Homeಮುಖಪುಟಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

- Advertisement -
- Advertisement -

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ಯಾವುದೇ ಶಾಲಾ ಶಿಕ್ಷಣವಿಲ್ಲದವರಿಗಿಂತ ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ತಿಳಿಸಿದೆ.

ಪದವೀಧರರ ನಿರುದ್ಯೋಗ ದರವು ಶೇ. 29.1 ಇದ್ದು, ಓದಲು ಅಥವಾ ಬರೆಯಲು ಬಾರದವರ ದರ ಶೇ. 3.4 ಇದೆ. ಅಂದರೆ, ಉನ್ನತ ಶಿಕ್ಷಣ ಪಡೆದವರ ನಿರುದ್ಯೋಗ ಮಟ್ಟ ಯಾವುದೇ ಶಾಲಾ ಶಿಕ್ಷಣ ಪಡೆಯವರಿಗಿಂತ ಸುಮಾರು ಒಂಬತ್ತು ಪಟ್ಟು ಹೆಚ್ಚಿದೆ. ಇನ್ನು ಮಾಧ್ಯಮಿಕ ಅಥವಾ ಉನ್ನತ ಶಿಕ್ಷಣ ಹೊಂದಿರುವ ಯುವಜನರ ನಿರುದ್ಯೋಗ ದರ ಶೇ. 18.4 ಇದ್ದು, ಆರು ಪಟ್ಟು ಹೆಚ್ಚಿದೆ ಎಂದು ಭಾರತದ ಕಾರ್ಮಿಕ ಮಾರುಕಟ್ಟೆಯ ಕುರಿತು ವರದಿಯಲ್ಲಿ ಐಎಲ್‌ಒ ಹೇಳಿದೆ.

“ಭಾರತದಲ್ಲಿ ನಿರುದ್ಯೋಗವು ಯುವ ಜನರ ಪ್ರಧಾನ ಸಮಸ್ಯೆಯಾಗಿದೆ. ವಿಶೇಷವಾಗಿ ಮಾಧ್ಯಮಿಕ ಮಟ್ಟದ ಅಥವಾ ಹೆಚ್ಚಿನ ಶಿಕ್ಷಣ ಹೊಂದಿರುವ ಯುವ ಜನರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ ಮತ್ತು ಇದು ಕಾಲಾನಂತರದಲ್ಲಿ ತೀವ್ರಗೊಂಡಿದೆ” ಎಂದು ಐಎಲ್‌ಒ ಹೇಳಿದೆ.

ಅಂಕಿ ಅಂಶಗಳು, ಕಾರ್ಮಿಕ ಬಲದ ಕೌಶಲ್ಯ ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳ ನಡುವಿನ ತೀಕ್ಷ್ಣವಾದ ಅಸಾಮರಸ್ಯವನ್ನುಈ ಸಮಸ್ಯೆಗೆ ಕಾರಣ ಎಂದಿದೆ. ಭಾರತದ ಕಳಪೆ ಶಾಲಾ ಶಿಕ್ಷಣವು ಕಾಲಾನಂತರದಲ್ಲಿ ಅದರ ಆರ್ಥಿಕ ಭವಿಷ್ಯವನ್ನು ತಡೆಯುತ್ತದೆ ಎಂಬ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಂತಹ ಪ್ರಸಿದ್ಧ ಅರ್ಥಶಾಸ್ತ್ರಜ್ಞರ ಎಚ್ಚರಿಕೆಗಳನ್ನು ವರದಿ ಒತ್ತಿ ಹೇಳಿದೆ.

“ಭಾರತದಲ್ಲಿ ಯುವ ಜನರ ನಿರುದ್ಯೋಗ ಮಟ್ಟ ಈಗ ಜಾಗತಿಕ ಮಟ್ಟಕ್ಕಿಂತ ಹೆಚ್ಚಾಗಿದೆ. ಕೃಷಿಯೇತರ ವಲಯಗಳಲ್ಲಿ ವಿದ್ಯಾವಂತ ಯುವ ಜನರಿಗೆ ಲಾಭದಾಯಕ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಭಾರತದ ಆರ್ಥಿಕತೆ ವಿಫಲವಾಗಿದೆ. ಇದು ನಿರುದ್ಯೋಗ ಹೆಚ್ಚಳಕ್ಕೆ ಕಾರಣ” ಎಂದು ಐಎಲ್‌ಒ ಹೇಳಿದೆ.

ಚೀನಾದಲ್ಲಿ, 16-24 ವರ್ಷ ವಯಸ್ಸಿನ ಯುವ ಜನರ ನಿರುದ್ಯೋಗ ದರವು ವರ್ಷದ ಮೊದಲ ಎರಡು ತಿಂಗಳಲ್ಲಿ ಶೇ. 15.3ಕ್ಕೆ ಏರಿದೆ. ಇದು ನಗರ ಜನಸಂಖ್ಯೆಯ ಶೇ. 5.3ರ ದರಕ್ಕಿಂತ ಮೂರು ಪಟ್ಟು ಹೆಚ್ಚಿದೆ.

ಯುವ ನಿರುದ್ಯೋಗಿಗಳ ವಿಷಯದಲ್ಲಿ ಭಾರತೀಯರ ಪಾಲು: 15-29 ವರ್ಷದೊಳಗಿನ ನಿರುದ್ಯೋಗಿಗಳ ದರ 2000 ಇಸವಿಯಲ್ಲಿ ಶೇ. 88.6 ಇತ್ತು. ಅದು 2022 ರಲ್ಲಿ ಶೇ. 82.9ಕ್ಕೆ ಇಳಿದಿದೆ. ಆದರೆ, ಈ ಪೈಕಿ ವಿದ್ಯಾವಂತ ಯುವ ಜನರ ಪಾಲು ಈ ಅವಧಿಯಲ್ಲಿ ಶೇ. 54.2 ರಿಂದ ಶೇ. 65.7ಕ್ಕೆ ಏರಿಕೆಯಾಗಿದೆ ಎಂದು ಐಎಲ್‌ಒ ಅಂಕಿ ಅಂಶಗಳು ತೋರಿಸಿವೆ.

ವಿದ್ಯಾವಂತ ನಿರುದ್ಯೋಗಿಗಳ ಪೈಕಿ ಮಹಿಳೆಯರ ಪ್ರಮಾಣ ಹೆಚ್ಚಿದೆ. ಪುರುಷರ ನಿರುದ್ಯೋಗ ಪ್ರಮಾಣ ಶೇ.62.2 ಇದ್ದರೆ, ಮಹಿಳೆಯರ ಪ್ರಮಾಣ ಶೇ.76.7 ಇದೆ. ಅಂಕಿ ಅಂಶಗಳು ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಮಟ್ಟ ಹೆಚ್ಚಿದೆ ಎಂದು ತೋರಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ಕಡಿಮೆ, ಅಂದರೆ ಶೇ. 25 ಮಹಿಳಾ ಕಾರ್ಮಿಕರ ಭಾಗವಹಿಸುವಿಕೆಯ ದರವನ್ನು ಹೊಂದಿದೆ. ಫುಡ್ ಡೆಲಿವರಿಯಂತಹ ಕಡಿಮೆ ಸಂಬಳದ ಮತ್ತು ಖಾತ್ರಿಯಲ್ಲದ ಉದ್ಯೋಗ ದರ ಹೆಚ್ಚುತ್ತಿರುವ ಬಗ್ಗೆ ಐಎಲ್‌ಒ ಎಚ್ಚರಿಸಿದೆ.

ಇದನ್ನೂ ಓದಿ : ವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...