‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಲವು ವರ್ಷಗಳ ಹಿಂದೆ ಹೇಳಿದ್ದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗ್ಡೆ, ಇದೀಗ ಪುನಃ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿ ಮೊಮ್ಮಗ ಪ್ರಕಾಶ್ ಅಂಬೇಡ್ಕರ್, ‘ಅವರ ಮಾತುಗಳು ನನಗೆ ಆಶ್ಚರ್ಯವನ್ನುಂಟು ಮಾಡುವುದಿಲ್ಲ; 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಆರ್‌ಎಸ್‌ಎಸ್ ತೆಗೆದುಕೊಂಡ ಪ್ರತಿಜ್ಞೆ ಇದು’ ಎಂದು ಹೇಳಿದ್ದಾರೆ.
ಅನಂತ್‌ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ‘ಅವರ (ಬಿಜೆಪಿ ಸಂಸದರ) ಮಾತುಗಳು ನನಗೆ ಆಶ್ಚರ್ಯವನ್ನುಂಟು ಮಾಡುವುದಿಲ್ಲ. ಅವರು ಸಾರ್ವಜನಿಕವಾಗಿ ಇಂತಹ ಹೇಳಿಕೆಯನ್ನು ನೀಡಿರುವುದು ಇದೇ ಮೊದಲಲ್ಲ ಎಂದು ನಿಮಗೆ ನೆನಪಿಸಲು ನನಗೆ ಅವಕಾಶ ಮಾಡಿಕೊಡಿ; ಅವರು 2017 ರಲ್ಲಿ ಹೇಳಿದ್ದರು. 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಆರ್‌ಎಸ್‌ಎಸ್ ತೆಗೆದುಕೊಂಡ ಪ್ರತಿಜ್ಞೆ ಇದು’ ಎಂದು ಹೇಳಿದ್ದಾರೆ.
His words do not come as a surprise to me. And, allow me to remind you to that this is not the first time that he has much such a statement in public; he said the same in 2017.
This is the pledge that RSS took after the Constitution was adopted in 1950.
RSS and BJP have a… pic.twitter.com/6FtG3DC9Im
— Prakash Ambedkar (@Prksh_Ambedkar) March 11, 2024
‘ಆರೆಸ್ಸೆಸ್ ಮತ್ತು ಬಿಜೆಪಿ ಭಾರತೀಯ ಸಂವಿಧಾನವನ್ನು ಅಳಿಸಿಹಾಕಲು ಮತ್ತು ಮನು ಸ್ಮೃತಿಯನ್ನು ಬದಲಿಸಲು ದೀರ್ಘಾವಧಿಯ ಯೋಜನೆಯನ್ನು ಹೊಂದಿವೆ. ಅವರು ನಿಯಮಗಳನ್ನು ನಿರ್ದೇಶಿಸಲು, ಸ್ವಾತಂತ್ರ್ಯ, ಘನತೆ ಮತ್ತು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲು ಮತ್ತು ನಮ್ಮ ಪ್ರೀತಿಯ ರಾಷ್ಟ್ರದ ಜಾತ್ಯತೀತ ಬಟ್ಟೆಯನ್ನು ಬದಲಾಯಿಸಲು ಬಯಸುತ್ತಾರೆ. ಬಾಬಾಸಾಹೇಬರು ಹೇಳಿದ್ದನ್ನು ನಾನು ಪುನರುಚ್ಚರಿಸುತ್ತೇನೆ, “ನಮ್ಮ ಯಜಮಾನರಾಗಲು ನಿಮ್ಮ ಆಸಕ್ತಿ ಇರಬಹುದು. ಆದರೆ ನಾವು ನಿಮ್ಮ ಗುಲಾಮರಾಗುವುದು ಹೇಗೆ?” ಎಂದು ಬರೆದುಕೊಂಡಿದ್ದಾರೆ.
ಬಿಜೆಪಿಯ ರಹಸ್ಯ ಕಾರ್ಯಸೂಚಿಯ ಭಾಗ: ಸಿಎಂ ಸಿದ್ದರಾಮಯ್ಯ
ಸಂವಿಧಾನ ಬದಲಾಯಿಸುವ ಅನಂತ್‌ಕುಮಾರ್ ಹೆಗಡೆ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಹಿಂದೂ ಧರ್ಮವನ್ನು ರಕ್ಷಿಸಲು ಬಿಜೆಪಿಗೆ 400 ಸ್ಥಾನಗಳನ್ನು ಪಡೆಯಬೇಕು ಎಂಬ ಅನಂತಕುಮಾರ್ ಹೆಗಡೆಯವರ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಲ್ಲ. ಭಾರತೀಯ ಜನತಾ ಪಕ್ಷದ (ಬಿಜೆಪಿ) ರಹಸ್ಯ ಕಾರ್ಯಸೂಚಿಯ ಭಾಗವಾಗಿದೆ’ ಎಂದು ಹೇಳಿದ್ದಾರೆ.
‘ನಮ್ಮ ಸಂವಿಧಾನವು ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ರಕ್ಷಿಸುತ್ತದೆ ಮತ್ತು ಪ್ರತಿಯೊಬ್ಬ ನಾಗರಿಕನಿಗೆ ಅವನ ಅಥವಾ ಅವಳ ನಂಬಿಕೆಯನ್ನು ಅನುಸರಿಸುವ ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಹಾಗಾದರೆ, ಅನಂತ್ ಕುಮಾರ್ ಹೆಗಡೆಯವರು ಸಂವಿಧಾನವನ್ನೇ ಬದಲಾಯಿಸುವ ಮೂಲಕ ಹಿಂದೂ ಧರ್ಮದ ಯಾವ ಆವೃತ್ತಿಯನ್ನು ರಕ್ಷಿಸುವ ಗುರಿ ಹೊಂದಿದ್ದಾರೆ’ ಎಂದು ಅವರು ಪ್ರಶ್ನಿಸಿದ್ದಾರೆ.
ಅನಂತ ಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ @BJP4India ಪಕ್ಷದ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು… pic.twitter.com/weepQgiZ5T
— Siddaramaiah (@siddaramaiah) March 11, 2024
‘ಹೆಗ್ಡೆಯವರ ಹೇಳಿಕೆಯು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆವೃತ್ತಿಯನ್ನು ಮನುಸ್ಮೃತಿಯಿಂದ ಪ್ರಭಾವಿತವಾಗಿ ಬದಲಿಸುವ ಬಿಜೆಪಿಯ ಗುಪ್ತ ಉದ್ದೇಶಗಳನ್ನು ಬಹಿರಂಗಪಡಿಸಿದೆ. ಬಿಜೆಪಿಯ ಆವೃತ್ತಿಯು ಜಾತಿ ವ್ಯವಸ್ಥೆಯ ಅನಿಷ್ಟ ಪದ್ಧತಿಗಳನ್ನು ಬಲಪಡಿಸುತ್ತದೆ. ಬಿಜೆಪಿಯು ಅಧಿಕಾರಕ್ಕೆ ಬಂದರೆ ಒಬಿಸಿ ಮತ್ತು ದಲಿತರಿಗೆ ಎಲ್ಲಾ ಮೀಸಲಾತಿಗಳನ್ನು ತೆಗೆದುಹಾಕುತ್ತದೆ. ಅವರ ಹೇಳಿಕೆಯು ಒಬಿಸಿಗಳು ಮತ್ತು ದಲಿತರ ಮೇಲೆ ನೇರ ದಾಳಿಯಾಗಿದೆ’ ಎಂದು ಕಿಡಿಕಾರಿದ್ದಾರೆ.
‘ಅನಂತ್ ಕುಮಾರ್ ಹೆಗಡೆಯವರು ಸಂವಿಧಾನದ ವಿರುದ್ಧ ಮಾತನಾಡುತ್ತಿರುವುದು ಇದೇ ಮೊದಲಲ್ಲ.ಸಂವಿಧಾನವನ್ನು ಬದಲಾಯಿಸುವ ಇಂಗಿತವನ್ನು ಅವರು ಪದೇ ಪದೇ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಹಿರಿಯ ಸದಸ್ಯರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಬೆಂಬಲವನ್ನು ಗಮನಿಸಿದರೆ, ಅವರು ಹೆಗ್ಡೆಯವರ ಅಭಿಪ್ರಾಯಗಳೊಂದಿಗೆ ಹೊಂದಿಕೆಯಾಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಮೋದಿಯವರು ಹೆಗ್ಡೆಯವರ ಅಭಿಪ್ರಾಯಗಳನ್ನು ಒಪ್ಪದಿದ್ದರೆ ಅವರನ್ನು ಮೊದಲು ಪಕ್ಷದಿಂದ ಉಚ್ಚಾಟಿಸಬೇಕು. ಹೆಗ್ಡೆಯವರ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗಿರುವುದು ಪ್ರಧಾನಿಯವರ ಸೂಚ್ಯ ಒಪ್ಪಂದವನ್ನು ಸೂಚಿಸುತ್ತದೆ. ಇದು ಸಂವಿಧಾನಕ್ಕೆ ಮೋದಿಯವರ ಸಾರ್ವಜನಿಕ ನಿಷ್ಠೆಯ ಘೋಷಣೆಗಳು ಕೇವಲ ಮೇಲ್ನೋಟಕ್ಕೆ ತೋರುತ್ತದೆ’ ಎಂದು ಹೇಳಿದ್ದಾರೆ.
