Homeಕರ್ನಾಟಕಮರಿತಿಬ್ಬೇಗೌಡ ಸೇರಿದಂತೆ ಹಲವು ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮರಿತಿಬ್ಬೇಗೌಡ ಸೇರಿದಂತೆ ಹಲವು ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಹಲವು ಮಂದಿ ಬಿಜೆಪಿ-ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಸೇರಿದಂತೆ ನೂರಾರು ಮಂದಿ ಕೈ ಹಿಡಿದಿದ್ದಾರೆ.

ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ, ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, “ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ” ಎಂದಿದ್ದಾರೆ.

“ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಕಾವೇರಿ ವಿಚಾರವನ್ನು ಭಾವನಾತ್ಮಕವಾಗಿ ಬಳಸಿಕೊಂಡಿದ್ದಾರೆ. ರೈತರ ಹೆಸರೇಳಿಕೊಂಡು ಜನತಾದಳ ಕೇವಲ ರಾಜಕಾರಣ ಮಾಡಿದೆ. ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆ ಶೂನ್ಯ. ಚೆಲುವರಾಯ ಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮೆಡಿಕಲ್ ಕಾಲೇಜು ತಂದರು” ಎಂದು ಹೇಳಿದ್ದಾರೆ.

“ಜನತಾದಳದವರು ನನಗೆ ಟಿಕೆಟ್ ಮಾತ್ರ ನೀಡಿದರು. ಆದರೆ, ಬೆಂಬಲ ನೀಡಿರಲಿಲ್ಲ. ಕೇವಲ ಕುಟುಂಬದ ಪರವಾಗಿ ಮಾತ್ರ ಪಕ್ಷದ ಸಭೆಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ನಾನು ಅನೇಕ ಬಾರಿ ಇದರ ವಿರುದ್ಧ ದನಿ ಎತ್ತಿದ್ದೇನೆ. ರೈತ ವಿರೋಧಿ ಕಾಯ್ದೆಗಳನ್ನು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದಾಗ ನಾನು ವಿರೋಧ ವ್ಯಕ್ತಪಡಿಸಿದ್ದೆ” ಎಂದು ಸ್ಮರಿಸಿಕೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು), ಶಾಸಕರಾದ ಉದಯ್, ರವಿ ಗಣಿಗ, ರಮೇಶ್ ಬಾಬು ಬಂಡ್ಡಿಸಿದ್ದೇಗೌಡ,ಎಂಎಲ್ಸಿ ದಿನೇಶ್ ಗೂಳಿಗೌಡ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ರಾಜ್ಯದ 17 ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...