Homeಮುಖಪುಟಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

- Advertisement -
- Advertisement -

ಹಿಮಾಚಲ ಪ್ರದೇಶ ರಾಜ್ಯ ವಿಧಾನಸಭೆಯಿಂದ ತಮ್ಮನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಆರು ಬಂಡಾಯ ಶಾಸಕರು ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 12) ನೋಟಿಸ್ ಜಾರಿ ಮಾಡಿದೆ. ಆದರೆ, ಅವರ ಅನರ್ಹತೆಗೆ ತಡೆ ನೀಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದೇ ವೇಳೆ, ಇತ್ತೀಚೆಗೆ ಘೋಷಿಸಲಾದ ಉಪಚುನಾವಣೆಗಳನ್ನು ರದ್ದುಗೊಳಿಸಬೇಕೆ? ಎಂಬ ಬಗ್ಗೆ ಪರಿಶೀಲಿಸಲು ನ್ಯಾಯಾಲಯ ಒಪ್ಪಿಕೊಂಡಿದೆ.

ಆರು ಮಂದಿ ಕಾಂಗ್ರೆಸ್‌ ಶಾಸಕರು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಅಡ್ಡ ಮತದಾನ ಮಾಡುವ ಮೂಲಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ತಮ್ಮದೇ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದರು. ಬಳಿಕ ಫೆಬ್ರವರಿಯಲ್ಲಿ ನಡೆದ ಬಜೆಟ್ ಮತದಾನದಿಂದಲೂ ಅವರು ದೂರವಿದ್ದರು. ಈ ಮೂಲಕ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟನ್ನು ಉಂಟುಮಾಡಿದ್ದರು. ಕಾಂಗ್ರೆಸ್ ಶಾಸಕರ ಅಡ್ಡ ಮತದಾನದ ಪರಿಣಾಮ ಕಾಂಗ್ರೆಸ್ ಸರ್ಕಾರವಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆಲುವು ದಾಖಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸೋಲು ಅನುಭವಿಸಿದ್ದರು.

ತಮ್ಮ ಅನಹರ್ತೆಯನ್ನು ಪ್ರಶ್ನಿಸಿ ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಬಂಡಾಯ ಶಾಸಕರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠವು ವಿಚಾರಣೆ ನಡೆಸುತ್ತಿದೆ.

ಇಂದು ವಿಚಾರಣೆಯ ಕೊನೆಯಲ್ಲಿ ಅರ್ಜಿದಾರರ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಮುಂದೂಡಲು ನ್ಯಾಯಪೀಠ ಒಪ್ಪಿಕೊಂಡಿತು. ಈ ವೇಳೆ ಹೈಕೋರ್ಟ್‌ಗೆ ಹೋಗದೆ ನೇರವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಂಡಾಯ ಶಾಸಕರನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ತರಾಟೆಗೆ ತೆಗೆದುಕೊಂಡರು. ಗಮನಾರ್ಹವಾಗಿ, ಸಂವಿಧಾನದ 32 ನೇ ವಿಧಿಯಡಿಯಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿತು. ಅರ್ಜಿದಾರರ ಯಾವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಕೇಳಿತು. ಸಂವಿಧಾನದ 32ನೇ ವಿಧಿ ಮೂಲಭೂತ ಹಕ್ಕುಗಳ ಉಲ್ಲಂಘಣೆಗೆ ಸಂಬಂಧಿಸಿದ್ದಾಗಿದೆ.

ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಬಂಡಾಯ ಶಾಸಕರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಶಾಸಕರ ಅನರ್ಹತೆಗೆ ನೀಡಿರುವ ಕಾರಣಗಳನ್ನು ಎತ್ತಿ ತೋರಿಸಿದರು. ರಾಜ್ಯಸಭಾ ಚುನಾವಣೆಗೆ ಮುನ್ನ ಫೆಬ್ರವರಿ 15 ರಂದು ಕಾಂಗ್ರೆಸ್ ಪಕ್ಷ ಹೊರಡಿಸಿದ ವಿಪ್ ಅನ್ನು ಅರ್ಜಿದಾರರು ಸ್ವೀಕರಿಸಲಿಲ್ಲ ಎಂದು ಅವರು ಹೇಳಿದರು.

ಕಳೆದ ಶನಿವಾರ ಚುನಾವಣಾ ಆಯೋಗವು ಆರು ಶಾಸಕರ ಅನರ್ಹತೆಯಿಂದ ತೆರವಾದ ಸ್ಥಾನಗಳಿಗೆ ಜೂನ್ 1 ರಂದು ಉಪಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಈ ವಿಷಯವನ್ನು ವಿಚಾರಣೆ ವೇಳೆ ಹಿರಿಯ ವಕೀಲ ಕಪಿಲ್ ಸಿಬಲ್ ಉಲ್ಲೇಖಿಸಿದರು. ಈ ವೇಳೆ ಪ್ರತಿವಾದ ಮಂಡಿಸಿದ ವಕೀಲ ಹರೀಶ್ ಸಾಳ್ವೆ, ನಾವು ಅದರ ವಿರುದ್ದವೂ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸುತ್ತೇವೆ. ಚುನಾವಣಾ ಆಯೋಗ ಕೇವಲ ದಿನಾಂಕ ಘೋಷಿಸಿದೆ. ಅಧಿಸೂಚನೆ ಪ್ರಕಟಿಸಿಲ್ಲ ಎಂದರು.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ. ಶಾಸಕರ ಅನರ್ಹತೆ ಕುರಿತಂತೆ 4 ವಾರಗಳಲ್ಲಿ ಪ್ರತಿಕ್ರಿಯೆ ಕೇಳಿ ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಶಾಸಕರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

ಇದನ್ನೂ ಓದಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...