Homeಫ್ಯಾಕ್ಟ್‌ಚೆಕ್Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ...

Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ‘ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ’ ನಡೆಸಿದೆ ಎಂಬ ಸುದ್ದಿ ನಿನ್ನೆ (ಮಾ.18) ಸಂಜೆಯಿಂದ ಹಬ್ಬಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಕನ್ನಡದ ಅನೇಕ ಮುಖ್ಯವಾಹಿನಿ ಮಾಧ್ಯಮಗಳು, ಬಿಜೆಪಿ ಪಕ್ಷ, ಅದರ ನಾಯಕರು ಮತ್ತು ಕೆಲ ಪತ್ರಕರ್ತರು ವಿಡಿಯೋ ಹಂಚಿಕೊಂಡು ಇದೇ ಪ್ರತಿಪಾದನೆಯನ್ನು ಮಾಡಿದ್ದಾರೆ.

ಕನ್ನಡ ಮಾಧ್ಯಮಗಳಾದ ಸುವರ್ಣ ನ್ಯೂಸ್, ವಿಸ್ತಾರ ನ್ಯೂಸ್, ಕನ್ನಡ ಪ್ರಭ, ಕನ್ನಡ ದುನಿಯಾ ಹಾಗೂ ಇತರ ವೆಬ್‌ಸೈಟ್‌ಗಳಲ್ಲಿ ಈ ಸುದ್ದಿ ಪ್ರಕಟಗೊಂಡಿದೆ.

‘ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಅಂತಾ ಯುವಕನಿಗೆ ಥಳಿತ: ಎಫ್‌ಐಅರ್‌ಗೆ ಪೊಲೀಸರು ಹಿಂದೇಟು? ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಸುವರ್ಣ ನ್ಯೂಸ್‌, “ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಆರೋಪ: ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ಪ್ರಭ, “ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘Assault Case : ಮೊಬೈಲ್‌ ಶಾಪ್‌ನಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್‌; ಯುವಕನ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದ ಪುಂಡರು’ ಎಂಬ ಶೀರ್ಷಿಕೆಯ ಸುದ್ದಿ ಪ್ರಕಟಿಸಿರುವ ವಿಸ್ತಾರ ನ್ಯೂಸ್, “Assault Case : ನಮಾಜ್‌ ಮಾಡುವಾಗ ಭಕ್ತಿಗೀತೆ ಹಾಕ್ತಿಯಾ ಎಂದು ಕಿರಿಕ್‌ ತೆಗೆದ ಕೆಲ ಪುಂಡ ಪೋಕರಿಗಳು ಯುವಕನನ್ನು ಎಳೆದಾಡಿ ಮನಬಂದಂತೆ ಹಲ್ಲೆ ಮಾಡಿದ್ದರು. ಇದೀಗ ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ಬೆಂಗಳೂರು: ಮೊಬೈಲ್ ಅಂಗಡಿ ಮಾಲೀಕನಿಗೆ ಮನಸ್ಸೋ ಇಚ್ಚೆ ಥಳಿಸಿದ ಗೂಂಡಾಗಳು’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ದುನಿಯಾ ವೆಬ್‌ಸೈಟ್‌, ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದಾರೆ. ಮೊಬೈಲ್ ಅಂಗಡಿ ಮಾಲೀನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ’ ಎಂದು ವರದಿ ಮಾಡಿದೆ.


ಸುದ್ದಿ ಲಿಂಕ್ ಇಲ್ಲಿದೆ 

“ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯನವರೇ? ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಡಿಯೋ ಜೊತೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಆಶೋಕ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್‌ನ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌.

ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ಬಿಜೆಪಿ ಕರ್ನಾಟಕ ವಿಡಿಯೋ ಜೊತೆ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

“ಅಝಾನ್ ಸಮಯದಲ್ಲಿ ಜೋರಾಗಿ ಸಂಗೀತ ಹಾಕಿದ್ದ ಅಂಗಡಿಯವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಹಾಗಾದರೆ, ದಿನಕ್ಕೆ 5 ಬಾರಿ ಜೋರಾಗಿ ಆಝಾನ್ ಕೂಗಬಹುದೇ? ಈ ರಂಝಾನ್ ಒಳ್ಳೆಯ ರಂಝಾನ್ ಆಗಲಿ ಎಂದು ನಾನು ಬಯಸುತ್ತೇನೆ. ಸಿದ್ದಣ್ಣ ಲೇಔಟ್ ಬಳಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ” ಎಂದು ಇಂಡಿಯಾ ಟುಡೇಯ ನಿರೂಪಕಿ ನಬೀಲಾ ಜಮಾಲ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಗಮನಿಸಿದ ಬಳಿಕ ನಾನುಗೌರಿ.ಕಾಂ ಪ್ರಕರಣದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಿನಾಂಕ 17 ಮಾರ್ಚ್‌ 2024ರಂದು ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪ್ರತಿ ನಮಗೆ ಲಭ್ಯವಾಗಿದೆ.

ಎಫ್‌ಐಆರ್ ಪ್ರತಿಯಲ್ಲಿ ಮುಖೇಶ್ ಎಂಬವರು ಹಲ್ಲೆ ಘಟನೆ ಸಂಬಂಧ ದೂರು ನೀಡಿದ್ದು, ನಂ.65 ಕೃಷ್ಣ ಟೆಲಿಕಾಂ ಶಾಪ್ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ಬೆಂಗಳೂರು ನಗರ ಇಲ್ಲಿ, ಸಂಜೆ 6 ಗಂಟೆಯಿಂದ 6:40ರ ನಡುವೆ ಘಟನೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಎಫ್‌ಐಆರ್‌ ಪ್ರತಿ

ಎಫ್‌ಐಆರ್‌ನಲ್ಲಿ ಹೇಳಿರುವಂತೆ, ‘ದೂರುದಾರ ಮುಖೇಶ್ ಅವರು ದಿನಾಂಕ 17 ಮಾರ್ಚ್ 2024ರಂದು ಸಂಜೆ 6:25ಕ್ಕೆ ಜುಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ನಂ.25 ಕೃಷ್ಣ ಟೆಲಿಕಾಂ ಅಂಗಡಿಯಲ್ಲಿರುವಾಗ ಸುಲೇಮಾನ್, ಶಾನವಾಜ್, ರೋಹಿತ್, ಡ್ಯಾನಿಶ್, ತರುಣಾ ಹಾಗೂ ಇತರರು ಸೇರಿಕೊಂಡು ಅಂಗಡಿಯ ಬಳಿ ಬಂದು “ಜೋರಾಗಿ ಸ್ಪೀಕರ್ ಏಕೆ ಹಾಕಿದ್ದೀಯ? ನಮಗೆ ತೊಂದರೆಯಾಗುತ್ತಿದೆ” ಎಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಏಕಾಏಕಿ ಶಾನವಾಜ್ ಕೈಯಿಂದ ಮುಖೇಶ್ ಅವರ ಮುಖಕ್ಕೆ ಗುದ್ದಿದ್ದಾನೆರ. ನಂತರ ಸುಲೇಮಾನ್ ಕೈಗಳಿಂದ ಹೊಡೆಯಲು ಶುರು ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ನಂತರ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆ ಎಳೆದು ಕೆಳಗೆ ಬೀಳಿಸಿ ರಕ್ತಸ್ರಾವ ಆಗುವ ರೀತಿಯಲ್ಲಿ ಹೊಡೆದಿದ್ದಾರೆ’ ಎಂದು ತಿಳಿಸಲಾಗಿದೆ.

ಎಫ್‌ಐಆರ್‌ ಪ್ರತಿ

ಮುಖೇಶ್ ಅವರು ಕೈ ಬರಹದಲ್ಲಿ ಕೊಟ್ಟಿರುವ ದೂರಿನಲ್ಲೂ “ಏಕೆ ಸೌಂಡ್ ಜೋರಾಗಿ ಹಾಕಿರುವೆ ನಮಗೆ ತೊಂದೆಯಾಗುತ್ತದೆ ಎಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಸ್ಪಷ್ಟವಾಗಿ ಬರೆದಿದ್ದಾರೆ.

ಹಲ್ಲೆಗೊಳಗಾದ ಮುಖೇಶ್ ಅವರು ನೀಡಿರುವ ಕೈ ಬರಹದ ದೂರಿನ ಪ್ರತಿ

ನಮಗೆ ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಿಲ್ಲ. ಎಫ್‌ಐಆರ್ ಪ್ರತಿಯಲ್ಲಿ ಆರು ಆರೋಪಿಗಳನ್ನು ಉಲ್ಲೇಖಿಸಲಾಗಿದ್ದು, ಈ ಪೈಕಿ ಐವರ ಹೆಸರಿದೆ. ಅದರಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ.

ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ನೀಡಿರುವ ದೂರಿನ ಪ್ರತಿ ಆಧಾರಲ್ಲಿ ಹೇಳುವುದಾದರೆ ಇದು ಲೌಡ್ ಸ್ಪೀಕರ್ ಇಟ್ಟಿರುವುದಕ್ಕಾಗಿ ನಡೆದ ಹಲ್ಲೆಯೇ ಹೊರತು, ನಮಾಝ್ ವೇಳೆ ಹನುಮಾನ್ ಚಾಲೀಸಾ ಇಟ್ಟಿದ್ದಕ್ಕೆ ಹಿಂದೂ ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ.

ಇದನ್ನೂ ಓದಿ : Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...