Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆಯನ್ನು ಮಾಡಿದ್ದು, ಏಪ್ರಿಲ್ 1, 2019 ಮತ್ತು ಫೆಬ್ರವರಿ 15, 2024ರ ನಡುವೆ 22,217 ಬಾಂಡ್‌ಗಳನ್ನು ಖರೀದಿಸಲಾಗಿದೆ ಮತ್ತು ಈ ಅವಧಿಯಲ್ಲಿ ರಿಡೀಮ್ ಮಾಡಿದ ಒಟ್ಟು ಬಾಂಡ್‌ಗಳ ಸಂಖ್ಯೆ 22,030 ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರಾದ ದಿನೇಶ್ ಕುಮಾರ್ ಖಾರಾ ಬುಧವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಏಪ್ರಿಲ್ 1, 2019ರಿಂದ ಖರೀದಿಸಲಾದ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

ಎಸ್‌ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅವರ ಅಫಿಡವಿಟ್‌ನ ಪ್ರಕಾರ, ಇಸಿಐಗೆ ಒದಗಿಸಲಾದ ದಾಖಲೆಗಳು ಎರಡು ಸೆಟ್ ಮಾಹಿತಿಯನ್ನು ಒಳಗೊಂಡಿವೆ  ಒಂದರಲ್ಲಿ ರಾಜಕೀಯ ಪಕ್ಷಗಳ ಹೆಸರುಗಳು ಮತ್ತು  ಬಾಂಡ್‌ಗಳ ವಿವರಗಳು ಮತ್ತು ಇನ್ನೊಂದು ಖರೀದಿದಾರರ ವಿವರಗಳನ್ನು ಒಳಗೊಂಡಿದೆ. ಏಪ್ರಿಲ್ 1, 2019 ಮತ್ತು ಫೆಬ್ರವರಿ 15, 2024ರ ನಡುವೆ 22,217 ಬಾಂಡ್‌ಗಳನ್ನು ಖರೀದಿಸಲಾಗಿದೆ ಮತ್ತು ಈ ಅವಧಿಯಲ್ಲಿ ರೀಡೀಮ್ ಮಾಡಿದ ಒಟ್ಟು ಬಾಂಡ್‌ಗಳ ಸಂಖ್ಯೆ 22,030 ಎಂದು ಅಫಿಡವಿಟ್ ಹೇಳಿದೆ. 15 ದಿನಗಳ ಅವಧಿಯೊಳಗೆ ರಿಡೀಮ್ ಮಾಡದ 187 ಬಾಂಡ್‌ಗಳನ್ನು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ವರ್ಗಾಯಿಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸರಿಯಾದ ದಾಖಲೆಗಳನ್ನು ಹೊಂದಿದೆ, ಅದರಲ್ಲಿ ಚುನಾವಣಾ ಬಾಂಡ್ ಖರೀದಿಯ ದಿನಾಂಕ, ಮುಖಬೆಲೆ ಮತ್ತು ಖರೀದಿದಾರರ ಹೆಸರನ್ನು ಉಲ್ಲೇಖಿಸಲಾಗಿದೆ. ಎನ್‌ಕ್ಯಾಶ್‌ಮೆಂಟ್ ದಿನಾಂಕ ಮತ್ತು ಎನ್‌ಕ್ಯಾಶ್ ಮಾಡಿದ ಬಾಂಡ್‌ಗಳ ಮುಖಬೆಲೆಗಳನ್ನು ದಾಖಲಿಸಲಾಗಿದೆ. ಸುಪ್ರೀಂಕೋರ್ಟ್‌ನ ನಿರ್ದೇಶನಗಳನ್ನು ಗೌರವಯುತವಾಗಿ ಅನುಸರಣೆಯ ಭಾಗವಾಗಿ 12.03.2024ರಂದು ವ್ಯವಹಾರದ ಸಮಯ ಮುಗಿಯುವ ಮೊದಲು ಈ ಮಾಹಿತಿಯ ದಾಖಲೆಯನ್ನು ಡಿಜಿಟಲ್ ರೂಪದಲ್ಲಿ (ಪಾಸ್‌ವರ್ಡ್ ಸಂರಕ್ಷಿತ) ECI ಗೆ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳವಾರ ಮುಚ್ಚಿದ ಲಕೋಟೆಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ ಎಂದು ಈ ಪತ್ರವು ಬಹಿರಂಗಪಡಿಸಿದೆ. ಲಕೋಟೆಯು ಎರಡು ಪಾಸ್‌ವರ್ಡ್-ರಕ್ಷಿತ PDF ಫೈಲ್‌ಗಳನ್ನು ಹೊಂದಿರುವ ಪೆನ್ ಡ್ರೈವ್‌ನ್ನು ಒಳಗೊಂಡಿತ್ತು ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಲಾಗಿದೆ.

ಏಪ್ರಿಲ್ 12, 2019ರಿಂದ ಖರೀದಿಸಿದ ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸುಪ್ರೀಂಕೋರ್ಟ್‌ ಈ ಮೊದಲು ಎಸ್‌ಬಿಐಗೆ ನಿರ್ದೇಶನವನ್ನು ನೀಡಿತ್ತು. ಆದರೆ ಎಸ್‌ಬಿಐ ಇದಕ್ಕೆ ಜೂ.30ರವೆರೆಗೆ ಕಾಲಾವಕಾಶ ಕೋರಿ ಮತ್ತೆ ಕೋರ್ಟ್‌ ಮೊರೆ ಹೋಗಿತ್ತು. ಇದು ದೇಶದಲ್ಲಿ ವ್ಯಾಪಕವಾದ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಮಾ.12ರ ಸಂಜೆ ಒಳಗಡೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು.

ಇದನ್ನು ಓದಿ: ಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಪ್ರಿಯಾಂಕ ಖರ್ಗೆ ಸೇರಿ ಐವರು ಸಚಿವರು ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...