HomeUncategorizedಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

- Advertisement -
- Advertisement -

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್‌ ಇಂದು ( ಮಾ.12) ಬಿಡುಗಡೆ ಮಾಡಿದೆ.

ನಾವು ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಕೇಂದ್ರ ಚುನಾವಣಾ ಸಮಿತಿಯ ಸಭೆ ಬಳಿಕ ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

43 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 10 ಸಾಮಾನ್ಯ ವರ್ಗ, 13 ಒಬಿಸಿ, 10 ಎಸ್ ಸಿ, 9 ಎಸ್ ಟಿ ಮತ್ತು ಒಬ್ಬರು ಮುಸ್ಲಿಂ ಅಭ್ಯರ್ಥಿ ಸೇರಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ಎರಡನೇ ಪಟ್ಟಿಯಲ್ಲಿ ಮಧ್ಯಪ್ರದೇಶದ ಚಿಂದ್ವಾರದಿಂದ ಮಾಜಿ ಸಿಎಂ ಕಮಲ್ ನಾಥ್ ಅವರ ಪುತ್ರ ನಕುಲ್, ರಾಜಸ್ಥಾನದ ಜಲೋರ್ ನಿಂದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್, ಅಸ್ಸಾಂನ ಜೋರ್ಹಟ್ ನಿಂದ ಗೌರವ್ ಗೊಗೋಯ್, ರಾಜಸ್ಥಾನದ ಚುರುನಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ರಾಹುಲ್ ಕಾಸ್ವಾ ಅವರಿಗೆ ಟಿಕೆಟ್ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಗಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...