Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...