‘ತಮ್ಮ ಪಕ್ಷದ ವರಿಷ್ಠರ ಬೆಂಬಲವಿಲ್ಲದೇ, ಅನಂತಕುಮಾರ್ ಹೆಗಡೆಯಂತಹ ಸಂಸದರು ಇಂತಹ ಸಂವಿಧಾನ ವಿರೋಧಿ ಹೇಳಿಕೆಗಳನ್ನು ಧೈರ್ಯದಿಂದ ನೀಡುವುದು ಅಸಾಧ್ಯ. ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ ಎಂದು ಪ್ರತಿಜ್ಞೆ ಮಾಡಿದ ಹೆಗಡೆ, ಅದರ ವಿರುದ್ಧ ಹೇಳಿಕೆ ನೀಡುವುದು ಶಿಕ್ಷಾರ್ಹ ಅಪರಾಧ. ಲೋಕಸಭೆಯ ಸ್ಪೀಕರ್ ಹೆಗಡೆ ವಿರುದ್ಧ ಗಂಭೀರ ಕ್ರಮ ಕೈಗೊಂಡು ಚುನಾವಣೆಗೆ ಸ್ಪರ್ಧಿಸದಂತೆ ಶಾಶ್ವತವಾಗಿ ಅನರ್ಹಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆ: ರಾಹುಲ್ ಗಾಂಧಿ
‘ಸಂವಿಧಾನ ಬದಲಿಸಲು 400 ಸ್ಥಾನಗಳು ಬೇಕು ಎಂಬ ಬಿಜೆಪಿ ಸಂಸದರ ಹೇಳಿಕೆ ನರೇಂದ್ರ ಮೋದಿ ಮತ್ತು ಅವರ ‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬಾಬಾ ಸಾಹೇಬರ ಸಂವಿಧಾನವನ್ನು ನಾಶ ಮಾಡುವುದೇ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿಯಾಗಿದೆ. ಅವರು ನ್ಯಾಯ, ಸಮಾನತೆ, ನಾಗರಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ. ಸಮಾಜವನ್ನು ವಿಭಜಿಸುವ ಮೂಲಕ, ಮಾಧ್ಯಮವನ್ನು ಗುಲಾಮರನ್ನಾಗಿ ಮಾಡುವ ಮೂಲಕ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ಮತ್ತು ಸ್ವತಂತ್ರ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮೂಲಕ, ಅವರು ವಿರೋಧವನ್ನು ತೊಡೆದುಹಾಕಲು ಸಂಚು ರೂಪಿಸುವ ಮೂಲಕ ಭಾರತದ ಮಹಾನ್ ಪ್ರಜಾಪ್ರಭುತ್ವವನ್ನು ಸಂಕುಚಿತ ಸರ್ವಾಧಿಕಾರವಾಗಿ ಪರಿವರ್ತಿಸಲು ಬಯಸುತ್ತಾರೆ’ ಎಂದು ರಾಹುಲ್ ಆತಂಖ ವ್ಯಕ್ತಪಡಿಸಿದ್ದಾರೆ.
