Homeಕರ್ನಾಟಕಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

ಕೋಲಾರ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ಶಾಸಕರ ಪಟ್ಟು, ರಾಜೀನಾಮೆ ಬೆದರಿಕೆ

- Advertisement -
- Advertisement -

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಸಚಿವ ಕೆ.ಎಚ್. ಮುನಿಯಪ್ಪ ಕುಟುಂಬಕ್ಕೆ ಕೊಡಬಾರದು ಎಂದು ಜಿಲ್ಲೆಯ ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಹಾಗೂ ಮುಖಂಡರು ಪಟ್ಟು ಹಿಡಿದಿದ್ದಾರೆ.

ಒಂದು ವೇಳೆ ಮುನಿಯಪ್ಪ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ನಾವೆಲ್ಲರೂ ರಾಜೀನಾಮೆ ನೀಡುತ್ತೇವೆ ಎಂದು ಬ್ಲಾಕ್‌ಮೇಲ್ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಒಳಜಗಳವನ್ನು ಟೀಕಿಸುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ, ಕೋಲಾರದ ಕಾಂಗ್ರೆಸ್‌ ಮುಖಂಡರ ಬಹಿರಂಗ ಜಗಳ ದೊಡ್ಡ ಹೊಡೆತವಾಗಿದೆ. ಪಕ್ಷದ ಐವರು ಶಾಸಕರು (ವಿಧಾನಸಭೆ ಸದಸ್ಯರು) ಮತ್ತು ಇಬ್ಬರು ಎಂಎಲ್‌ಸಿಗಳು (ವಿಧಾನ ಪರಿಷತ್ ಸದಸ್ಯರು) ತಾವು ಸೂಚಿಸಿದವರಿಗೆ ಟಿಕೆಟ್ ಕೈ ತಪ್ಪಿದ ಕಾರಣ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಈಗಾಗಲೇ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಕೋಲಾರ ಕ್ಷೇತ್ರದಿಂದ ಪಕ್ಷ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂಬುದು ಖಚಿತವಾಗುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್, “ನಾವು (ಮುನಿಯಪ್ಪ) ಕುಟುಂಬದ ಗುಲಾಮರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪಕ್ಷವು ಕುಟುಂಬದೊಳಗೆ ಟಿಕೆಟ್ ಹಂಚುತ್ತದೆ ಎಂದು ಶಾಸಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವುದಾಗಿ ಪಕ್ಷದ ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದಾರೆ. ಪಕ್ಷದ ಹೈಕಮಾಂಡ್ ತಮ್ಮ ಅಭಿಪ್ರಾಯಗಳನ್ನು ಆಲಿಸಿದೆ. ಆದರೆ, ತಮ್ಮ ಬೇಡಿಕೆಗಳಿಗೆ ಕಿವಿಗೊಡಲಿಲ್ಲ ಎಂದು ಆರೋಪಿಸಿದರು.

ಕೋಲಾರ ಲೋಕಸಭಾ ಚುನಾವಣಾ ಟಿಕೆಟ್​ ವಿಚಾರದಲ್ಲಿ ಕಾಂಗ್ರೆಸ್​ ನಾಯಕರ ಜಂಗೀಕುಸ್ತಿ ಚುನಾವಣೆ ಮುಕ್ತಾಯವಾದರೂ ನಿಲ್ಲುವ ಲಕ್ಷಣ ಕಾಣಿಸ್ತಿಲ್ಲ. ಸಚಿವ ಕೆ.ಹೆಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್​ ಖಚಿತವಾಗುತ್ತಿದ್ದಂತೆಯೇ ಕೋಲಾರ ಜಿಲ್ಲೆಯ ಮೂವರು ಶಾಸಕರು ಹಾಗು ಇಬ್ಬರು ಪರಿಷತ್​ ಸದಸ್ಯರು ರಾಜೀನಾಮೆ ಪ್ರಹಸನಕ್ಕೆ ಮುಂದಾಗಿದ್ದಾರೆ.

ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್​ ನಿರ್ಧಾರಕ್ಕೆ ಬಿಡೋಣ, ಹೈಕಮಾಂಡ್​ ಯಾರಿಗೆ ಟಿಕೆಟ್​​ ಕೊಡುತ್ತದೆ ಅವರ ಪರವಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಗೆಲ್ಲಿಸಿಕೊಂಡು ಬರೋಣ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ರಮೇಶ್​ ಕುಮಾರ್​ ಹಾಗು ಕೆ.ಹೆಚ್​ ಮುನಿಯಪ್ಪರನ್ನು ಮುಖಾಮುಖಿ ಕೂರಿಸಿಕೊಂಡು ನಡೆಸಿದ ಸಂಧಾನ ಸಭೆಯಲ್ಲಿ ಒಂದು ಸಾಲಿನ ಅಜೆಂಡಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದರು. ಆದರೆ, ಹೈಕಮಾಂಡ್​ ಆಯ್ಕೆ ಚಿಕ್ಕಪೆದ್ದಣ್ಣ ಅನ್ನೋದು ಖಚಿತ ಆಗುತ್ತಿದ್ದಂತೆ ರಮೇಶ್​ ಕುಮಾರ್​ ಬಣದ ನಾಯಕರು ಹೈಡ್ರಾಮಾ ಶುರು ಮಾಡಿದ್ದಾರೆ. ಕಳೆದ ವಾರ ಎರಡೂ ಬಣದ ನಾಯಕರು ದೆಹಲಿಯ ಖರ್ಗೆ ನಿವಾಸದಲ್ಲಿ ಮಾತುಕತೆ ನಡೆಸಿದ್ದರು.

ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಪರಿಷತ್​ ಸದ್ಯರಾದ ನಸೀರ್ ಅಹ್ಮದ್, ಅನಿಲ್ ಕುಮಾರ್ ಸೇರಿ ಐವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಲೂರು ಶಾಸಕ ಕೆ.ವೈ ನಂಜೇಗೌಡ, “ಇಂದು ಕೋಲಾರ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು, ಇಬ್ಬರು ಎಂಎಲ್‌ಸಿಗಳು ರಾಜಿನಾಮೆ ನೀಡುತ್ತೇವೆ” ಎಂದು ಹೇಳಿದ್ದಾರೆ. ಇಂದು ಮಧ್ಯಾಹ್ನ ಸ್ಪೀಕರ್ ಕಚೇರಿ ಹಾಗು ಸಂಜೆ ವೇಳೆಗೆ ಮಂಗಳೂರಿಗೆ ತೆರಳಿ ಸ್ಪೀಕರ್ ಖಾದರ್​ಗೆ ರಾಜೀನಾಮೆ ಪತ್ರ ನೀಡುತ್ತೇವೆ ಎಂದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ನಾಯಕರ ಕಿತ್ತಾಟದ ಬಗ್ಗೆ ಮಾತನಾಡಿರುವ ಸಚಿವ ಕೆ ಎಚ್ ಮುನಿಯಪ್ಪ, “ಇವತ್ತು ಸಾಯಂಕಾಲ ಟಿಕೆಟ್​ ಯಾರಿಗೆ ಎಂಬುದು ಖಚಿತವಾಗಲಿದೆ. ರಮೇಶ್ ಕುಮಾರ್ ಆದಿಯಾಗಿ ಎಲ್ಲರ ಜೊತೆಗೆ ಚರ್ಚೆ ಮಾಡಿದ್ದೇವೆ. ಕೊತ್ತೂರು ಮಂಜುನಾಥ್, ನಂಜೇಗೌಡ, ಅನಿಲ್ ಕುಮಾರ್ ಸೇರಿ ಎಲ್ಲರ ಜೊತೆಗೂ ಚರ್ಚೆ ಆಗಿದೆ. ನಾನು ಕೋಲಾರದಲ್ಲಿ ಏಳು ಬಾರಿ ಗೆದ್ದಿದ್ದೇನೆ, ಅನುಭವ ಇದೆ. ಅವಕಾಶ ಮಾಡಿಕೊಡಿ ಎಂದು ಎಲ್ಲರಿಗೂ ಮನವಿ ಮಾಡಿದ್ದೇನೆ.ಟಿಕೆಟ್ ಸಿಗಬಹುದು ಎಂಬ ಆಶಾಭಾವನೆ ಇದೆ” ಎಂದರು.

“ಕೋಲಾರ-ಚಿಕ್ಕಬಳ್ಳಾಪುರ ತಡವಾದರೂ ಕೂಡ ಒಗ್ಗಟ್ಟಾಗಿದ್ದೇವೆ” ಎಂದರು. ಕೆಲ ಶಾಸಕರ ರಾಜೀನಾಮೆ ನೀಡುತ್ತೇವೆ ಎಂಬ ಬೆದರಿಕೆ ವಿಚಾರದ ಬಗ್ಗೆ ಮಾತನಾಡಿ, “ಅಭ್ಯರ್ಥಿ ಯಾರಾಗಬೇಕು ಎಂಬುದು ರಮೇಶ್ ಕುಮಾರ್ ಹಾಗೂ ಸಚಿವರ ಉಪಸ್ಥಿತಿಯಲ್ಲೇ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ ಅಂದಿದ್ದೇವೆ. ಇದಕ್ಕೆ ಮುಂದಾಳತ್ವ ರಮೇಶ್ ಕುಮಾರ್” ಎಂದು ಹೇಳುವ ಮೂಲಕ ಟಿಕೆಟ್ ತಮ್ಮ​ ಕುಟುಂಬಕ್ಕೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನಿಗಾಗಿ ಚೆನ್ನೈನಾದ್ಯಂತ ತೀವ್ರ ಶೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...