Homeಮುಖಪುಟಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

- Advertisement -
- Advertisement -

ಉತ್ತರಾಖಂಡದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ವಿವಾದಾತ್ಮಕ ಪೋಸ್ಟ್ ಕುರಿತು, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಸ್ಪಷ್ಟನೆ ನೀಡಿದ್ದಾರೆ.

“ಮಂಡಿಯಲ್ಲಿ (ಮಾರುಕಟ್ಟೆ) ಪ್ರಸ್ತುತ ದರ ಎಷ್ಟು ಎಂದು ಯಾರಾದರೂ ಹೇಳಬಹುದೇ?” ಎಂದು ಸುಪ್ರಿಯಾ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. “ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದು, ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಮತ್ತು ಪಕ್ಷದ ನಾಯಕರಾದ ಎಚ್‌ಎಸ್ ಅಹಿರ್ ವಿರುದ್ಧ ಅವರ ‘ಅಶ್ಲೀಲ ಮತ್ತು ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ‘ಕಟ್ಟುನಿಟ್ಟಿನ ಕ್ರಮ’ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ’ ಎಂದು ಕಂಗನಾ ರಣಾವತ್ ಸೋಮವಾರ ಹೇಳಿದ್ದಾರೆ.

“ಸುಪ್ರಿಯಾ ಶ್ರಿನಾಟೆ ಮತ್ತು ಅಹಿರ್ ಅವರ ಅವಮಾನಕರ ನಡವಳಿಕೆಯಿಂದ ಎನ್‌ಸಿಡಬ್ಲ್ಯೂ ದಿಗ್ಭ್ರಮೆಗೊಂಡಿದೆ. ಅಂತಹ ನಡವಳಿಕೆಯು ಅಸಹನೀಯವಾಗಿದೆ ಮತ್ತು ಮಹಿಳೆಯರ ಘನತೆಗೆ ವಿರುದ್ಧವಾಗಿದೆ. (ಎನ್‌ಸಿಡಬ್ಲ್ಯೂ ಮುಖ್ಯಸ್ಥೆ) ರೇಖಾ ಶರ್ಮಾ ಅವರು ಇಸಿಐಗೆ ಪತ್ರವನ್ನು ಕಳುಹಿಸಿದ್ದು, ಅವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಎಲ್ಲ ಮಹಿಳೆಯರಿಗೆ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯೋಣ” ಎಂದು ಎನ್‌ಸಿಡಬ್ಲ್ಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ಕುರಿತು ಶ್ರಿನಾಟೆ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶರ್ಮಾ, “ನೀವು (ಕಂಗನಾ) ಹೋರಾಟಗಾರ್ತಿ ಮತ್ತು ಹೊಳೆಯುವ ತಾರೆ; ಹೊಳೆಯುತ್ತಿರಿ, ಆಲ್ ದಿ ಬೆಸ್ಟ್. ನಾನು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಫೊಸ್ಟ್ ಮಾಡಿದ್ದಾರೆ.

ಕಾಂಗ್ರೆಸ್‌ಗಾಗಿ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸುವ ಶ್ರೀನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ ನಂತರ ಸೋಮವಾರ ಈ ವಿವಾದ ಪ್ರಾರಂಭವಾಯಿತು. ‘ಹಲವು ಜನರು’ ತನ್ನ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ ಮತ್ತು ಅಲ್ಲಿಂದ ಯಾರೋ ‘ಅತ್ಯಂತ ಅನುಚಿತ’ ಪೋಸ್ಟ್ ಮಾಡಿದ್ದಾರೆ, ಅದನ್ನು ಅಳಿಸಲಾಗಿದೆ ಎಂದು ಶ್ರಿನಾಟೆ ನಂತರದಲ್ಲಿ  ಸ್ಪಷ್ಟಪಡಿಸಿದ್ದಾರೆ.

“ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತ್‌ನ ಕಾಂಗ್ರೆಸ್ ಮುಖಂಡ ಅಹಿರ್ ಕೂಡ ಇದೇ ರೀತಿಯ ವಿವರಣೆ ನೀಡಿದ್ದಾರೆ.

“ನನ್ನ ಎಕ್ಸ್‌ ಖಾತೆಗಳಿಗೆ ಪ್ರವೇಶವನ್ನು ಹೊಂದಿರುವ ಯಾರೋ ಸಂಪೂರ್ಣವಾಗಿ ಅಸಹ್ಯಕರ ಮತ್ತು ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ, ಅದನ್ನು ತೆಗೆದುಹಾಕಲಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದ್ದರೂ, ಅದರ ಯಾವುದೇ ಹಿರಿಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

0
2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು...