Homeಮುಖಪುಟಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

ಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

- Advertisement -
- Advertisement -

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಮರಳಿ ಪಡೆಯಲು ಭಾರತ ಶ್ರಮಿಸುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲಿ ಶ್ರೀಲಂಕಾ ವಿದೇಶಾಂಗ ಸಚಿವಾಲಯವು ದ್ವೀಪವು ತನ್ನ ನಿಯಂತ್ರಣದಲ್ಲಿದೆ ಎಂದು ಸಮರ್ಥಿಸಿಕೊಂಡಿದೆ, ಆದರೆ ಬಿಜೆಪಿ ಹೇಳುವಂತೆ ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಪಡೆಯಲು ಸಾಧ್ಯವಿಲ್ಲ ಎನ್ನುವುದು ವಾಸ್ತವವಾಗಿದೆ.

ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಅವರು ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ, ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು. ರಾಷ್ಟ್ರೀಯ ಗಡಿಗಳನ್ನು ಕಾಯ್ದುಕೊಳ್ಳುವ ಕುರಿತು ಜೀವನ್ ತೊಂಡಮಾನ್ ಅವರ ಹೇಳಿಕೆಗಳ ಬೆನ್ನಲ್ಲಿ ಶ್ರೀಲಂಕಾದ ಮತ್ತೋರ್ವ ಸಚಿವರು ಇಚ್ಛೆಯಂತೆ ಇದನ್ನು ಬದಲಾಯಿಸಲಾಗುವುದಿಲ್ಲ ಎಂದು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಕಚ್ಚತೀವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಔಪಚಾರಿಕವಾಗಿ ಗುರುತಿಸಲ್ಪಟ್ಟಿದೆ. ಗಡಿಯನ್ನು ನಿರ್ಧರಿಸಿದ ನಂತರ ಸರ್ಕಾರದ ಬದಲಾವಣೆಯ ಕಾರಣಕ್ಕಾಗಿ ಯಾರೂ ಕೂಡ ಭೂಭಾಗದ ಬದಲಾವಣೆಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಅಣ್ಣಾಮಲೈ ಹೊರತುಪಡಿಸಿ, ಮತ್ತೊಬ್ಬ ಬಿಜೆಪಿ ನಾಯಕ ಕೂಡ ಕಚ್ಚತೀವು ದ್ವೀಪದಲ್ಲಿ ಬಿಜೆಪಿ ನಾಯಕತ್ವ ಪ್ರಮುಖ ಘೋಷಣೆ ಮಾಡಲಿದೆ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಉಲ್ಭಣಗೊಂಡ ಈ ವಿವಾದವು ನೆರೆಯ ರಾಷ್ಟ್ರದೊಂದಿಗೆ ಭಾರತದ ಸಂಬಂಧವನ್ನು “ಹಾನಿ”ಗೊಳಿಸುವುದೇ ಎಂಬ ಪ್ರಶ್ನೆ? ಉದ್ಭವಿಸಿದೆ. ಇದಕ್ಕೆ ಮಾಜಿ ರಾಜತಾಂತ್ರಿಕ ಕೆಸಿ ಸಿಂಗ್ ಪ್ರತಿಕ್ರಿಯಿಸಿ ಜೈಶಂಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೈಶಂಕರ್‌ ಅವರ ಹೇಳಿಕೆ ಭಾರತವು ದೇಶೀಯ ರಾಜಕೀಯದಲ್ಲಿ ಕಚ್ಚತೀವು ವಿಚಾರವನ್ನು ಮುನ್ನೆಲೆಗೆ ತರವುದರಿಂದ ಶ್ರೀಲಂಕಾದೊಂದಿಗಿನ ಭಾರತದ ರಾಜತಾಂತ್ರಿಕ ಸಂಬಂಧವನ್ನು ಹದಗೆಡಿಸುತ್ತದೆ. ಜೈಶಂಕರ್‌ ಅವರಂತಹ ಅನುಭವಿ ರಾಜಕಾರಣಿ ಈ ರಿತಿ ಪ್ರತಿಕ್ರಿಯಿಸುವುದು ಅವರ ಇಮೇಜ್‌ನ್ನು ಹಾನಿಗೊಳಿಸುತ್ತದೆ. ಇದು ಶ್ರೀಲಂಕಾವನ್ನು ಮಾಲ್ಡೀವ್ಸ್‌ನಂತೆ ಚೀನಾದ ತೆಕ್ಕೆಗೆ ತಳ್ಳಬಹುದು, ಆದರೆ ದಕ್ಷಿಣದಲ್ಲಿ ಬಿಜೆಪಿಗೆ ಸ್ವಲ್ಪ ಲಾಭವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಭಾರತದ ರಾಮೇಶ್ವರಂ ಮತ್ತು ಶ್ರೀಲಂಕಾ ನಡುವಿನ ಪಾಕ್ ಜಲಸಂಧಿಯಲ್ಲಿ 285 ಎಕರೆ ವಿಸ್ತಾರವಾದ ಕಚ್ಚತೀವು ದ್ವೀಪವು ಭಾರತದ ಕರಾವಳಿಯಿಂದ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ. ಕಚ್ಚತೀವು ಬ್ರಿಟಿಷರ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ವಿವಾದಿತ ಪ್ರದೇಶವಾಗಿತ್ತು. ಪ್ರಧಾನ ಮಂತ್ರಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು 1974ರ “ಇಂಡೋ-ಶ್ರೀಲಂಕಾದ ಕಡಲ ಒಪ್ಪಂದ”(“Indo-Sri Lankan Maritime Agreement) ಅಡಿಯಲ್ಲಿ ದ್ವೀಪ ರಾಷ್ಟ್ರಕ್ಕೆ ಬಿಟ್ಟುಕೊಡಲು ಒಪ್ಪಿಕೊಂಡಿತು. ಕಚ್ಚತೀವು ಶ್ರೀಲಂಕಾದ ಭಾಗವಾಗಿದೆ.

ಈ ಬಗ್ಗೆ ಅಲಾಡಿ ಗುರುಸ್ವಾಮಿ ಅವರು 2015ರ ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. ಸಚಿವೆ ಸುಷ್ಮಾ ಸ್ವರಾಜ್‌ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆ ಅರ್ಜಿಗೆ ಅದೇ ಜನವರಿ 27ರಂದು ಉತ್ತರ ನೀಡಿತ್ತು. ಉತ್ತರದಲ್ಲಿ, ‘1974 ಮತ್ತು 1976ರ ಒಪ್ಪಂದಗಳ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾದ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿಯವರೆಗೆ ಆ ದ್ವೀಪವು ಯಾರ ವ್ಯಾಪ್ತಿಗೆ ಸೇರುತ್ತದೆ ಎಂಬುದನ್ನು ಗುರುತಿಸಿರಲೇ ಇಲ್ಲ. ಹೀಗಾಗಿ ಎರಡೂ ದೇಶಗಳ ಮಧ್ಯೆ ಜಲಗಡಿಯನ್ನು ಗುರುತಿಸುವ ಅವಧಿಯಲ್ಲಿ ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಡುವ ಅಥವಾ ಸ್ವಾಧೀನಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವಾಲಯವು ವಿವರಿಸಿತ್ತು. ಜತೆಗೆ ಒಪ್ಪಂದಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಉತ್ತರದೊಂದಿಗೆ ನೀಡಿತ್ತು. ಮೋದಿ ಅವರ ಸರ್ಕಾರದ್ದೇ ಸಚಿವಾಲಯವು ಅಧಿಕೃತವಾಗಿ ನೀಡಿದ್ದ ದಾಖಲೆಗಳ ಪ್ರಕಾರ ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲ ಎನ್ನುವುದು ಬಯಲಾಗುತ್ತದೆ. ಆದ್ದರಿಂದ ಬಿಜೆಪಿಗರು ಈಗ ಹೇಳುವಂತೆ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಸೇರಿಸುವುದು ಸುಲಭವಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...