भाजपा सांसद का बयान कि उन्हें 400 सीट संविधान बदलने के लिए चाहिए, नरेंद्र मोदी और उनके ‘संघ परिवार’ के छिपे हुए मंसूबों का सार्वजनिक ऐलान है।
नरेंद्र मोदी और भाजपा का अंतिम लक्ष्य बाबा साहेब के संविधान को ख़त्म करना है। उन्हें न्याय, बराबरी, नागरिक अधिकार और लोकतंत्र से नफ़रत…
— Rahul Gandhi (@RahulGandhi) March 10, 2024
‘ಸ್ವಾತಂತ್ರ್ಯ ವೀರರ ಕನಸುಗಳ ಜೊತೆಗೆ ಈ ಷಡ್ಯಂತ್ರಗಳನ್ನು ನಾವು ಯಶಸ್ವಿಯಾಗಲು ಬಿಡುವುದಿಲ್ಲ ಮತ್ತು ನಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನದ ಭರವಸೆಯ ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ. ಸಂವಿಧಾನದ ಪ್ರತಿಯೊಬ್ಬ ಸೈನಿಕರು, ವಿಶೇಷವಾಗಿ ದಲಿತರು, ಆದಿವಾಸಿಗಳು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಚ್ಚೆತ್ತುಕೊಳ್ಳಿ, ನಿಮ್ಮ ಧ್ವನಿಯನ್ನು ಎತ್ತಿಕೊಳ್ಳಿ, ಭಾರತವು ನಿಮ್ಮೊಂದಿಗಿದೆ’ ಎಂದು ಹೇಳಿದ್ದಾರೆ.
ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇ’ದು ಬಿಜೆಪಿ ಸಂವಿಧಾನ ವಿರೋಧಿ’ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.
‘ಅವರು ಏನುಬೇಕೋ ಮಾಡಲಿ, ಸಂವಿಧಾನವನ್ನು ತಿದ್ದುಪಡಿ ಮಾಡಲಿ… ಇದು ಬಿಜೆಪಿ ಸರ್ಕಾರ (ಕೇಂದ್ರದಲ್ಲಿ) ಮತ್ತು ಬಿಜೆಪಿ ಸಂಸದರು ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ’ ಎಂದರು.
ಪದೇಪದೆ ಸಂವಿಧಾನ ವಿರೋಧಿ ಹೇಳಿಕೆ:
ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. 2017 ರಲ್ಲಿ, ಆಗಿನ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವರಾಗಿದ್ದ ಅವರು ಸಂವಿಧಾನವನ್ನು ಬದಲಾಯಿಸುವ ಕುರಿತು ತಮ್ಮ ಹೇಳಿಕೆ ನೀಡಿ ವಿವಾದವನ್ನು ಉಂಟುಮಾಡಿದ್ದರು. ನಂತರ ಲೋಕಸಭೆಯಲ್ಲಿ ಕ್ಷಮೆಯಾಚಿಸಿದ ಅವರು ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಮರ್ಥಿಸಿಕೊಂಡರು.
ಸಂಸದರ ಹೇಳಿಕೆ ಪಕ್ಷದ ನಿಲುವಲ್ಲ:
ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ, ‘ಸಂಸದರ ಹೇಳಿಕೆ ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ’ ಎಂದು ಹೇಳುವ ಮೂಲಕ ಅಂತರ ಕಾಯ್ದುಕೊಂಡಿದೆ.
MP Shri Ananth Kumar Hegde's remarks on the Constitution are his personal views and do not reflect the party's stance. @BJP4India reaffirms our unwavering commitment to uphold the nation's Constitution and will ask for an explanation from Shri Hegde regarding his comments.
— BJP Karnataka (@BJP4Karnataka) March 10, 2024
‘ಸಂಸದರಾದ ಅನಂತ್ ಕುಮಾರ್ ಹೆಗಡೆಯವರ ಸಂವಿಧಾನದ ಬಗ್ಗೆ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳಾಗಿದ್ದು, ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯು ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಮತ್ತು ಹೆಗಡೆಯವರ ಅಭಿಪ್ರಾಯಗಳಿಗೆ ಸಂಬಂಧಿಸಿದಂತೆ ವಿವರಣೆಯನ್ನು ಕೇಳುತ್ತೇವೆ’ ಎಂದು ಹೇಳಿದೆ.
ಇದನ್ನೂ ಓದಿ; ‘ಸಂವಿಧಾನ ಬದಲಾವಣೆ’ ಹೇಳಿಕೆ; ಹೆಗಡೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ, ಎಂಪಿ ಟಿಕೆಟ್ ಸಿಗುವುದು ಅನುಮಾನ!


