Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...