Homeಮುಖಪುಟಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವಿಶಿಷ್ಟ ‘ಆಲ್ಫಾನ್ಯೂಮರಿಕ್ ಕೋಡ್‌’ನೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಇಂದು (ಮಾ.21) ಅಪ್ಲೋಡ್‌ ಮಾಡಿದೆ.

ಬಾಂಡ್‌ ಸಂಖ್ಯೆಗಳು (ಆಲ್ಫಾನ್ಯೂಮರಿಕ್ ಕೋಡ್‌) ಸೇರಿದಂತೆ ಚುನಾವಣಾ ಬಾಂಡ್‌ ಸಂಬಂಧಿತ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿರುವುದಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗ ಬಾಂಡ್‌ಗಳ ಹೊಸ ಪಟ್ಟಿ ಪ್ರಕಟಿಸಿದೆ.

ಚುನಾವಣಾ ಆಯೋಗ ಹೊಸದಾಗಿ ಪ್ರಕಟಿಸಿದ ಚುನಾವಣಾ ಬಾಂಡ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ  

ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿಯು ಬಾಂಡ್‌ಗಳ ಎಲ್ಲಾ ಪ್ರಮುಖ ಸೀರಿಯಲ್ ನಂಬರ್‌ಗಳನ್ನು ಒಳಗೊಂಡಿದೆ. ಚುನಾವಣಾ ಬಾಂಡ್‌ಗಳ ‘ಆಲ್ಫಾನ್ಯೂಮರಿಕ್’ ಮತ್ತು ‘ಸೀರಿಯಲ್ ನಂಬರ್‌’ಗಳು ಯಾವ ಕಂಪನಿ ಮತ್ತು ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಸಹಕಾರಿಯಾಗಿದೆ.

ರಾಜಕೀಯ ಪಕ್ಷಗಳು ನಗದೀಕರಣ ಮಾಡಿಕೊಂಡ ವಿವರಗಳು ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್ ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆಯ ಕೋಡ್ ಮತ್ತು ಪೇ ಟೆಲ್ಲರ್ ಅನ್ನು ಒಳಗೊಂಡಿದೆ.

ವಿಶಿಷ್ಟವಾದ ಆಲ್ಫಾನ್ಯೂಮರಿಕ್ ಕೋಡ್ ಇಲ್ಲದೆ, ದೇಣಿಗೆ ನೀಡಿದವರು ಮತ್ತು ಪಡೆದವರ ಪಟ್ಟಿಗಳನ್ನು ಲಿಂಕ್ ಮಾಡಲು ಸಾಧ್ಯವಿರಲಿಲ್ಲ. ಈಗ ಅದನ್ನು ಎಸ್‌ಬಿಐ ಒದಗಿಸಿದೆ. ಆಲ್ಫಾನ್ಯೂಮರಿಕ್ ಕೋಡ್ ಅನ್ನು ನೇರಳಾತೀತ (UV)ಬೆಳಕನ್ನು ಬಳಸಿ ಮಾತ್ರ ನೋಡಬಹುದಾಗಿದೆ.

ಸೋಮವಾರ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 21ರೊಳಗೆ ಆಲ್ಫಾನ್ಯೂಮರಿಕ್ ಕೋಡ್‌ ಸೇರಿದಂತೆ ಚುನಾವಣಾ ಬಾಂಡ್ ಸಂಬಂಧಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು. ಎಸ್‌ಬಿಐನಿಂದ ಪಡೆದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಇಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಡ್‌ನಲ್ಲಿ ಪ್ರಿಫಿಕ್ಸ್‌ ಮತ್ತು ಬಾಂಡ್‌ ನಂಬರ್ ಆಲ್ಫಾನ್ಯೂಮರಿಕ್ ಎಂದು ತಿಳಿಸಿದ್ದಾರೆ.

ಎಸ್‌ಬಿಐ ಚುನಾವಣಾ ಆಯೋಗಕ್ಕೆ ಕೊನೆಯದಾಗಿ ನೀಡಿರುವ ಮಾಹಿತಿಯಲ್ಲ ಈ ಕೆಳಗಿನವುಗಳು ಒಳಗೊಂಡಿವೆ:

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು: ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ, ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ತಿಳಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...