Homeಮುಖಪುಟಎನ್‌ಡಿಎ ಮೈತ್ರಿ ಪಕ್ಷದ ನಾಯಕನ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಕ್ತಾಯಗೊಳಿಸಿದ ಸಿಬಿಐ

ಎನ್‌ಡಿಎ ಮೈತ್ರಿ ಪಕ್ಷದ ನಾಯಕನ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮುಕ್ತಾಯಗೊಳಿಸಿದ ಸಿಬಿಐ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿ ಪಕ್ಷ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣ) ನಾಯಕ ಪ್ರಫುಲ್ ಪಟೇಲ್ ವಿರುದ್ಧ 2017ರಲ್ಲಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮುಕ್ತಾಯಗೊಳಿಸಿದೆ.

ಮೇ 2017ರಲ್ಲಿ, ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ, ಏರ್ ಇಂಡಿಯಾಕ್ಕೆ ವಿಮಾನವನ್ನು ಬಾಡಿಗೆಗೆ ನೀಡುವಲ್ಲಿನ ಅಕ್ರಮಗಳ ಆರೋಪಗಳ ತನಿಖೆಗಾಗಿ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಏರ್ ಇಂಡಿಯಾದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಸುಮಾರು ಏಳು ವರ್ಷಗಳ ಕಾಲ ಪ್ರಕರಣದ ತನಿಖೆ ನಡೆಸಿದ ನಂತರ, ಸಿಬಿಐ ತನಿಖೆಯನ್ನು ಮುಕ್ತಾಯಗೊಳಿಸಿದೆ. ಪ್ರಫುಲ್ ಪಟೇಲ್ ಮತ್ತು  ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಮತ್ತು ಏರ್ ಇಂಡಿಯಾದ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣವನ್ನು ಮುಚ್ಚಿ ಹಾಕಿರುವ ಕುರಿತು ವರದಿಯನ್ನು ಮಾ.2024ರಲ್ಲಿ ಸಕ್ಷಮ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿದೆ.

ಪ್ರಫುಲ್ ಪಟೇಲ್‌ ಈ ಹಿಂದೆ ಮಾತನಾಡುತ್ತಾ, ಜೂನ್ 23ರಂದು ನಾನು ಎನ್‌ಡಿಎ ಸಭೆಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಪಾಟ್ನಾಕ್ಕೆ ಹೋದಾಗ ನನಗೆ ನಗು ಬಂತು. ಪವಾರ್ ಸಾಹೇಬರ ಜೊತೆ ಪಾಟ್ನಾದಲ್ಲಿ ನಡೆದ ಜಂಟಿ ವಿರೋಧ ಪಕ್ಷದ ಸಭೆಗೆ ಹೋಗಿದ್ದ ನನಗೆ ಅಲ್ಲಿನ ದೃಶ್ಯ ನೋಡಿ ನಗು ಬಂತು. ಅಲ್ಲಿ 17 ವಿರೋಧ ಪಕ್ಷಗಳಿದ್ದವು, ಅವುಗಳಲ್ಲಿ ಏಳು ಪಕ್ಷಗಳು ಲೋಕಸಭೆಯಲ್ಲಿ ಕೇವಲ 1 ಸಂಸದರನ್ನು ಹೊಂದಿದ್ದವು ಮತ್ತು ಒಂದು ಪಕ್ಷಕ್ಕೆ ಸಂಸದರೇ ಇರಲಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪಟೇಲ್ ಇಂಡಿಯಾ ಮೈತ್ರಿ ಕೂಟವನ್ನು ಲೇವಡಿ ಮಾಡಿಕೊಂಡು ಹೇಳಿದ್ದಾರೆ.

ಫೆಬ್ರವರಿ 15 ರಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ರಾಜ್ಯಸಭಾ ಚುನಾವಣೆಗೆ ಪಟೇಲ್ ಅವರನ್ನು ಕಣಕ್ಕಿಳಿಸುವುದಾಗಿ ಹೇಳಿತ್ತು.

ಆಗಿನ ನಾಗರಿಕ ವಿಮಾನಯಾನ ಸಚಿವರಾಗಿದ್ದ ಪ್ರಫುಲ್ ಪಟೇಲ್ ಅವರು ಅಧಿಕಾರಿಗಳ ಜೊತೆ ಸೇರಿಕೊಂಡು ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ಗುತ್ತಿಗೆ ನೀಡಲು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡರು ಎಂದು ಆರೋಪಿಸಲಾಗಿದೆ. ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದ ನಂತರ ಸಾರ್ವಜನಿಕ ವಲಯದ ಉದ್ಯಮವಾದ ನ್ಯಾಷನಲ್ ಏವಿಯೇಷನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NACIL)ನ್ನು ರಚಿಸಲಾಯಿತು.

ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸಮಿತಿಯು ಜನವರಿ 21, 2010ರ ತನ್ನ ವರದಿಯಲ್ಲಿ ಮತ್ತು  ಸಾರ್ವಜನಿಕ ಉದ್ಯಮಗಳ ಸಮಿತಿಯು ತನ್ನ ಮಾರ್ಚ್ 12, 2010ರ ವರದಿಯಲ್ಲಿ ಅವ್ಯವಹಾರದ ಬಗ್ಗೆ ಬೆಳಕು ಚೆಲ್ಲಿದೆ. ಏರ್ ಇಂಡಿಯಾಗೆ 15 ದುಬಾರಿ ವಿಮಾನಗಳನ್ನು ಬಾಡಿಗೆಗೆ ನೀಡಲಾಗಿದ್ದು, ಇದಕ್ಕಾಗಿ ಪೈಲಟ್‌ಗಳನ್ನು ಸಹ ಸಿದ್ಧಗೊಳಿಸಿಲ್ಲ, ಇದರಿಂದಾಗಿ ಕಂಪನಿಗೆ ಭಾರಿ ನಷ್ಟ ಉಂಟಾಗಿದೆ ಎಂದು ಹೇಳಿತ್ತು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಕಸ್ಟಡಿಯಲ್ಲಿ ಕಿರುಕುಳ ನೀಡಲಾಗುತ್ತಿದೆ: ಪತ್ನಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...