Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

- Advertisement -
- Advertisement -

ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೆಗೌಡರು ಹಾಗೂ  ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು;ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಿಜೆಪಿ, ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರಂಭದಲ್ಲಿಯೇ ಹೀಗಾದರೆ ಮುಂದೇನು?

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಂಕಿ ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.

ಎರಡು ಸೀಟಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ?

ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿಯವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್‌ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ನಾಯಕರು ಪ್ರಶ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ  ಜೊತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಇದೇ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....