Homeಮುಖಪುಟನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

- Advertisement -
- Advertisement -

ದೆಹಲಿಯ ರಸ್ತೆಯಲ್ಲಿ ಶುಕ್ರವಾರದ ನಮಾಝ್‌ ಮಾಡುತ್ತಿದ್ದ ಮುಸ್ಲಿಮ್‌ ಸಮುದಾಯದ ಜನರ ಮೇಲೆ ಒದ್ದು ದುಷ್ಕೃತ್ಯವನ್ನು ಮೆರದ ಪೊಲೀಸರ ವರ್ತನೆಯನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಖಂಡಿಸಿದ್ದು, ಮುಸ್ಲಿಮರು ನಮಾಜ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಘಟನೆಯ ಬಗ್ಗೆ ಜಗತ್ತಿಗೆ ವಿವರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೇಳಿಕೆಯನ್ನು ನೀಡಿರುವ  ಸಂಸದ ಅಸಾದುದ್ದೀನ್ ಓವೈಸಿ, ನೀವು ನಮ್ಮ ಮೇಲೆ ಒದ್ದರೆ ಅಥವಾ ಗುಂಡು ಹಾರಿಸಿದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ. ಶುಕ್ರವಾರದ ಘಟನೆಯು ಮುಸ್ಲಿಮರ ವಿರುದ್ಧ ಜನರ ಮನಸ್ಸು ಎಷ್ಟು ಭ್ರಷ್ಟಗೊಂಡಿದೆ ಎಂಬುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದ್ದಾರೆ.

ಶುಕ್ರವಾರದಂದು ದೆಹಲಿಯ ರಸ್ತೆಗಳಲ್ಲಿ ಜನರು ಸೇರುವುದು ಮತ್ತು ನಮಾಝ್‌ನಲ್ಲಿ ಪಾಲ್ಗೊಳ್ಳುವುದು ಸಾಮಾನ್ಯವಾಗಿದೆ. ಹಿಂದಿನ ದೆಹಲಿ ಗಲಭೆಗಳಲ್ಲಿ ಮುಸ್ಲಿಮರನ್ನು ಪೊಲೀಸರು ಗುರಿಯಾಗಿಸಿಕೊಂಡ ಬಗೆಗೆ ದೆಹಲಿ ಪೊಲೀಸರು ಕಲಿಯಬೇಕು. ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ, ಮುಸ್ಲಿಮರಿಗೆ ಎಷ್ಟು ಘನತೆ ಮತ್ತು ಗೌರವವಿದೆ ಎಂಬುವುದನ್ನು ಇದು ಹೇಳುತ್ತದೆ. ನಾನು ಪ್ರಧಾನಿ, ಬಿಜೆಪಿಯವರನ್ನು ಕೇಳಲು ಬಯಸುತ್ತೇನೆ ಅವಮಾನಕ್ಕೊಳಗಾದ ವ್ಯಕ್ತಿ ಯಾವ ಕುಟುಂಬಕ್ಕೆ ಸೇರಿದವನು? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಏನಿದು ಘಟನೆ?

ಜನನಿಬಿಡ ರಸ್ತೆಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ಸಣ್ಣ ಗುಂಪಿಗೆ ಪೊಲೀಸ್ ಅಧಿಕಾರಿಯೊಬ್ಬರು ಅಲ್ಲಿಂದ ತೆರಳುವಂತೆ ಕಾಲಿನಿಂದ ಒದೆಯುತ್ತಿರುವ ವಿಡಿಯೋ ನಿನ್ನೆ ವೈರಲ್ ಆಗಿತ್ತು. ಘಟನೆ ಕುರಿತು ವಿರೋಧ ವ್ಯಕ್ತವಾದ ನಂತರ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು.

ಘಟನೆಯ ವೀಡಿಯೋದಲ್ಲಿ ಕಂಡುಬರುವ ಪೊಲೀಸ್ ಪೋಸ್ಟ್ ಇನ್ ಚಾರ್ಜ್‌ನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಗತ್ಯ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ ಎಂಕೆ ಮೀನಾ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕಾಂಗ್ರೆಸ್‌ನ ದೆಹಲಿ ಘಟಕವು ದೆಹಲಿ ಪೊಲೀಸರನ್ನು ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಇದು ತುಂಬಾ ನಾಚಿಕೆಗೇಡಿನ ಸಂಗತಿ! ರಸ್ತೆಯಲ್ಲಿ ನಮಾಝ್‌ ಮಾಡುವವರನ್ನು ಒದೆಯುತ್ತಿರುವ ದಿಲ್ಲಿ ಪೊಲೀಸ್ ಜವಾನ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ…? ಎಂದು ಪ್ರಶ್ನಿಸಿತ್ತು.

ಇದನ್ನು ಓದಿ: ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

 

 

 

 

 

 

 

 

 

 

 

 

 

 

 

 

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...