Homeಕರ್ನಾಟಕಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

ಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

- Advertisement -
- Advertisement -

ಇತ್ತೀಚೆಗೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿಗೌಡ ಅವರು ಇಂದು (ಮಾ.30) ಕಾಂಗ್ರೆಸ್‌ಗೆ ಮರಳಿದ್ದಾರೆ.

ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್‌ಖೇರಾ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ತೆಜಸ್ವಿನಿಗೌಡ ಅವರು, ‘ಕಾಂಗ್ರೆಸ್ ಮಾತನಾಡಲ್ಲ, ಕೆಲಸ ಮಾಡುತ್ತದೆ’ ಇತಿಹಾಸ ನಮ್ಮ ಮುಂದಿದೆ. ಇದು ಉತ್ತಮ ಸಮಯ. ನಾನು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಲು ಬಯಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳು ನಿರ್ಭಯವಾಗಿ ಉಳಿಯಬೇಕು.” ಎಂದು ಹೇಳಿದರು.

ನಾನು ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೇಳಿದ್ದೆ. ಪ್ರತಾಪ್ ಸಿಂಹ ನನ್ನ ಸಹೋದರ, ಅವರಿಗೆ ಟಿಕೆಟ್ ಕೊಡದಿದ್ದರೆ ನನಗೆ ಕೊಡಿ ಎಂದಿದ್ದೆ. ಮೈಸೂರು-ಕೊಡಗು ಆಗದಿದ್ದರೆ ಬೆಂಗಳೂರು ಉತ್ತರದ ಟಿಕೆಟ್ ಕೊಡಿ ಎಂದಿದ್ದೆ. ಆದರೆ, ಬಿಜೆಪಿಯವರು ನನಗೆ ಟಿಕೆಟ್ ಕೊಟ್ಟಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಜೆಡಿಎಸ್ ನಮಗೆ ಅವತ್ತೂ ವಿರೋಧಿ, ಇವತ್ತೂ ವಿರೋಧಿ. ಅಂತಹ ಪಕ್ಷದ ಜೊತೆ ಮೈತ್ರಿ ಯಾಕೆ ಬೇಕಿತ್ತು? ಬಿಜೆಪಿ ನಾಯಕರಿಗೆ ಒಕ್ಕಲಿಗರ ಮೇಲೆ ನಂಬಿಕೆ ಇಲ್ವಾ? ಸಿ.ಟಿ ರವಿ, ಪ್ರತಾಪ್ ಸಿಂಹ, ಅಶ್ವತ್ ನಾರಾಯಣ, ಡಿ.ವಿ ಸದಾನಂದ ಗೌಡರಂತ ಫೈರ್ ಬ್ರ್ಯಾಂಡ್‌ಗಳಿಗೆ ಟಿಕೆಟ್ ತಪ್ಪಿಸಿದ್ದೀರಲ್ವಾ, ಅವರ ಮೇಲೆ ನಂಬಿಕೆ ಇಲ್ವಾ? ನಾವು ಹೋಗಿ ಜೆಡಿಎಸ್‌ನವರ ಕಾಲಿಗೆ ಬೀಳಬೇಕಾ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಎಲ್ಲರನ್ನು ಒಳಗೊಂಡ ನಾಯಕ. ಡಿ.ಕೆ ಶಿವಕುಮಾರ್ ನಮ್ಮ ಸಮುದಾಯದ ಸರ್ವೋಚ್ಚ ನಾಯಕ. ಅವರು ನಮ್ಮ ಸಮುದಾಯಕ್ಕೆ ಎಲ್ಲವನ್ನೂ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷ ಮುಂದುವರೆಯುತ್ತಿದೆ. ಪಕ್ಷ ಎಲ್ಲಿ ಹೋಗಿ ಪ್ರಚಾರ ಮಾಡಲು ಹೇಳುತ್ತದೋ, ಅಲ್ಲಿ ಪ್ರಚಾರ ಮಾಡಲು ನಾನು ಸಿದ್ದ ಎಂದು ಹೇಳಿದರು.

ತೇಜಸ್ವಿನಿ ಘರ್ ವಾಪ್ಸಿ

ಪತ್ರಕರ್ತೆಯಾಗಿದ್ದ ತೇಜಸ್ವಿನಿ ಗೌಡ ಅವರು 2004ರಲ್ಲಿ ಕಾಂಗ್ರೆಸ್‌ ಸೇರಿದ್ದರು. ಅಲ್ಲದೆ, ಅದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿದ್ದರು.

ಬಳಿಕ, 2014ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಇದೀಗ, ಅವರು ಕಾಂಗ್ರೆಸ್‌ಗೆ ಮರಳಿ ಬಂದಿದ್ದಾರೆ. ಅವರು ಕಾಂಗ್ರೆಸ್‌ನಿಂದಲೂ ಎಂಎಲ್‌ಸಿ ಆಗುವ ಸಾಧ್ಯತೆಗಳಿವೆ.

ಇದನ್ನೂ ಓದಿ : ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...