Homeಕರ್ನಾಟಕಬಿಜೆಪಿ ಶುದ್ಧೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ: ಡಿ.ವಿ ಸದಾನಂದಗೌಡ

ಬಿಜೆಪಿ ಶುದ್ಧೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ: ಡಿ.ವಿ ಸದಾನಂದಗೌಡ

"ಬಿಜೆಪಿಯಲ್ಲಿ ಟಿಕೆಟ್ ತನ್ನ ಮಕ್ಕಳಿಗೆ, ಕುಟುಂಬಕ್ಕೆ, ಚೇಳಾಗಳಿಗೆ ಎನ್ನುವಂತಾಗಿದೆ"

- Advertisement -
- Advertisement -

ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿರುವುದಕ್ಕೆ ತೀವ್ರ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು, ಯಡಿಯೂರಪ್ಪ ಬಣದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ವಾಧಿಕಾರಿ ಧೋರಣೆ ಯಾವತ್ತೂ ಸಾರ್ವಜನಿಕ ವ್ಯವಸ್ಥೆಗೆ ಶೋಭೆ ತರಲ್ಲ. ಬಿಜೆಪಿಯಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆಯ ಟಿಕೆಟ್ ತನ್ನ ಮಕ್ಕಳಿಗೆ, ಕುಟುಂಬಕ್ಕೆ, ಸಂಬಂಧಿಕರಿಗೆ ಚೇಳಾಗಳಿಗೆ ಎನ್ನುವ ವ್ಯವಸ್ಥೆಯಿದೆ. ಇದರಿಂದ ಪಕ್ಷವನ್ನು ಮುಕ್ತಗೊಳಿಸಬೇಕು. ಮೋದಿಯವರು ಹೇಳಿದಂತೆ ‘ಮೇರಾ ದೇಶ್ ಮೇರಾ ಪರಿವಾರ್’ (ನನ್ನ ದೇಶ, ನನ್ನ ಕುಟುಂಬ) ಆಗಬೇಕು ಎಂದರು.

ಮುಂದಿನ ನಡೆ ಬಿಜೆಪಿಯೊಳಗೆ ಶುದ್ದೀಕರಣ :

“ನನ್ನನ್ನು ಆರತಿ ಎತ್ತಿ ಪಕ್ಷಕ್ಕೆ ಕರೆತಂದು, ಈಗ ಮಂಗಳಾರತಿ ಎತ್ತಿ ಹೊರ ಕಳಿಸಿದ್ದಾರೆ. ಇದರಿಂದ ನನಗೆ ನೋವಾಗಿದೆ. ನಾನು ಸಮಾನ ಮನಸ್ಕರನ್ನು ಆಹ್ವಾನಿಸುತ್ತೇನೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಆ ಬಳಿಕ ಪಕ್ಷದೊಳಗೆ ಶುದ್ದೀಕರಣ ಪ್ರಾರಂಭಿಸೋಣ. ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯ ಶುದ್ದೀಕರಣ ಆಗದೆ ನಾನು ವಿರಮಿಸುವುದಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿಯಾದರೂ ಇದರ ಪರವಾಗಿ ಹೋರಾಟ ಮಾಡುತ್ತೇನೆ” ಎಂದು ಸದಾನಂದಗೌಡ ಹೇಳಿದರು.

“ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಅವಗಣನೆ ಮಾಡಲಾಗಿದೆ. ರಾಜ್ಯದ ಜನತೆ ಈಗ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಇದು ಮೋದಿಯವರ ಚುನಾವಣೆ. ಈ ಚುನಾವಣೆ ಬಳಿಕ ನಾವು ಪಕ್ಷದೊಳಗೆ ಶುದ್ದೀಕರಣ ಕೆಲಸ ಪ್ರಾರಂಭಿಸುತ್ತೇವೆ. ನನ್ನ ಮನೆಯವರಿಗೆ ನನ್ನ ಪಕ್ಷ ಆಗಬಾರದು” ಎಂದು ಅಸಮಾಧಾನ ಹೊರ ಹಾಕಿದರು.

ಕಾಂಗ್ರೆಸ್ ಸೇರಲ್ಲ:

“ಟಿಕೆಟ್ ಸಿಗದಕ್ಕೆ ನನಗೆ ನೋವಾಗಿದೆ. ಕಾಂಗ್ರೆಸ್‌ನಿಂದ ನನಗೆ ಆಹ್ವಾನ ಬಂದಿರುವುದು ನಿಜ. ಆದರೆ, ನಾನು ಕಾಂಗ್ರೆಸ್‌ಗೆ ಹೋಗಲ್ಲ. ನಮಗೆ ಅಪಮಾನ ಮಾಡಿದವರು ಮುಂದಿನ ದಿನಗಳಲ್ಲಿ ಪಶ್ಚಾತಾಪ ಪಡಲಿದ್ದಾರೆ. ನನ್ನ ಮುಂದಿನ ನಡೆ ಕರ್ನಾಟಕ ಬಿಜೆಪಿಯ ಶುದ್ಧೀಕರಣ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ : ಅಸ್ಸಾಂ: ಬಿಜೆಪಿ ತೊರೆದ ರಾಜ್ಯದ ಪ್ರಮುಖ ಮುಸ್ಲಿಂ ನಾಯಕ; ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...