Homeಅಂತರಾಷ್ಟ್ರೀಯಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

ಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

- Advertisement -
- Advertisement -

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸಂಗೀತ ಕಚೇರಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಈ ವೇಳೆ ಕನಿಷ್ಠ 60 ಜನರು ಮೃತಪಟ್ಟಿದ್ದು, 145ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ರಷ್ಯಾದಲ್ಲಿ ನಡೆದ ಅತಿ ಭೀಕರ ಭಯೋತ್ಪಾದಕ ದಾಳಿ ಎಂದು ಹೇಳಲಾಗಿದೆ.

ಶುಕ್ರವಾರ ರಾತ್ರಿ ನಗರದ ಪಶ್ಚಿಮ ಉಪನಗರದಲ್ಲಿರುವ ಕಿಕ್ಕಿರಿದ ಕನ್ಸರ್ಟ್ ಹಾಲ್‌ಗೆ ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಿದ ಐವರು ಮುಸುಕುದಾರಿ ಬಂದೂಕುಧಾರಿಗಳು ಸಂಗೀತ ಕಾರ್ಯಕ್ರಮದಲ್ಲಿದ್ದವರ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಸ್ಪೋಟ ಸಂಭವಿಸಿದೆ.

ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸುಮಾರು 145 ಮಂದಿ ಗಾಯಗೊಂಡಿದ್ದು, ಅವರಲ್ಲಿ 60 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಇರಾಕ್ ಮತ್ತು ಸಿರಿಯಾದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದ ISIL ಸಂಗೀತ ಕಾರ್ಯಕ್ರಮದ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಅಲ್‌ಜಝೀರಾ ವರದಿ ತಿಳಿಸಿದೆ.

ಮಾಸ್ಕೋದಲ್ಲಿ ಅತ್ಯಂತ ಜನಪ್ರಿಯವಾಗಿರುವ ಕನ್ಸರ್ಟ್ ಹಾಲ್ ಸುಮಾರು 6,200 ಜನರು ಸೇರುವಷ್ಟು ದೊಡ್ಡದಾದ ವ್ಯವಸ್ಥೆ ಅಲ್ಲಿದೆ. ಈ ಬಗ್ಗೆ ಮಾತನಾಡಿದ ಸಂಗೀತ ನಿರ್ಮಾಪಕ ಅಲೆಕ್ಸಿ, ಹಲವಾರು ಮೆಷಿನ್‌ಗನ್‌ಗಳ ಸ್ಫೋಟಗಳು ಸಂಭವಿಸಿದೆ. ಬಹಳಷ್ಟು ಕಿರುಚಾಟಗಳು ಕೇಳಿ ಬಂದಿದ್ದು, ಈ ವೇಳೆ ಸ್ಪೋಟ ಗೊಂಡಿರುವುದು ಮತ್ತು ದಾಳಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. ಬಾಂಬ್‌ಗಳನ್ನು  ಸಭಾಂಗಣದೊಳಗೆ ಸ್ಫೋಟಿಸಿದ್ದರಿಂದಾಗಿ ಇಡೀ ಸಭಾಂಗಣ ಹಾಗೂ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸಿದೆ. ದಟ್ಟವಾದ ಹೊಗೆ ತುಂಬಿದ ಸಭಾಂಗಣದಲ್ಲಿ ಹಲವಾರು ಹೊತ್ತು ಗುಂಡಿನ ದಾಳಿಯ ಸದ್ದು ಕೇಳಿ ಬರುತ್ತಿತ್ತು ಎಂದು ರಷ್ಯಾದ ಸುದ್ದಿ ಸಂಸ್ಥೆ ಆರ್ ಐಎ ನೊವಾಸ್ಟಿ ವರದಿ ಮಾಡಿದೆ.

ಘಟನೆ ವೇಳೆ ಹಾಲ್‌ನಿಂದ ಓಡುಹೋಗಲು ಯತ್ನಿಸಿದಾಗ ತುರ್ತು ನಿರ್ಗಮನದ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದೆ. ಗುಂಡಿನ ದಾಳಿಯ ಘಟನೆಯ ನಂತರ ರಷ್ಯಾದ ಕಾನೂನು ಜಾರಿ ಅಧಿಕಾರಿಗಳು ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ಸ್ಥಳದ ಬಳಿ ರಕ್ಷಣಾ ಪಡೆಗಳನ್ನು ಇರಿಸಿ ಕಟ್ಟೆಚ್ಚರವನ್ನು ವಹಿಸಿದ್ದಾರೆ.

ಘಟನೆ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೋರ್ವರು ರಾಯಿಟರ್ಸ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ,  ಭಯೋತ್ಪಾದನೆ ದಾಳಿ ನಡೆದಾಗ ಮೊದಲು ಕಾಲ್ತುಳಿತ ಪ್ರಾರಂಭವಾಯಿತು. ಎಲ್ಲರೂ ಕಿರುಚಾಡುತ್ತಾ ಓಡುತ್ತಿದ್ದರು ಎಂದು ಭಯಾನಕತೆಯನ್ನು ವಿವರಿಸಿದ್ದಾರೆ. ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ದಾಳಿಯನ್ನು ದೊಡ್ಡ ದುರಂತ ಎಂದಿದ್ದು, ದಾಳಿ ನಡೆದ ಸ್ಥಳಕ್ಕೆ ಕನಿಷ್ಠ 50 ಆಂಬುಲೆನ್ಸ್‌ಗಳನ್ನು ಕಳುಹಿಸಿ ರಕ್ಷಣಾ ಕಾರ್ಯ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...