Homeಮುಖಪುಟಸುಧಾಕರ್ ಕರೆ ಸ್ವೀಕರಿಸದ ಎಸ್‌.ಆರ್. ವಿಶ್ವನಾಥ್; ಮನೆ ಬಾಗಿಲಿಗೆ ಬಂದ್ರೂ 'ಡೋಂಟ್‌ ಕೇರ್' ಎನ್ನುತ್ತಿರುವ ಬಿಜೆಪಿ...

ಸುಧಾಕರ್ ಕರೆ ಸ್ವೀಕರಿಸದ ಎಸ್‌.ಆರ್. ವಿಶ್ವನಾಥ್; ಮನೆ ಬಾಗಿಲಿಗೆ ಬಂದ್ರೂ ‘ಡೋಂಟ್‌ ಕೇರ್’ ಎನ್ನುತ್ತಿರುವ ಬಿಜೆಪಿ ಶಾಸಕ

- Advertisement -
- Advertisement -

ಭಾರೀ ಪೈಪೋಟಿಯ ನಡುವೆಯೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಜಿ ಸಚಿವ ಕೆ.ಸುಧಾಕರ್ ಯಶಸ್ವಿಯಾಗಿದ್ದಾರೆ. ಆದರೆ, ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಸ್ವಪಕ್ಷೀಯರ ವಿರೋಧ ತಲೆನೋವಾಗಿ ಪರಿಣಮಿಸಿದೆ.

ಇಡೀ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದು, ಶಾಸಕ ಎಸ್‌.ಆರ್‌. ವಿಶ್ವನಾಥ್ ಅವರು ಸುಧಾಕರ್ ಸ್ಫರ್ಧೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗ ಅಲೋಕ್‌ ಅವರಿಗೆ ಟಿಕೆಡ್ ಕೊಡಿಸುವಲ್ಲಿ ವಿಫಲರಾಗಿರುವ ಯಲಹಂಕ ಬಿಜೆಪಿ ಶಾಸಕರು, ಸುಧಾಕರ್ ಜತಗೆ ವೇದಿಕೆ ಹಂಚಿಕೊಳ್ಳುವುದಿಲ್ಲ, ಅವರ ಪರ ಪ್ರಚಾರ ನಡೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಹಲವು ಭಾರಿ ಕರೆ ಮಾಡಿದರೂ ಉತ್ತರಿಸದ ವಿಶ್ವನಾಥ್, ಸುಧಾಕರ್ ಮನೆ ಬಾಗಿಲಿಗೆ ಬಂದರೂ ಭೇಟಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಯಲಹಂಕ ಶಾಸಕರ ಈ ನಡೆಯು ಸುಧಾಕರ್‌ಗೆ ಭಾರೀ ಮುಜುಗರ ಉಂಟು ಮಾಡಿರುವುದರ ಜತೆಗೆ, ಸೋಲಿನ ಭೀತಿಗೂ ಕಾರಣವಾಗಿದೆ.

ಚಿಕ್ಕಬಳ್ಳಾಪುರದಿಂದ ಕೆ ಸುಧಾಕರ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲ ನಾಯಕರಿಗೆ ಟಿಕೆಟ್ ನಿರಾಕರಿಸಿರುವುದು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ.ಸುಧಾಕರ್ ಅವರನ್ನು ಕಣಕ್ಕಿಳಿಸುವ ಪಕ್ಷದ ನಿರ್ಧಾರ ಯಲಹಂಕದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಬೆಂಬಲಿಗರು ಇನ್ನೂ ಒಪ್ಪಿಕೊಂಡಿಲ್ಲ.

