HomeUncategorizedತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

ತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ 2010ರಲ್ಲಿ ನಡೆದ ಹಿಂಸಾಚಾರ ಪ್ರಕರಣದ ತೀರ್ಪನ್ನು ನೀಡುವ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಧಾರ್ಮಿಕ ಹಿನ್ನೆಲೆಯನ್ನು ಶ್ಲಾಘಿಸಿ ಮತ್ತು ದೇಶದಲ್ಲಿ ಮತೀಯ ಹಿಂಸಾಚಾರಕ್ಕೆ ಮುಸ್ಲಿಮರನ್ನು ದೂಷಿಸಿದ ನ್ಯಾಯಾಧೀಶ ರವಿ ಕುಮಾರ್‌ ದಿವಾಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಶನ್‌ ಫಾರ್‌ ಜಸ್ಟಿಸ್‌ ( ಎಐಎಲ್‌ಎಜೆ) ಪತ್ರ ಬರೆದಿದೆ.

ಮಾರ್ಚ್‌ 5ರ ಆದೇಶದಲ್ಲಿ ರವಿ ಕುಮಾರ್‌ ದಿವಾಕರ್‌ ಮಾಡಿರುವ ಅನಗತ್ಯ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆಸಬೇಕು ಎಂದು ಎಐಎಲ್‌ಎಜೆ ಕೋರಿದೆ. ಈ ತೀರ್ಪಿನಲ್ಲಿ ನ್ಯಾಯಾಧೀಶರ ಹೇಳಿಕೆಗಳು ಮತ್ತು ತೀರ್ಮಾನಗಳು ವಿವಾದಿತ, ಪಕ್ಷಪಾತದಿಂದ ಕೂಡಿವೆ ಮತ್ತು ಅಸಂವಿಧಾನಿಕವಾಗಿದೆ ಎಂದು ಹೇಳಿದೆ.

ನ್ಯಾಯಾಧೀಶ ದಿವಾಕರ್ ಅವರು ಸಂವಿಧಾನ ಮತ್ತು ಅದರ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯುವ ಕರ್ತವ್ಯಕ್ಕೆ ವಿರುದ್ಧವಾಗಿ “ಬಹು ಸಂಖ್ಯಾತರ ದೃಷ್ಟಿಕೋನಕ್ಕೆ ಸಹಾನುಭೂತಿ” ಪ್ರದರ್ಶಿಸುತ್ತಿದ್ದಾರೆ ಮತ್ತು “ಸಾಂವಿಧಾನಿಕ ನೈತಿಕತೆಯ ಕಡೆಗಣನೆ” ಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಎಐಎಲ್‌ಎಜೆ ಆರೋಪಿಸಿದೆ. ಇದಕ್ಕೆ ಶಿಕ್ಷೆ ವಿಧಿಸದಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಬರೇಲಿಯ ತ್ವರಿತಗತಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿರುವ ದಿವಾಕರ್‌ ಮಾರ್ಚ್‌ 5ರಂದು ಈ ತೀರ್ಪು ನೀಡಿದ್ದರು. ಬರೇಲಿಯಲ್ಲಿ 2010ರಲ್ಲಿ ನಡೆದ ಮತೀಯ ಹಿಂಸಾಚಾರ ಪ್ರಕರಣದಲ್ಲಿ ಖ್ಯಾತ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನ ತೌಖೀರ್‌ ರಝಾ ಖಾನ್‌ ಅವರ ಹೆಸರನ್ನು ಈ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಸೇರಿಸಿ ಅವರಿಗೆ ಮಾರ್ಚ್‌ 11ರಂದು ಹಾಜರಾಗುವಂತೆ ಸೂಚಿಸಿದ್ದರು. ಅವರನ್ನು ದಂಗೆಗಳ ಪ್ರಮುಖ ಸಂಚುಕೋರ ಎಂದು ನ್ಯಾಯಾಧೀಶರು ಬಣ್ಣಿಸಿದ್ದರು.

ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿ, ಧಾರ್ಮಿಕ ವ್ಯಕ್ತಿಯೊಬ್ಬರು ಅಧಿಕಾರದ ಗದ್ದುಗೆಯಲ್ಲಿರುವುದಕ್ಕೆ ಅವರು ದೊಡ್ಡ ಉದಾಹರಣೆ ಎಂದಿದ್ದರು.

ಈ ಹಿಂದೆ ವಾರಣಾಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಿವಾದಿತ ಆದೇಶ ನೀಡಿದ್ದ ದಿವಾಕರ್‌, ಮಾರ್ಚ್‌ 5ರ ತೀರ್ಪಿನಲ್ಲಿ ಹೇಳಿಕೆ ನೀಡಿ ರಾಜಕೀಯ ಪಕ್ಷಗಳು ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುವುದರಿಂದ ದಂಗೆಗಳು ನಡೆಯುತ್ತಿವೆ ಎಂದಿದ್ದರಲ್ಲದೆ ಜ್ಞಾನವಾಪಿ ಪ್ರಕರಣ ಉಲ್ಲೇಖಿಸಿ ಮುಸ್ಲಿಂ ಗುಂಪುಗಳಿಂದ ಬೆದರಿಕೆ ಎದುರಿಸಿ ತಾವು ಮತ್ತು ತಮ್ಮ ಕುಟುಂಬ ಭಯದಲ್ಲಿ ಜೀವಿಸುವಂತಾಗಿತ್ತು ಎಂದಿದ್ದರು.

ನ್ಯಾಯಾಧೀಶರು ನೀಡಿದ ಹೇಳಿಕೆಗಳು ‘ಮುಸ್ಲಿಮ್ ಸಮುದಾಯದ ಬಗ್ಗೆ ತಪ್ಪಾದ ಮತ್ತು ಮತಾಂಧ ಭಾವನೆಯನ್ನು ಮೂಡಿಸಿದೆ. ಮುಸ್ಲಿಂ ಸಮುದಾಯದ ವಿರುದ್ಧ ಸ್ಪಷ್ಟವಾದ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡುವ ಮೂಲಕ ನ್ಯಾಯಾಧೀಶರು ನ್ಯಾಯಾಂಗ ನಡವಳಿಕೆಯ ಮೂಲಭೂತ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿದ್ದಾರೆ ಎಂದು ಎಐಎಲ್‌ಎಜೆ ಖಂಡನೆ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...