Homeಮುಖಪುಟಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

ಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

- Advertisement -
- Advertisement -

ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಂಕಿಅಂಶಗಳ ಪ್ರಕಾರ 2013-2023ರ ನಡುವೆ ರಾಜಕೀಯ ಪಕ್ಷಗಳು 7,726 ಕೋಟಿ ರೂ. ಎಲೆಕ್ಟೋರಲ್ ಬಾಂಡ್ ರಹಿತವಾಗಿ ದೇಣಿಗೆಯಾಗಿ ಪಡೆದಿವೆ ಎಂದು ಬಿಸಿನೆಸ್‌ಲೈನ್ ವರದಿ ಮಾಡಿದೆ. ಚುನಾವಣಾ ಬಾಂಡ್‌ ಮೂಲಕ ಬಿಜೆಪಿ ಒಟ್ಟು ನಿಧಿಯ 50% ದೇಣಿಗೆ ಪಡೆದಿರುವುದು ಬಯಲಾಗತ್ತು, ಇದೀಗ ಎಲೆಕ್ಟೋಲ್‌ ಬಾಂಡ್‌ಗಳಲ್ಲಿ ಇತರ ದೇಣಿಗೆಗಳ ಮೂಲಕ ಬಿಜೆಪಿ ಅತಿ ಹೆಚ್ಚು ನಿಧಿಯನ್ನು ಪಡೆದುಕೊಂಡಿರುವುದು ಬಯಲಾಗಿದೆ.

7,726 ಕೋಟಿ ರೂ.ಗಳಲ್ಲಿ ಬಿಜೆಪಿ ಸುಮಾರು 5,000 ಕೋಟಿ ಅಥವಾ 64.7% ಪಡೆದರೆ, ಕಾಂಗ್ರೆಸ್ (10.7%), ಭಾರತ್ ರಾಷ್ಟ್ರ ಸಮಿತಿ (3.3%) ಮತ್ತು ಆಮ್ ಆದ್ಮಿ ಪಕ್ಷ (3.1%) ದೇಣಿಗೆಯನ್ನು ಪಡೆದಿದೆ. ಈ ದೇಣಿಗೆಗಳನ್ನು ರಾಜಕೀಯ ನಿಧಿಯ ಪಾರದರ್ಶಕ ವಿಧಾನಗಳ ಮೂಲಕ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2018ರಲ್ಲಿ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪರಿಚಯಿಸುವ ಮೊದಲು, ಭಾರತೀಯ ಜನತಾ ಪಾರ್ಟಿ ನೇತೃತ್ವದ ಸರ್ಕಾರವು 2003ರಲ್ಲಿ ಜಾರಿಗೆ ತಂದ ರಾಜಕೀಯ ಹಣಕಾಸು ಕಾನೂನುಗಳ ಅಡಿಯಲ್ಲಿ 20,000 ರೂಪಾಯಿಗಳನ್ನು ಮೀರಿದ ದೇಣಿಗೆಯನ್ನು ಘೋಷಿಸಬೇಕಾಗಿತ್ತು. ಈ ದೇಣಿಗೆಗಳು, 100% ತೆರಿಗೆ ವಿನಾಯಿತಿಯನ್ನು ಹೊಂದಿದ್ದವು. ವರ್ಷಗಳಲ್ಲಿ ಗಮನಾರ್ಹ ಹೆಚ್ಚಳವನ್ನು ಕಂಡಿತು, 2014ರ ಆರ್ಥಿಕ ವರ್ಷದಲ್ಲಿ 309 ಕೋಟಿಗಳಿಂದ 2020ರ ಆರ್ಥಿಕ ವರ್ಷದಲ್ಲಿ 1,247 ಕೋಟಿ ರೂ.ಗೆ ಗಣನೀಯವಾಗಿ ಹೆಚ್ಚಳವಾಗಿದೆ. ಆದರೆ 2023ರ ಆರ್ಥಿಕ ವರ್ಷದಲ್ಲಿ ದೇಣಿಗೆಗಳು 1,101 ಕೋಟಿ ರೂ.ಗೆ ಇಳಿದಿದ್ದು, 2020ರ ಆರ್ಥಿಕ ವರ್ಷಕ್ಕೆ ಹೋಲಿಕೆ ಮಾಡಿದರೆ ಸ್ವಲ್ಪ ಇಳಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಕಾರ್ಪೊರೇಟ್ ದೇಣಿಗೆಗಳು ಸಹ ಮಹತ್ವದ ಪಾತ್ರವನ್ನು ವಹಿಸುತ್ತವೆ, ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ (ಪಿಇಟಿ) ನಂತಹ ಘಟಕಗಳು ಪ್ರಮುಖ ಕೊಡುಗೆದಾರರಾಗಿದ್ದಾರೆ. 2023ರಲ್ಲಿ  PET ಬಿಜೆಪಿಗೆ 256 ಕೋಟಿ ರೂಪಾಯಿಗಳನ್ನು ಮತ್ತು ಬಿಆರ್‌ಎಸ್‌ಗೆ 90 ಕೋಟಿ ರೂಪಾಯಿಗಳನ್ನು ನೀಡಿದೆ. ಹೆಚ್ಚುವರಿಯಾಗಿ, M/S MKJ ಎಂಟರ್‌ಪ್ರೈಸಸ್ ಲಿಮಿಟೆಡ್ ಕಾಂಗ್ರೆಸ್‌ಗೆ  45 ಕೋಟಿ ರೂ.ವನ್ನು ನೀಡಿದೆ. B.G. ಶಿರ್ಕೆ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬಿಜೆಪಿಗೆ 35 ಕೋಟಿ ದೇಣಿಗೆ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮುಖ್ಯಸ್ಥ ಅನಿಲ್ ವರ್ಮಾ, ಭಾರತದಲ್ಲಿ ಪಕ್ಷ ರಾಜಕೀಯವು ಸ್ಪರ್ಧಾತ್ಮಕವಾಗಿದೆ, ಇದು ಚುನಾವಣೆಗಳಿಗಾಗಿ ಪಕ್ಷದ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹೆಚ್ಚುತ್ತಿರುವ ವೆಚ್ಚಗಳನ್ನು ಪೂರೈಸಲು, ಪಕ್ಷಗಳು ಹೆಚ್ಚಾಗಿ ಕಾರ್ಪೊರೇಟ್ ವಲಯ  ಸಂಪನ್ಮೂಲಗಳನ್ನು ಅವಲಂಬಿಸುತ್ತದೆ. ಯಾವ ರಾಜಕೀಯ ಪಕ್ಷ ಅಧಿಕಾರದಲ್ಲಿದೆ, ಅವರು ತಮ್ಮ ಅನುಕೂಲಕ್ಕಾಗಿ ನಿಧಿಯ ಕಾರ್ಯವಿಧಾನಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಪೊಲಿಟಿಕಲ್ ಫೈನಾನ್ಸ್ ಇನ್ ಇಂಡಿಯಾದ ಲೇಖಕರಾದ ಈಶ್ವರನ್ ಶ್ರೀಧರನ್ ಮತ್ತು ಮಿಲನ್ ವೈಷ್ಣವ್ ಅವರ ಪ್ರಕಾರ, ಆರು ರಾಷ್ಟ್ರೀಯ ಪಕ್ಷಗಳು ಸ್ವೀಕರಿಸಿದ ಸುಮಾರು 75% ಹಣವು 20,000ರೂ. ಮಿತಿಗಿಂತ ಕಡಿಮೆ ಇರುವ ಅನಾಮಧೇಯ ದೇಣಿಗೆಗಳ ಮೂಲಕ ಬರುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...