ವಿಶ್ವನಾಥ್ ಅವರು ಇದೇ ಸ್ಥಾನದಿಂದ ತಮ್ಮ ಪುತ್ರ ಅಲೋಕ್‌ಗೆ ಟಿಕೆಟ್ ನೀಡುವಂತೆ ಕೋರಿದ್ದರು. ಆದರೆ, ಪಕ್ಷವು ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಸುಧಾಕರ್ ಅವರನ್ನು ಆಯ್ಕೆ ಮಾಡಿದೆ. ಭಾನುವಾರ ಕೆ.ಸುಧಾಕರ್ ಎಸ್.ಆರ್.ವಿಶ್ವನಾಥ್ ಅವರನ್ನು ಭೇಟಿ ಮಾಡಲು ತೆರಳಿದ್ದರು, ಆದರೆ ಅವರು ಮನೆಯಲ್ಲಿಲ್ಲ ಎಂದು ತಿಳಿಸಿದ ಅವರ ಬೆಂಬಲಿಗರು, ಮನೆ ಒಳಗೂ ಕರೆಯದೇ ವಾಪಸ್ ಕಳುಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಶಾಸಕ ಎಸ್‌ಆರ್ ವಿಶ್ವನಾಥ್ ರೆಬೆಲ್ ಆಗಿದ್ದಾರೆ. ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಕೊಂಡಿರುವ ಅವರು, ವರಿಷ್ಠರ ಮಾತಿಗೂ ಕೇರ್ ಮಾಡದೆ ಸುಧಾಖರ್ ವಿರುದ್ಧವಾಗಿ ನಿಂತಿದ್ದಾರೆ. ಟಿಕೆಟ್ ಘೋಷಣೆಯಾಗಿ ವಾರವಾದರೂ ವಿಶ್ವನಾಥ್ ಮುನಿಸು ತಣಿಸುವಲ್ಲಿ ರಾಜ್ಯ ನಾಯಕರು ಮತ್ತು ಸೂಧಾಖರ್ ವಿಫಲರಾಗಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿಯಲ್ಲಿನ ಭಿನ್ನಮತ ತೀವ್ರಗೊಂಡಿದ್ದು, ಬಿಜೆಪಿ ನಾಯಕರಲ್ಲಿ ಆತಂಕ ಹೆಚ್ಚಾಗಿದೆ. ಎಸ್‌.ಆರ್. ವಿಶ್ವನಾಥ್ ಭೇಟಿ ಮಾಡಲು ಒಪ್ಪದ ಹಿನ್ನೆಲೆ ಸುಧಾಕರ್‌ಗೆ ಮುಜುಗರವುಂಟಾಗಿ ವಾಪಸ್ ತೆರಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, “ಯಲಹಂಕ ಶಾಸಕರಾದ ಎಸ್‌ಆರ್ ವಿಶ್ವನಾಥ್ ನಮ್ಮ ಸ್ನೇಹಿತರು. ಹಲವಾರು ಸಲ ನಾನು ಕರೆ ಮಾಡಿದ್ದೆ, ಮೆಸೇಜ್ ಮಾಡಿದ್ದೆ. ಅದಕ್ಕೆ ಯಾವುದೇ ಉತ್ತರ ಇಲ್ಲ. ಯಾವುದಕ್ಕೂ ಸ್ಪಂದಿಸಿರಲಿಲ್ಲ. ನಮ್ಮ ನಾಯಕರು ಯಡಿಯೂರಪ್ಪ ಅವರು ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೇ ಚುನಾವಣೆ ಕೊನೆಯಲ್ಲ. ನಮ್ಮ ನಾಯಕರು ಸಮಸ್ಯೆ ಬಗೆಹರಿಸುತ್ತಾರೆ. ಇದರ ನಡುವೆ ನಮ್ಮ ಅವರ ಭೇಟಿ ಸಾಧ್ಯವಾಗಿಲ್ಲ. ಕೆಲವು ರಾಜಕಾರಣದಲ್ಲಿ ಎಲ್ಲವು ಸರಾಗವಾಗಿ ನಡೆದರೆ ಅದು ರಾಜಕಾರಣವಲ್ಲ. ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗಬೇಕು. ನನ್ನ ಮತ್ತು ಅವರ ನಡುವೆ ವೈಯಕ್ತಿಕ ಕಲಹಗಳು ಏನು ಇಲ್ಲ. ನಾನು ಸೇರಿ ಮೋದಿ ಅವರ ಹೆಸರು ಹೇಳಿ ಮತ ಕೇಳುತ್ತಿರೋದು. ಏ.4ರಂದು ನಾಮಪತ್ರ ಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ ನಡೆಸಿ ಅಧಿಕೃತ ನಾಮಪತ್ರ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಸುಧಾಕರ್ ನಡೆಗೆ ಎಸ್‌ಆರ್ ವಿಶ್ವನಾಥ್ ಕಿಡಿಕಾರಿದ್ದಾರೆ. “ಮಾಧ್ಯಮದವರಿಗೆ ಮಾಹಿತಿ ನೀಡಿದರೆ ಸಾಕೇ? ನಮ್ಮ ಮನೆಗೆ ಬರುವಾಗ ನನಗೆ ಹೇಳೋದು ಬೇಡ್ವಾ? ನಾನ್ಯಾಕೆ ಒಬ್ಬನೇ ಮಾತಾಡಲಿ? ಹೇಳಿದ್ದರೆ ಕಾರ್ಯಕರ್ತರನ್ನು ಸೇರಿಸಿ ಅವರ ಎದುರೇ ಮಾತನಾಡುತ್ತಿದ್ದೆ. ಅಮಿತ್ ಶಾ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಅಮಿತ್ ಶಾ ಕಾರ್ಯಕ್ರಮದ ತಯಾರಿಗಳನ್ನು ನೋಡಿಕೊಳ್ಳಲು ತೆರಳುತ್ತೇನೆ” ಎಂದರು.

ದೊಡ್ಡಬಳ್ಳಾಪುರ ಬಿಜೆಪಿ ಶಾಸಕರ ಬೆಂಬಲ ಯಾರಿಗೆ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಎಸ್‌ಆರ್ ವಿಶ್ವನಾಥ್ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ದೊಡ್ಡಬಳ್ಳಾಪುರ ಬಿಜೆಪಿ ಶಾಸಕ, ರಾಜ್ಯ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಅವರ ನಡೆ ಏನು ಎಂಬುದು ಕುತೂಹಲ ಮೂಡಿದೆ. ಏಕೆಂದರೆ, ಶಾಸಕ ಧೀರಜ್ ಅವರು ವಿಶ್ವನಾಥ್ ಅವರಿಗೆ ಆಪ್ತರಾಗಿದ್ದಾರೆ; ದೊಡ್ಡಬಳ್ಳಾಪುರದಲ್ಲಿ ಧೀರಜ್ ಗೆಲುವಿಗೆ ವಿಶ್ವನಾಥ್ ಸಾಕಷ್ಟು ಶ್ರಮ ಹಾಕಿದ್ದಾರೆ ಎನ್ನಲಾಗಿದ್ದು, ಅವರು ಸುಧಾಕರ್‌ಗೆ ಸಂಪೂರ್ಣ ಬೆಂಬಲ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಕರ್ನಾಟಕದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ,

2019ರ ಸಾರ್ವತ್ರಿಕ ಚುನಾವಣೆ ನಡೆದಾಗ, 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಕೇಜ್ರಿವಾಲ್ ಕಸ್ಟಡಿ ಇಂದು ಅಂತ್ಯ: ಕೋರ್ಟ್‌ಗೆ ಹಾಜರುಪಡಿಸಲಿರುವ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...