Homeಮುಖಪುಟಖಾಸಿಮ್ ಖುರೇಷಿ ಗುಂಪು ಹತ್ಯೆ ಪ್ರಕರಣ: 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಖಾಸಿಮ್ ಖುರೇಷಿ ಗುಂಪು ಹತ್ಯೆ ಪ್ರಕರಣ: 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರಪ್ರದೇಶದ ಹಾಪುರದಲ್ಲಿ 2018ರಲ್ಲಿ ಗೋಹತ್ಯೆ ನೆಪದಲ್ಲಿ ನಡೆದಿದ್ದ ಗುಂಪುಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 10 ಜನರನ್ನು ದೋಷಿ ಎಂದು ಸ್ಥಳೀಯ ನ್ಯಾಯಾಲಯವು ಘೋಷಿಸಿದ್ದು, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಶ್ವೇತಾ ದೀಕ್ಷಿತ್ ಅವರ ಪೀಠ ಈ ಕುರಿತು ವಿಚಾರಣೆಯನ್ನು ನಡೆಸಿ ಮಹತ್ವದ ತೀರ್ಪನ್ನು ನೀಡಿದ್ದು, ಗೋಹತ್ಯೆಯ ಸುಳ್ಳು ವದಂತಿಯ ಹಿನ್ನೆಲೆ 45 ವರ್ಷದ ಖಾಸಿಮ್‌ನನ್ನು ಹತ್ಯೆ ಮಾಡಿ ಸಮಯದೀನ್(62) ಮೇಲೆ ಹಲ್ಲೆ ನಡೆಸಿದ 10 ಜನರನ್ನು ದೋಷಿ ಎಂದು ತೀರ್ಪು ನೀಡಿದೆ.

ಸರ್ಕಾರಿ ವಕೀಲ ವಿಜಯ್ ಚೌಹಾಣ್ ಅವರ ಪ್ರಕಾರ, ಧೌಲಾನಾದ ಬಜೈದಾ ಗ್ರಾಮದ ರಾಕೇಶ್, ಹರಿಓಮ್, ಯುಧಿಷ್ಠಿರ್, ರಿಂಕು, ಕರನ್‌ಪಾಲ್, ಮನೀಶ್, ಲಲಿತ್, ಸೋನು, ಕಪ್ತಾನ್ ಮತ್ತು ಮಂಗೇರಾಮ್‌ಗೆ ಜೀವಾವಧಿ ಶಿಕ್ಷೆ ಮತ್ತು ತಲಾ 58,000ರೂ.ದಂಡವನ್ನು ವಿಧಿಸಲಾಗಿದೆ. 302/149, 307/149, 147, 148 ಮತ್ತು 153A IPCಯಡಿ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ರೂ. ತಲಾ 58,000/ ದಂಡ ವಿಧಿಸಿದೆ.

ಸಂತ್ರಸ್ತರು ಆರೋಪಿಗಳ ವಿರುದ್ಧ ಯಾವುದೇ ದ್ವೇಷವನ್ನು ಹೊಂದಿಲ್ಲ ಮತ್ತು ನ್ಯಾಯವನ್ನು ಮಾತ್ರ ಕೋರುತ್ತಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಇದಲ್ಲದೆ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನು ಕೂಡ ವಿಧಿಸದಂತೆ ನ್ಯಾಯಾಲಯವನ್ನು ಕೋರಿದ್ದರು.

ಜೂನ್ 2018ರಲ್ಲಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಬಜೈದಾ ಗ್ರಾಮದ ನಿವಾಸಿ ಖಾಸಿಮ್ ಖುರೇಷಿ ಅವರನ್ನು ಗುಂಪೊಂದು ಹತ್ಯೆ ಮಾಡಿತ್ತು ಮತ್ತು ಅವರ ಜೊತೆಗಿದ್ದ ಸಮಯದೀನ್ ಮೇಲೆ ಹಲ್ಲೆ ನಡೆಸಿತ್ತು.  ಘಟನೆಗೆ ಅಪಘಾತದ ಆಯಾಮವನ್ನು ನೀಡುವ ಮೂಲಕ ಪೊಲೀಸರು ಸುಳ್ಳು ಎಫ್‌ಐಆರ್ ದಾಖಲಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಸಮಯದೀನ್ ನ್ಯಾಯಕ್ಕೆ ಆಗ್ರಹಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ನಂತರ ತನಿಖೆಯನ್ನು ಸರಿಯಾಗಿ ನಡೆಸಲಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.

ಸಮಯದೀನ್ 2018ರಲ್ಲಿ ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು ಮತ್ತು ನ್ಯಾಯಾಲಯವು ಸೆಕ್ಷನ್ 164 CrPC ಅಡಿಯಲ್ಲಿ ಭದ್ರತೆ ಮತ್ತು ಹೇಳಿಕೆಯನ್ನು ದಾಖಲಿಸಲು ನಿರ್ದೇಶನ ನೀಡಿತ್ತು ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ಮೀರತ್ ವಲಯ ಐಜಿಗೆ ವಹಿಸಿತ್ತು.

ಇದನ್ನು ಓದಿ: ‘ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...