ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ವಿದ್ವಾಂಸರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾಗಿ ಉಮರ್ ಯುಎಚ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಅವರು ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರಿನ ಮಾನಸ ನೇಮಕಗೊಂಡಿದ್ದಾರೆ.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ನಟ, ರಂಗಭೂಮಿ ಸಂಘಟಕ ಡಾ. ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಕೃಪಾ ಫಡಕಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿ.ರಮೇಶ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ.ಸ.ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾತ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು.ಎಚ್. ನೇಮಕಗೊಂಡಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ, ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಪ್ರೊ.ದುರ್ಗಾದಾಸ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಕೊಂಡ ಮಹೇಶ ನಾಚಯ್ಯ ನೇಮಕವಾಗಿದ್ದಾರೆ.
ಆಯಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಲಾವಿದರು, ಬರಹಗಾರರು, ಉಪನ್ಯಾಸಕರು ಮತ್ತು ಸಂಘಟಕರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ; ‘ಮಿಥ್ ವರ್ಸಸ್ ರಿಯಾಲಿಟಿ..’; ಸುಳ್ಳು ಸುದ್ದಿಗಳ ಪತ್ತೆಗೆ ಚುನಾವಣಾ ಆಯೋಗದಿಂದ ಹೊಸ ಯೋಜನೆ


