ನಗರ್ತಪೇಟೆ ಅಂಗಡಿ ಗಲಾಟೆ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಎಳೆ ಕೂಸು ಎಂದು ಬಿಜೆಪಿ ಸಂಸದ್ನ್ನು ಲೇವಡಿ ಮಾಡಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಈ ತೇಜಥೆಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ, ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು! ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು. ಆದರೆ, ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ. ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ’ ಎಂದು ಕಿಡಿ ಕಾರಿದೆ.
ಈ @Tejasvi_Surya ಎಂಬ ಎಳೆ ಕೂಸಿನಂತಹ ಸಂಸದ
• ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು!• ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು!
• ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು!
• ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು!
ಆದರೆ ಈಗ ಬೀದಿ ಜಗಳದ ವಿಷಯಕ್ಕೆ…
— Karnataka Congress (@INCKarnataka) March 20, 2024
‘ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಗರ್ತಪೇಟೆಯ ಶಾಸಕರು ಬಿಜೆಪಿಯವರೇ, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಬಿಜೆಪಿಯ ಪ್ರಾಪಗಾಂಡಾಗಳಿಗೆ ತಪರಾಕಿ ನೀಡಿದ್ದಾರೆ. ಇದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ವಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ @Tejasvi_Surya ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ.@ceo_karnataka ಅವರು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು,
ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ… pic.twitter.com/6LPJrF7GiY— Karnataka Congress (@INCKarnataka) March 20, 2024
‘ವಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು,
ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಸ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆ’ ಎಂದು ಕಾಂಗ್ರೆಸ್ ಹೇಳಿದೆ.
ಇದನ್ನೂ ಒದಿ; “ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ” ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ


