Homeಮುಖಪುಟಪ್ರಮುಖ ಸಮಸ್ಯೆಗಳ ಬಗ್ಗೆ ಮೌನ; ಉತ್ತರಪ್ರದೇಶದ ಜನರ ಪರವಾಗಿ ಮೋದಿಗೆ ಹಲವು ಪ್ರಶ್ನೆಗಳನ್ನು ಕೇಳಿದ ಜೈರಾಮ್...

ಪ್ರಮುಖ ಸಮಸ್ಯೆಗಳ ಬಗ್ಗೆ ಮೌನ; ಉತ್ತರಪ್ರದೇಶದ ಜನರ ಪರವಾಗಿ ಮೋದಿಗೆ ಹಲವು ಪ್ರಶ್ನೆಗಳನ್ನು ಕೇಳಿದ ಜೈರಾಮ್ ರಮೇಶ್

- Advertisement -
- Advertisement -

ಉತ್ತರ ಪ್ರದೇಶದ ಜನರ ಮೇಲೆ ಪರಿಣಾಮ ಬೀರುವ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಪೂರ್ವಕವಾಗಿ ಮೌನವನ್ನು ವಹಿಸಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದ್ದು, ಮೀರತ್‌ನಲ್ಲಿ ಪ್ರಧಾನಿಯವರ ರ್ಯಾಲಿಗೆ ಮುನ್ನ, ಉತ್ತರ ಪ್ರದೇಶದ ಜನರ ಪರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಧಾನಿ ಮೋದಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಜನರ ಪ್ರಮುಖ ವಿಷಯಗಳ ಬಗ್ಗೆ ಅವರು ಇಲ್ಲಿಯವರೆಗೆ ಉದ್ದೇಶಪೂರ್ವಕ ಮೌನವನ್ನು ವಹಿಸಿದ್ದಾರೆ ಎಂದ ಜೈರಾಮ್ ರಮೇಶ್,  ಉತ್ತರ ಪ್ರದೇಶದ ಜನರು ಪ್ರಧಾನಿಯಿಂದ ಕೇಳಲು ಆಶಿಸುತ್ತಿರುವ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿದ್ದಾರೆ.

ಸಾರ್ವಜನಿಕವಾಗಿ, ಪ್ರಧಾನಿ ಮೋದಿ ಮಹಿಳಾ ಸಬಲೀಕರಣ ಮತ್ತು ‘ನಾರಿ ಶಕ್ತಿ’ ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ ಆದರೆ ಅವರು ತಮ್ಮ ಸ್ವಂತ ಪಕ್ಷದಲ್ಲೂ ಭಾರತೀಯ ಮಹಿಳೆಯರನ್ನು ಪದೇ ಪದೇ ವಿಫಲಗೊಳಿಸಿದ್ದಾರೆ. ಕೇವಲ ಎರಡು ವಾರಗಳ ಹಿಂದೆ, ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆ ಪಕ್ಷವನ್ನು ತೊರೆದರು. ಅವರು ಪಕ್ಷದಲ್ಲಿ ಮಹಿಳಾ ಕಾರ್ಯಕರ್ತರಿಗೆ ಅವಮಾನ ಮಾಡಲಾಗುತ್ತಿದೆ ಮತ್ತು ಕೆಟ್ಟದಾಗಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ರಮೇಶ್ ಹೇಳಿದರು.

ಮತ್ತೊಬ್ಬ ಮಹಿಳಾ ನಾಯಕಿ, ಯುಪಿಯ ಮೊರಾದಾಬಾದ್‌ನ ಮಹಿಳಾ ಮೋರ್ಚಾದ ಅಧ್ಯಕ್ಷೆ, ಸ್ಥಳೀಯ ಮುಖಂಡರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಭಾರತದ ಮಹಿಳಾ ಕುಸ್ತಿಪಟುಗಳು ನ್ಯಾಯಕ್ಕಾಗಿ ಹೋರಾಡಿದಾಗ, ಮೋದಿ ಸರ್ಕಾರವು ತನ್ನ ರಾಜಕೀಯ ಲೆಕ್ಕಾಚಾರದಿಂದ ಮಹಿಳೆಯರಿಗೆ ದ್ರೋಹ ಬಗೆದಿದೆ. ಅಂತಿಮವಾಗಿ ಮೋದಿಯವರು ತಮ್ಮ ವೈಫಲ್ಯಗಳನ್ನು ಒಪ್ಪಿಕೊಂಡು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ನಿನ್ನೆ, ಮೋದಿ ಸರ್ಕಾರವು ಭಾರತದ ಇಬ್ಬರು ರೈತರಾದ ಚೌಧರಿ ಚರಣ್ ಸಿಂಗ್ ಮತ್ತು ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನವನ್ನು ನೀಡಿತು. ಪ್ರಧಾನಿ ಈ ಇಬ್ಬರೂ ನಾಯಕರನ್ನು ಗುರುತಿಸಿದ್ದರೂ, ಅವರು ರೈತರನ್ನು ಸತತವಾಗಿ ವಿಫಲಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

