Homeಮುಖಪುಟಕೇಜ್ರಿವಾಲ್ ಬಂಧನ, ಕಾಂಗ್ರೆಸ್ ಖಾತೆ ಸ್ಥಗಿತ ವಿಚಾರ ಮತ್ತೊಮ್ಮೆ ಪ್ರಸ್ತಾಪಿಸಿದ ಯುಎಸ್: ಮುಕ್ತ, ನ್ಯಾಯಸಮ್ಮತ ಕಾನೂನು...

ಕೇಜ್ರಿವಾಲ್ ಬಂಧನ, ಕಾಂಗ್ರೆಸ್ ಖಾತೆ ಸ್ಥಗಿತ ವಿಚಾರ ಮತ್ತೊಮ್ಮೆ ಪ್ರಸ್ತಾಪಿಸಿದ ಯುಎಸ್: ಮುಕ್ತ, ನ್ಯಾಯಸಮ್ಮತ ಕಾನೂನು ಪ್ರಕ್ರಿಯೆಗೆ ಆಗ್ರಹ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಜಾಗತಿಕ ಮಟ್ಟದಲ್ಲಿ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕೇಜ್ರಿವಾಲ್ ಬಂಧನ ಮತ್ತು ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಕುರಿತು ಯುಎಸ್ ಮತ್ತೊಮ್ಮೆ ಹೇಳಿಕೆ ಕೊಟ್ಟಿದೆ.

ಕೇಜ್ರಿವಾಲ್ ವಿರುದ್ದದ್ದ ಕಾನೂನು ಪ್ರಕ್ರಿಯೆಯು ‘ಮುಕ್ತ ಮತ್ತು ನ್ಯಾಯ ಸಮ್ಮತವಾಗಿರಬೇಕು’ ಎಂದು ಯುಎಸ್‌ನ ವಿದೇಶಾಂಗ ಇಲಾಖೆಯ ವಕ್ತಾರ ಹೇಳಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಭಾರತದಲ್ಲಿನ ಯುಎಸ್‌ ಹಿರಿಯ ರಾಯಭಾರಿ ಗ್ಲೊರಿಯಾ ಬರ್ಬೆನಾ ಅವರನ್ನು ಗುರುವಾರ ಕರೆಸಿಕೊಂಡ ವಿದೇಶಾಂಗ ಇಲಾಖೆ ಯುಎಸ್‌ನ ಹೇಳಿಕೆಯನ್ನು ಖಂಡಿಸಿತ್ತು.

ಆದರೆ, ಯುಎಸ್‌ ಮತ್ತೊಮ್ಮೆ ಕೇಜ್ರಿವಾಲ್ ಬಂಧನ ಮತ್ತು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳ ಸ್ಥಗಿತದ ಕುರಿತು ಪ್ರತಿಕ್ರಿಯೆ ನೀಡಿದೆ.

“ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಮತ್ತು ಇತರ ಪ್ರಕ್ರಿಯೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚುನಾವಣೆಗೂ ಮುನ್ನ ಆದಾಯ ತೆರಿಗೆ ಅಧಿಕಾರಿಗಳು ತಮ್ಮ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್‌ ಪಕ್ಷದ ಆರೋಪಳ ಬಗ್ಗೆಯೂ ನಮಗೆ ತಿಳಿದಿದೆ” ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್‌ನ ವಕ್ತಾರ ಮ್ಯಾಥ್ಯೂ ಮಿಲ್ಲೆ ಹೇಳಿದ್ದಾರೆ.

ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳು ನಡೆಯಬೇಕು. ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ, ನಾವು ಸಾರ್ವಜನಿಕವಾಗಿ ಹೇಳಿರುವುದು ಪುನರುಚ್ಚಿಸುತ್ತೇನೆ, ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳು ನಡೆಯಬೇಕು” ಎಂದಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಸಮಯ ನೀಡುವಂತೆ ಜಾರಿ ನಿರ್ದೇಶನಾಲಯ ಬುಧವಾರ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದೆ.

ಇಡಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಈ ಅರ್ಜಿಯನ್ನು ಮಂಗಳವಾರವಷ್ಟೇ ಸಲ್ಲಿಸಲಾಗಿದ್ದು, ತಮ್ಮ ನಿಲುವು ದಾಖಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ. ಅಲ್ಲದೆ ಮಧ್ಯಂತರ ಪರಿಹಾರಕ್ಕೂ ಸ್ಪಂದಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೆಹಲಿ ನ್ಯಾಯಾಲಯ ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ. ಇಂದು ಕಸ್ಟಡಿ ಅವಧಿ ಮುಗಿಯುವ ಹಿನ್ನೆಲೆ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವಿವರವಾದ ಉತ್ತರವನ್ನು ಇಂದು ನ್ಯಾಯಾಲಯಕ್ಕೆ ಕೇಜ್ರಿವಾಲ್ ನೀಡಲಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ : “ದೆಹಲಿ ಸರ್ಕಾರವನ್ನು ಜೈಲಿನಿಂದ ನಡೆಸುವಂತಿಲ್ಲ..”; ಲೆಫ್ಟಿನೆಂಟ್ ಜನರಲ್ ಸಕ್ಸೇನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...