿದೆ.

ಎನ್‌ಕೌಂಟರ್‌ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಫೋಟೋಗಳು ಸೇರಿದಂತೆ ಸಾಕಷ್ಟು ಪುರಾವೆಗಳ ಹೊರತಾಗಿಯೂ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು ಮತ್ತು ಬದಲಿಗೆ ಆಕಸ್ಮಿಕ ಸಾವು ಎಂದು ವರದಿಯನ್ನು ದಾಖಲಿಸಿದ್ದಾರೆ ಎಂದು ರಾಣಾ ಅವರು ದೂರಿನಲ್ಲಿ ಆರೋಪಿಸಿದ್ದರು.

ಇದನ್ನು ಓದಿ: ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...