Homeಮುಖಪುಟಪಶ್ಚಿಮ ಬಂಗಾಳ: ಸಂಸದ ಸ್ಥಾನ, ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಕುನಾರ್ ಹೆಂಬ್ರಮ್

ಪಶ್ಚಿಮ ಬಂಗಾಳ: ಸಂಸದ ಸ್ಥಾನ, ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಕುನಾರ್ ಹೆಂಬ್ರಮ್

- Advertisement -
- Advertisement -

ಪಶ್ಚಿಮ ಬಂಗಾಳದ ಜಾರ್‌ಗ್ರಾಮ್‌ ಕ್ಷೇತ್ರದ ಕುನಾರ್ ಹೆಂಬ್ರಮ್ ತನ್ನ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಹೆಂಬ್ರಮ್ ಅವರು ದಿಢೀರ್ ರಾಜೀನಾಮೆ ನೀಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ, ಹೆಂಬ್ರಮ್ ಅವರು ‘ಚುನಾವಣೆಗೂ ಮುನ್ನವೇ ಸೋಲನ್ನು ಗ್ರಹಿಸಿ’ ರಾಜೀನಾಮೆ ನೀಡಿದ್ದಾರೆ ಎಂದಿದೆ.

ಜಾರ್‌ಗ್ರಾಮ್‌ ಕ್ಷೇತ್ರದಲ್ಲಿ ಬಿಜೆಪಿ ಸೋಲಲಿದೆ ಎಂದು ಹೆಂಬ್ರಮ್ ಅವರಿಗೆ ಗೊತ್ತಾಗಿದೆ. ಹಾಗಾಗಿ, ಅವರು ಮೊದಲೇ ರಾಜೀನಾಮೆ ನೀಡಿದ್ದಾರೆ ಎಂದು ಟಿಎಂಸಿ ಸಂಸದ ಸಂತಾನು ಸೇನ್ ಹೇಳಿದ್ದಾರೆ.

ಮೊದಲ ಬಾರಿಗೆ ಸಂಸದರಾಗಿದ್ದ ಹೆಂಬ್ರಮ್ ಅವರು, ಮುಂದೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ. ಪುಸ್ತಕ ಬರೆಯಲು ಮತ್ತು ಸಮಾಜ ಸೇವೆ ಮಾಡಲು ನನ್ನ ಸಮಯವನ್ನು ಮೀಸಲಿಡುತ್ತೇನೆ ಎಂದು ಹೇಳಿದ್ದಾರೆ.

ಹೆಂಬ್ರಮ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ವಕ್ತಾರ ಸಾಮಿಕ್ ಭಟ್ಟಾಚಾರ್ಯ “ಕೆಲವು ದಿನಗಳ ಹಿಂದೆ ಹೆಂಬ್ರಮ್ ತಮ್ಮ ನಿರ್ಧಾರವನ್ನು ಪಕ್ಷಕ್ಕೆ ತಿಳಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಿಎಂಕೆ ಮೈತ್ರಿಕೂಟ ಸೇರಿದ ಕಮಲ್ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

0
ಮಧ್ಯಪ್ರದೇಶದ ನೀಮುಚ್ ಜಿಲ್ಲಾ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದು, 30 ವರ್ಷದ ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ತರುವಾಯ ಆಸ್ಪತ್ರೆಗೆ...