2014ರಲ್ಲಿ ಸ್ವಾಮಿನಾಥನ್ ಸಮಿತಿ ವರದಿಯನ್ನು ಜಾರಿಗೆ ತರುವುದಾಗಿ ಮೋದಿ ಆಗಾಗ್ಗೆ ಭರವಸೆಗಳನ್ನು ನೀಡುತ್ತಿದ್ದರು ಆದರೆ ನಂತರ ಅವರು ವರದಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದರು ಮತ್ತು ಭಾರತದ ರೈತರು ತಮ್ಮ ಹಕ್ಕುಗಳು ಮತ್ತು ಜೀವನೋಪಾಯಕ್ಕಾಗಿ ಪ್ರತಿಭಟಿಸಿದಾಗ ಅವರ ಹತ್ತಿಕ್ಕಿದರು ಎಂದು ರಮೇಶ್ ಹೇಳಿದ್ದಾರೆ.

ಸ್ವಾಮಿನಾಥನ್ ಆಯೋಗದ ಸೂತ್ರಕ್ಕೆ ಅನುಗುಣವಾಗಿ ಎಂಎಸ್‌ಪಿಗೆ ಕಾನೂನು ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಸ್ವಾಮಿನಾಥನ್ ಆಯೋಗದ ವರದಿಯ ಬಗ್ಗೆ ಪ್ರಧಾನಿಯವರ ನಿಲುವು ಏನು? ಎಂದು ರಮೇಶ್ ಪ್ರಶ್ನಿಸಿದ್ದಾರೆ.

ಪರೀಕ್ಷಾ ಪತ್ರಿಕೆ ಸೋರಿಕೆ ವಿಚಾರವನ್ನು ಪ್ರಸ್ತಾಪಿಸಿದ ಜೈರಾಮ್‌ ರಮೇಶ್, ಮೋದಿ ಸರ್ಕಾರದ ಆಡಳಿತದಲ್ಲಿ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಕನಿಷ್ಠ 43 ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದು, ಕನಿಷ್ಠ ಎರಡು ಕೋಟಿ ಅಭ್ಯರ್ಥಿಗಳ ಭವಿಷ್ಯವನ್ನು ಘಾಸಿಗೊಳಿಸಿದೆ. ಇತ್ತೀಚೆಗೆ, ಪೇಪರ್ ಸೋರಿಕೆಯಾದ ನಂತರ ಯುಪಿ ಪೊಲೀಸ್ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ್ದ 60 ಲಕ್ಷ ಅರ್ಜಿದಾರರು ಪರೀಕ್ಷೆಯ ರದ್ದತಿಯಿಂದ ತಮ್ಮ ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಇವು ಕೇವಲ ಸಂಖ್ಯೆಗಳಲ್ಲ, ಇವುಗಳು  ಭಾರತದ ಯುವಕರ ಭರವಸೆ ಮತ್ತು ಕನಸುಗಳು ಭಗ್ನವಾಗಿರುವುದು ಎಂದು ಹೇಳಿದ್ದಾರೆ.

ನಮ್ಮ ಯುವಕರಿಗೆ ಆಗಿರುವ ಹಾನಿಯನ್ನು ಪರಿಹರಿಸಲು ಮೋದಿಯವರ ದೂರದೃಷ್ಟಿ ಏನು? ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರವು ತನ್ನ ತಪ್ಪುಗಳನ್ನು ಸರಿಪಡಿಸಲು ಮತ್ತು ನಮ್ಮ ಯುವಕರಿಗೆ ಅಂತಹ ಅನ್ಯಾಯವನ್ನು ಎಂದಿಗೂ ಎದುರಿಸಬಾರದು ಎಂದು ಖಚಿತಪಡಿಸಿಕೊಳ್ಳಲು ಏನು ಮಾಡುತ್ತಿದೆ? ಈ ವಿಷಯಗಳ ಬಗ್ಗೆ ಪ್ರಧಾನಿ ತಮ್ಮ ಮೌನವನ್ನು ಮುರಿಯಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...