Homeಮುಖಪುಟಮಹಾಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ಹದಿನಾಲ್ಕು ಮಕ್ಕಳು ಆಸ್ಪತ್ರೆಗೆ ದಾಖಲು

ಮಹಾಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ಹದಿನಾಲ್ಕು ಮಕ್ಕಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ನಡೆದ ಮಹಾಶಿವರಾತ್ರಿ ಮೆರವಣಿಗೆ ವೇಳೆ ಹದಿನಾಲ್ಕು ಮಕ್ಕಳು ವಿದ್ಯುತ್ ಶಾಕ್‌ಗೆ ಒಳಗಾಗಿದ್ದು, ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

‘ಇದೊಂದು ಅತ್ಯಂತ ದುಃಖಕರ ಘಟನೆ… ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರಿಗೆ ಶೇಕಡಾ 100ರಷ್ಟು ಸುಟ್ಟ ಗಾಯಗಳಾಗಿವೆ. ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವ ಹೀರಾಲಾಲ್ ನಗರ್ ಹೇಳಿದ್ದಾರೆ.

ಹೈ-ಟೆನ್ಷನ್ ಓವರ್ಹೆಡ್ ವಿದ್ಯುತ್ ತಂತಿಯು ವಿದ್ಯುತ್ ಆಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಬ್ಬರು ಮಕ್ಕಳು ಶೇಕಡಾ 50 ಮತ್ತು 100 ರಷ್ಟು ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಉಳಿದವರು ಶೇಕಡಾ 50 ಕ್ಕಿಂತ ಕಡಿಮೆ ಸುಟ್ಟಗಾಯಗಳೋಂದಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ; ಅಧಿಕಾರಿಯೊಂದಿಗೆ ಅನುಚಿತ ವರ್ತನೆ: ಉತ್ತರಾಖಂಡ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...