Homeಮುಖಪುಟಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

- Advertisement -
- Advertisement -

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಸುಮಾರು 7,000 ಉದ್ಯೋಗಿಗಳಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ಶ್ರೀನಗರದಲ್ಲಿ ಕಳೆದ 9 ವರ್ಷಗಳಲ್ಲಿ ಮೋದಿ ಇದೇ ಮೊದಲ ಬಾರಿಗೆ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಕಾಶ್ಮೀರದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕೇಸರಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲವನ್ನು ನೀಡುವ ಪ್ರಯತ್ನವಾಗಿ ಜಮ್ಮು-ಕಾಶ್ಮೀರ ಆಡಳಿತವು ಶಿಕ್ಷಣ, ಕ್ರೀಡೆ, ಕೃಷಿ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಇತರ 13 ಇಲಾಖೆಗಳ ನೌಕರರಿಗೆ ಮೋದಿಯ ರ್ಯಾಲಿಯಲ್ಲಿ ಭಾಗವಹಿಸುವಂತೆ ಆದೇಶ ನೀಡಿದೆ. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿದೆ, ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ.

ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿಯವರ ಭೇಟಿಗೆ ಮುಂಚಿತವಾಗಿ, ಕೇಂದ್ರ ಗೃಹ ಸಚಿವಾಲಯವು ಎಕ್ಸ್‌ನಲ್ಲಿ ಸ್ವಯಂ-ಅಭಿನಂದನೆಯ ಪೋಸ್ಟ್‌ಗಳನ್ನು ಹಾಕಿಕೊಂಡಿದೆ. ಆರ್ಟಿಕಲ್ 370 ರದ್ದತಿ  “ಶಾಂತಿಯುತ ಮತ್ತು ಸಮೃದ್ಧ” ಜಮ್ಮು ಮತ್ತು ಕಾಶ್ಮೀರವನ್ನು ರಚಿಸಲು ಸಹಾಯ ಮಾಡಿದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ. ಕಲ್ಲು ತೂರಾಟದ ಘಟನೆಗಳಲ್ಲಿ 100 ಪ್ರತಿಶತದಷ್ಟು ಇಳಿಕೆಯಾಗಿದೆ. 2023ರಲ್ಲಿ ಒಂದೇ ಒಂದು ಕಲ್ಲು ತೂರಾಟದ ಘಟನೆಯೂ ವರದಿಯಾಗಿಲ್ಲ. ನಾಗರಿಕರ ಸಾವುಗಳು ಶೇಕಡಾ 81ರಷ್ಟು ಕಡಿಮೆಯಾಗಿದೆ. 69ರಷ್ಟು ಭಯೋತ್ಪಾದಕ ಘಟನೆಗಳು ಕಡಿಮೆಯಾಗಿದೆ. ಭದ್ರತಾ ಸಿಬ್ಬಂದಿಯ ಹತ್ಯೆಗಳು ಶೇಕಡಾ 47ರಷ್ಟು ಕಡಿಮೆಯಾಗಿದೆ ಎಂದು ಗೃಹ ಸಚಿವಾಲಯದ ವರದಿ ತಿಳಿಸಿದೆ.

ಶ್ರೀನಗರದಲ್ಲಿ ಬಿಜೆಪಿಯ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ ನಂತರ ಕಾಶ್ಮೀರದಲ್ಲಿ ಪ್ರಧಾನಿಯವರ ಮೊದಲ ರ್ಯಾಲಿಗೆ ಎರಡು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಬಕ್ಷಿ ಕ್ರೀಡಾಂಗಣವು ಕೇವಲ 18,000 ಆಸನಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ವರದಿಯಾಗಿದೆ ಮತ್ತು ಮೈದಾನದಲ್ಲಿ ಸುಮಾರು 10,000 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಂಗಣವು ಸುಮಾರು 30,000 ಜನರಿಗೆ ಅವಕಾಶ ಕಲ್ಪಿಸುತ್ತದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಅದರೆ ಜಮ್ಮು-ಕಾಶ್ಮೀರ ಬಿಜೆಪಿ ಮುಖ್ಯಸ್ಥರ ಹೇಳಿಕೆ ಅನುಮಾನಗಳನ್ನು ಹುಟ್ಟುಹಾಕಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ ಬಿಜೆಪಿಯ ವಕ್ತಾರ ಅಲ್ತಾಫ್ ಠಾಕೂರ್ ಹೇಳಿದ್ದಾರೆ.

ಮೋದಿ ರ್ಯಾಲಿಯ ಹಿನ್ನೆಲೆ ಶ್ರೀನಗರದಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಶ್ರೀನಗರ ವಿಮಾನ ನಿಲ್ದಾಣದಿಂದ ಸ್ಥಳಕ್ಕೆ ಹೋಗುವ ರಸ್ತೆಗಳಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳಿಂದ ಭದ್ರತೆ ಕಲ್ಪಿಸಲಾಗಿದೆ.

ಇದನ್ನು ಓದಿ: ಇಬ್ಬರು ಯುವಕರನ್ನು ಕಟ್ಟಿ ಹಾಕಿ ಥಳಿಸಿದ ಪೊಲೀಸ್‌ ಪೇದೆ: ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...