Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ 'ಮಹಾಲಕ್ಷ್ಮಿ' ಯೋಜನೆ ಸೇರಿ...

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ ‘ಮಹಾಲಕ್ಷ್ಮಿ’ ಯೋಜನೆ ಸೇರಿ ಹಲವು ಗ್ಯಾರೆಂಟಿಗಳ ಘೋಷಣೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ಪಕ್ಷವು ಬುಧವಾರ ಮಹಿಳೆಯರಿಗೆ ಭರ್ಜರಿ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದು, ಬಡ ಕುಟುಂಬದ ಮಹಿಳಾ ಸದಸ್ಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ಗ್ಯಾರೆಂಟಿಗಳಲ್ಲಿ ಸೇರಿದೆ.

ಮಹಾರಾಷ್ಟ್ರದ ಧುಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ನವದೆಹಲಿಯಿಂದಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದಾರೆ. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಗ್ಯಾರೆಂಟಿಗಳಲ್ಲಿ ಸೇರಿದೆ.

ಕಳೆದ 10 ವರ್ಷಗಳ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಏನೂ ಸಿಕ್ಕಿಲ್ಲ, ಬೆಲೆ ಏರಿಕೆ, ನಿರುದ್ಯೋಗ, ಭದ್ರತೆ ಮತ್ತು ಸುರಕ್ಷತೆಯಿಂದಾಗಿ ಅವರ ತೊಂದರೆಗಳು ಹೆಚ್ಚಿವೆ ಎಂದು ರಾಹುಲ್‌ ಗಾಂಧಿ ಈ ವೇಳೆ ಹೇಳಿದ್ದಾರೆ.

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ  ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಈ ಮೊದಲು ನಾವು ರೈತ ನ್ಯಾಯ ಮತ್ತು ಯುವ ನ್ಯಾಯವನ್ನು  ಘೋಷಿಸಿದ್ದೇವೆ ಮತ್ತು ನಮ್ಮ ಭರವಸೆಗಳು ಖಾಲಿ ಭರವಸೆಗಳು ಮತ್ತು ಹೇಳಿಕೆಗಳಲ್ಲ. ನಾವು ಏನು ಹೇಳುತ್ತೇವೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ, ನಾವು ಪ್ರಣಾಳಿಕೆಗಳನ್ನು ತಯಾರಿಸುತ್ತಿದ್ದೇವೆ ಮತ್ತು ಆ ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಖರ್ಗೆಈ ವೇಳೆ ಹೇಳಿದ್ದಾರೆ.

ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿಯನ್ನು ನಡೆಸುವ ಬಗ್ಗೆ ಈ ಮೊದಲು ಭರವಸೆಯನ್ನು ನೀಡಿತ್ತು. ದೇಶದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಅರಣ್ಯ ಹಕ್ಕು ಅಧಿನಿಯಮದ ಪರಿಣಾಮಕಾರಿ ಅನುಷ್ಠಾನ, ಮೋದಿ ಸರಕಾರ ಅರಣ್ಯ ಸಂರಕ್ಷಣೆ ಮತ್ತು ಭೂಮಿ ಅಧಿಗ್ರಹಣ ಅಧಿನಿಯಮಗಳಲ್ಲಿ ಮಾಡಿರುವ ಎಲ್ಲಾ ತಿದ್ದುಪಡಿಗಳ ವಾಪಸ್, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯಾವ ಬಸ್ತಿಗಳಲ್ಲಿ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚು ಇದೆಯೋ ಆ ಬಸ್ತಿಗಳನ್ನು ಪರಿಶಿಷ್ಟ ಪ್ರದೇಶ ಎಂದು ಘೋಷಣೆ, PESA  ಪ್ರಕಾರ ರಾಜ್ಯಗಳಲ್ಲಿ ಕಾನೂನು, ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಸೇರಿ ಹಲವು ಭರವಸೆಗಳನ್ನು ಈ ಮೊದಲು ಕಾಂಗ್ರೆಸ್‌ ನೀಡಿತ್ತು.

ಇದನ್ನು ಓದಿ:  ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...