Homeಅಂತರಾಷ್ಟ್ರೀಯಏಪ್ರಿಲ್‌ನ್ನು"ದಲಿತ ಇತಿಹಾಸದ ತಿಂಗಳು" ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

- Advertisement -
- Advertisement -

ಕೆನಡಾದ ಒಂಟಾರಿಯೊ ಪ್ರಾಂತ್ಯದ ಬರ್ಲಿಂಗ್ಟನ್ ನಗರವು ಮಹತ್ವದ ಹೆಜ್ಜೆಯನ್ನು ಇಟ್ಟುಕೊಂಡಿದ್ದು,  ಅಧಿಕೃತವಾಗಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದೆ ಮತ್ತು ಏಪ್ರಿಲ್ 14ರಂದು ಡಾ ಬಿಆರ್ ಅಂಬೇಡ್ಕರ್‌ ‘ಡೇ ಆಫ್‌ ಇಕ್ವಿಟಿ'(ಅಂಬೇಡ್ಕರ್ ಜಯಂತಿ) ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದೆ.

ಮಾರ್ಚ್ 20ರಂದು ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ದಲಿತ ಸಮುದಾಯಗಳಿಗೆ ಏಪ್ರಿಲ್‌ನ ಮಹತ್ವವನ್ನು ಪರಿಗಣಿಸಿ, ಪ್ರಮುಖ ಭಾರತದ ಸಂವಿಧಾನದ ಶಿಲ್ಪಿ ಮತ್ತು ಸಮಾಜ ಸುಧಾರಕರಾದ ಡಾ.ಭೀಮ್ ರಾವ್ ಅಂಬೇಡ್ಕರ್ ಜನ್ಮದಿನ ಮತ್ತು ಜ್ಯೋತಿರಾವ್ ಫುಲೆ ಅವರ ಮರಣದ ವಾರ್ಷಿಕೋತ್ಸವವನ್ನು ಪರಿಗಣಿಸಿ ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಾತಿ ಆಧಾರಿತ ವ್ಯವಸ್ಥಿತ ತಾರತಮ್ಯದ ವಿರುದ್ಧದ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ.ಭೀಮ್ ರಾವ್ ಅಂಬೇಡ್ಕರ್ ಮತ್ತು ಜ್ಯೋತಿರಾವ್ ಫುಲೆ ಅವರ ಜನ್ಮ ಮತ್ತು ಮರಣ ವಾರ್ಷಿಕೋತ್ಸವಗಳನ್ನು ಒಳಗೊಂಡಿರುವ ಹಿನ್ನೆಲೆ ಏಪ್ರಿಲ್ ಗಮನಾರ್ಹ ಪ್ರಾಮುಖ್ಯತೆಯನ್ನು ಹೊಂದಿದೆ. ಆದ್ದರಿಂದ ಏಪ್ರಿಲ್ 2024ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸುತ್ತೇನೆ ಎಂದು ಬರ್ಲಿಂಗ್ಟನ್ ನಗರದ ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ಹೇಳಿದ್ದಾರೆ.

ನಾನು ಬರ್ಲಿಂಗ್ಟನ್ ನಗರದಲ್ಲಿ ಏಪ್ರಿಲ್ 2024ನ್ನು “ದಲಿತ ಇತಿಹಾಸ ತಿಂಗಳು” ಎಂದು ಘೋಷಿಸುತ್ತೇನೆ ಮತ್ತು ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುವುದು ಎಂದು ಮೇಯರ್ ಹೊರಡಿಸಿರುವ ಮತ್ತೊಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು 2022ರಲ್ಲಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಗೊತ್ತುಪಡಿಸಿದ ಉತ್ತರ ಅಮೆರಿಕಾದ ಮೊತ್ತ ಮೊದಲ ಪ್ರಾಂತ್ಯವಾಗಿದೆ. ಬ್ರಿಟಿಷ್ ಕೊಲಂಬಿಯಾದ ಬರ್ನಾಬಿ ಎಂಬ ನಗರವು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ.

ಇದನ್ನು ಓದಿ: ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...