HomeUncategorized'ಹಿಪಾಕ್ರಸಿಗೆ ಮತ್ತೊಂದು ಹೆಸರೇ ಮೋದಿ..'; ಬಿಎಸ್‌ವೈ ಕುಟುಂಬ ರಾಜಕಾರಣವನ್ನು ಟೀಕಿಸಿದ ಕಾಂಗ್ರೆಸ್

‘ಹಿಪಾಕ್ರಸಿಗೆ ಮತ್ತೊಂದು ಹೆಸರೇ ಮೋದಿ..’; ಬಿಎಸ್‌ವೈ ಕುಟುಂಬ ರಾಜಕಾರಣವನ್ನು ಟೀಕಿಸಿದ ಕಾಂಗ್ರೆಸ್

- Advertisement -
- Advertisement -

ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಇಂದು ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶದ ಕುರಿತು ರಾಜ್ಯ ಕಾಂಗ್ರೆಸ್‌ ಟೀಕೆ ನಡೆಸಿದೆ. ಮೋದಿಯವರೊಂದಿಗೆ ವೇದಿಕೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಇಬ್ಬರು ಮಕ್ಕಳು ಇರುವ ಫೋಟೋ ಶೇರ್ ಮಾಡಿರುವ ಪಕ್ಷವು, ‘ಹಿಪಾಕ್ರಸಿಗೆ ಮತ್ತೊಂದು ಹೆಸರೇ ಮೋದಿ’ ಎಂದು ವಾಗ್ದಾಳಿ nನಡೆಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಹಿಪಾಕ್ರಸಿಗೆ ಮತ್ತೊಂದು ಹೆಸರೇ ಮೋದಿ.. ಶಿವಮೊಗ್ಗದಲ್ಲಿ ವೇದಿಕೆ ಮೇಲೆ ಯಡಿಯೂರಪ್ಪರನ್ನು ಕೂರಿಸಿಕೊಂಡು, ಆ ಕಡೆ ಅಭ್ಯರ್ಥಿಯಾಗಿರುವ ದೊಡ್ಡ ಮಗ, ಈ ಕಡೆ ರಾಜ್ಯಾಧ್ಯಕ್ಷನಾದ ಚಿಕ್ಕ ಮಗನನ್ನು ಕೂರಿಸಿಕೊಂಡಿದ್ದ ನರೇಂದ್ರ ಮೋದಿಯವರೆ, ನಿಮ್ಮ ಡೋಂಗಿತನ ಬಯಲಾಗಿದೆ. ನಿಮ್ಮ ಟೆಲಿಪ್ರಾಂಪ್ಟರ್ ನಿಂದ “ಕುಟುಂಬ ರಾಜಕೀಯ” ಎಂಬ ಪದವನ್ನು ಅಳಿಸಿಬಿಡಿ. ಅಥವಾ,
ರಾಜ್ಯ ಬಿಜೆಪಿಗೆ “ಬಿಎಸ್‌ವೈ & ಸನ್ಸ್ ಪಾರ್ಟಿ” ನಾಮಕರಣ ಮಾಡಿಬಿಡಿ’ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

‘ನರೇಂದ್ರ ಮೋದಿಯರೇ, ನೀವು ಮತ ಕೇಳುತ್ತಿರುವ ಬಿವೈ ರಾಘವೇಂದ್ರ ಯಡಿಯೂರಪ್ಪನವರ ಮಗ ಎನ್ನುವುದು ತಿಳಿದಿದೆಯೇ? ನಿಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪನವರ ಮಗ ಎನ್ನುವುದು ತಿಳಿದಿದೆಯೇ? ಇದು ಕುಟುಂಬ ರಾಜಕಾರಣ ಅಲ್ಲವೇ? “ಕುಟುಂಬ ರಾಜಕಾರಣ” ಎಂದು ಟೀಕಿಸಿ ಈಗ ರಾಜಕೀಯ ಕುಟುಂಬದ ಪರ ಮತ ಕೇಳುವ ಮೋದಿಯದ್ದು ಹಿಪಾಕ್ರಸಿ ಅಲ್ಲದೆ ಇನ್ನೇನು’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಸಂಜಯ್ ಸಿಂಗ್ ಅವರನ್ನು ಸಂಸತ್ತಿಗೆ ಕರೆದೊಯ್ಯುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...