Homeಮುಖಪುಟಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ಮುಸ್ಲಿಂ ಲೀಗ್

ಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ಮುಸ್ಲಿಂ ಲೀಗ್

- Advertisement -
- Advertisement -

ಕೇಂದ್ರ ಸರಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ಕೋರಿ ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದೆ.

ಕೇಂದ್ರ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ಕುರಿತು ಅಧಿಸೂಚನೆ ಹೊರಡಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಈ ಕಾನೂನಿನ ಪ್ರಯೋಜನದಿಂದ ವಂಚಿತರಾದ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಕಾನೂನು ಮತ್ತು ನಿಬಂಧನೆಗಳನ್ನು ತಡೆಹಿಡಿಯಬೇಕು ಎಂದು IUML ಅರ್ಜಿಯಲ್ಲಿ ಆಗ್ರಹಿಸಿದೆ.

ಯೂನಿಯನ್ ಮುಸ್ಲಿಂ ಲೀಗ್ ತನ್ನ ಅರ್ಜಿಯಲ್ಲಿ, CAA ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿದೆ, ವಿಶೇಷವಾಗಿ ಮುಸ್ಲಿಮರ ವಿರುದ್ಧವಾಗಿದೆ ಎಂದು ವಾದಿಸಿದೆ. ಈ ತಿದ್ದುಪಡಿಯನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 2020ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಸಿಎಎಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 200ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳಲ್ಲಿ ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲಾ ಮತ್ತು ಮಹುವಾ ಮೊಯಿತ್ರಾ ಮತ್ತು ರಾಜಕೀಯ ಸಂಘಟನೆಗಳಾದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ಡಿಎಂಕೆ, ಅಸೋಮ್ ಗಣ ಪರಿಷತ್ (ಎಜಿಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಅಸ್ಸಾಂ), ಮುಸ್ಲಿಂ ವಿದ್ಯಾರ್ಥಿಗಳ ಒಕ್ಕೂಟಗಳ (ಅಸ್ಸಾಂ) ಅರ್ಜಿಗಳು ಕೂಡ ಸೇರಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಸಿಎಎ ಅಡಿಯಲ್ಲಿ ಪೌರತ್ವ ನೀಡುವ ಸರ್ಕಾರದ ನಿರ್ಧಾರವು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಡಿಸೆಂಬರ್ 11, 2019ರಂದು ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ CAA ಭಾರತದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ದೆಹಲಿ ಪ್ರತಿಭಟನೆಯ ಕೇಂದ್ರ ಬಿಂದುವಾಗಿತ್ತು. ಅಲ್ಲಿ ತಿಂಗಳುಗಳ ಕಾಲ ಪ್ರತಿಭಟನೆಗಳು ನಡೆದವು, ವಿಶೇಷವಾಗಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಶಾಹೀನ್ ಬಾಗ್ ಪ್ರದೇಶಗಳಲ್ಲಿ ವ್ಯಾಪಕವಾದ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗಳ ಜೊತೆಗೆ, CAA ಕೋಮು ಉದ್ವಿಗ್ನತೆಗೆ ಕಾರಣವಾಗಿದೆ, 2020ರ ಆರಂಭದಲ್ಲಿ ಈಶಾನ್ಯ ದೆಹಲಿಯಲ್ಲಿ ಹಿಂಸಾತ್ಮಕ ಗಲಭೆಗಳು ನಡೆದಿದೆ.  ಈ ವೇಳೆ 100ಕ್ಕೂ ಅಧಿಕ ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದಾದ ಬಳಿಕ ಸಿಎಎ ಜಾರಿಯಿಂದ ಕೇಂದ್ರ ಸರಕಾರ ಹಿಂದೆ ಸರಿದಿತ್ತು. ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಎಯನ್ನು ಜಾರಿಗೊಳಿಸಲಾಗಿದೆ.

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು.

ಸಿಎಎ ನಿಯಮಗಳನ್ನು ಅಧಿಸೂಚನೆ ಹೊರಡಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದು,  ಬಿಜೆಪಿಯು ಸಮಾಜವನ್ನು ವಿಭಜಿಸಲು ಮತ್ತು ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಇದನ್ನು ಓದಿ: CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...