Homeಮುಖಪುಟಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್ ಕೇಜ್ರಿವಾಲ್

ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರ ವಿಶೇಷ ಪೀಠವು ಇಂದು ಕೇಜ್ರಿವಾಲ್ ಅವರ ಅರ್ಜಿಯನ್ನು ವಿಚಾರಣೆ ನಡೆಸಲು ಮುಂದಾಗಿತ್ತು. ಆದರೆ, ನ್ಯಾಯಾಲಯಕ್ಕೆ ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಡಾ ಅಭಿಷೇಕ್ ಮನು ಸಿಂಘ್ವಿ ಅವರು, ಅರ್ಜಿ ವಾಪಸ್ ಪಡೆಯುವುದಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಮುಂದೆ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತಾ ಪೀಠದಲ್ಲಿದ್ದರು.

ಇಂದು ಬೆಳಿಗ್ಗೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಕೇಜ್ರಿವಾಲ್ ಅರ್ಜಿಯನ್ನು ಪ್ರಸ್ತಾಪಿಸಲಾಗಿತ್ತು. ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು, ಕೋರ್ಟ್‌ ಹಾಲ್ ಎರಡಲ್ಲಿರುವ ವಿಶೇಷ ಪೀಠದ ಮುಂದೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ. ಈ ವಿಶೇಷ ಪೀಠ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾದ ಬಿಆರ್‌ಎಸ್‌ ಎಂಎಲ್‌ಸಿ ಕವಿತಾ ಕಲ್ವಕುಂಟಲ ಅವರ ಅರ್ಜಿಯನ್ನು ವಿಚಾರಣೆ ನಡೆಸುತ್ತಿತ್ತು.

ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರಿಗೆ ಬಲವಂತದ ಕ್ರಮದಿಂದ ಯಾವುದೇ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿನ್ನೆ ನಿರಾಕರಿಸಿತ್ತು.

“ನಾವು ಎರಡೂ ಕಡೆಯ ವಾದ ಆಲಿಸಿದ್ದೇವೆ; ಈ ಹಂತದಲ್ಲಿ ರಕ್ಷಣೆ ನೀಡಲು ನಾವು ಒಲವು ತೋರುತ್ತಿಲ್ಲ. ಪ್ರತಿವಾದಿಯು ಉತ್ತರವನ್ನು ಸಲ್ಲಿಸಲು ಸ್ವತಂತ್ರರು” ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠ ಹೇಳಿತ್ತು.

ಇದನ್ನೂ ಓದಿ : ‘ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ..’; ಎಎಪಿ ಮುಖಂಡ ಗೋಪಾಲ್ ರೈ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎಎಪಿಯನ್ನು ಹತ್ತಿಕ್ಕಲು ಬಿಜೆಪಿ ಆಪರೇಷನ್ ಜಾದು ಆರಂಭಿಸಿದೆ..’; ಅರವಿಂದ್ ಕೇಜ್ರಿವಾಲ್

0
"ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕರೊಂದಿಗೆ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಯೋಜಿತ...