Homeಫ್ಯಾಕ್ಟ್‌ಚೆಕ್Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1,600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲಿಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ವಿಡಿಯೋದಲ್ಲಿ ಉಲ್ಲೇಖಿಸಿರುವ ‘ರಾಣಿ ಕಾ ಹಜಿರಾ’ ಎಂಬ ಕೀ ವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಕಿಪೀಡಿಯದಲ್ಲಿ ‘ರಾಣಿ ನೋ ಹಾಜಿರೋ’ ಎಂಬ ಶೀರ್ಷಿಕೆಯಲ್ಲಿ ಮಾಹಿತಿ ದೊರೆತಿದೆ. ಅದನ್ನು ಓದಿ ನೋಡಿದಾಗ, ‘ರಾಣಿ ನೋ ಹಾಜಿರೋ’ ಹಿಂದೂ ದೇವಾಲಯವಲ್ಲ. ಇದೊಂದು ಐತಿಹಾಸಿಕ ಕಟ್ಟಡ ಎಂದು ಗೊತ್ತಾಗಿದೆ. ರಾಣಿ ನೋ ಹಾಜಿರೋ ಗುಜರಾತ್‌ನ ಸುಲ್ತಾನ ಒಂದನೇ ಅಹ್ಮದ್ ಷಾ ಅವರ ಸಮಾಧಿಯ ಪೂರ್ವ ಭಾಗದ ಮಾನೆಕ್ ಚೌಕ್ ಬಳಿ ಇದೆ. ಇದು ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ. ಪ್ರವಾಸಿ ತಾಣವಾಗಿರುವ ಈ ಸ್ಥಳ ಈಗ ಪ್ರಸಿದ್ಧ ಮಾರುಕಟ್ಟೆಯಾಗಿ ಬದಲಾಗಿದ್ದು, ರಸ್ತೆಬದಿಯ ಆಹಾರಗಳಿಗೆ ಹೆಸರು ಮಾಡಿದೆ.

ವಿಡಿಯೋದಲ್ಲಿ ಕಾಣುವಂತೆ ತೆರವು ಕಾರ್ಯಾಚರಣೆಯ ಬಗ್ಗೆ ಪರಿಶೀಲಿಸಿದಾಗ, “ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದು ಹಾಕಿದ ದೃಶ್ಯ ಅದಾಗಿದೆ ಎಂದು ತಿಳಿದು ಬಂದಿದೆ.

ಇಂಡಿಯಾ ಟುಡೇ ಮಲಯಾಳಂ ಫೆ.8,2024ರಂದು ವೈರಲ್ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿದ್ದು, “ಅಹ್ಮದಾಬಾದ್‌ನ ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕುತ್ತಿದೆ” ಎಂದು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿಸಿದೆ.

ಮಲಯಾಳಂ ಸುದ್ದಿಯ ಲಿಂಕ್ ಇಲ್ಲಿದೆ 

ನಾವು ಗಮನಿಸಿದಂತೆ ವೈರಲ್ ವಿಡಿಯೋದಲ್ಲಿ ಕಟ್ಟಡದ ಕುರಿತ ಮಾಹಿತಿ ಫಲಕದಲ್ಲಿ ಬಳಿ ಗ್ರಾನೈಟ್‌ನಲ್ಲಿ ‘ರಾಣಿಯ ಸಮಾಧಿ’ ಎಂಬ ಫಲಕದಲ್ಲಿ ಈ ಕಟ್ಟಡ ಸುಲ್ತಾನ್ ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ ಎಂದು ಬರೆದಿರುವುದನ್ನು ಕಾಣಬಹುದು.

ಅಲ್ಲದೆ, ಹಳೆಯ ಅಹಮದಾಬಾದ್‌ನ ಪ್ರಸಿದ್ಧ ವೃತ್ತವಾದ ಮಾನೆಕ್ ಚೌಕ್ ಜನನಿಬೀಡ ಪ್ರದೇಶವಾಗಿದ್ದು ಇಲ್ಲಿನ ಅಕ್ರಮ ಅಂಗಡಿ-ಮುಗ್ಗಟ್ಟುಗಳಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಮತ್ತು ಐತಿಹಾಸಿಕ ಕಟ್ಟಡಕ್ಕೂ ಸಹ ಹಾನಿ ಆಗುವ ಸಂಭವದಿಂದ ಗುಜರಾತ್‌ ಹೈಕೋರ್ಟಿನ ಆದೇಶದಂತೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

15 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಐತಿಹಾಸಿಕ ಸ್ಮಾರಕವು ಹಿಂದೂ, ಜೈನ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯಾಗಿದೆ ಎಂದು ಅಹಮದಾಬಾದ್ ಪ್ರವಾಸೋದ್ಯಮ ವೆಬ್‌ಸೈಟ್‌ ಹೇಳಿಕೊಂಡಿದೆ.

ಇದನ್ನೂ ಓದಿ : Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...