Homeಮುಖಪುಟಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸೇರಿದಂತೆ 54 ಮಂದಿ ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಇಂದು ನಿವೃತ್ತರಾಗಿದ್ದಾರೆ.

ಅಕ್ಟೋಬರ್ 1991ರಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮೊದಲ ಬಾರಿಗೆ ಸಂಸತ್ತಿನ ಸದಸ್ಯರಾಗಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ನೇಮಕಗೊಂಡಿದ್ದರು. ನಂತರ ಅವರು 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಅವರ ನಿವೃತ್ತಿ “ಯುಗ ಅಂತ್ಯ” ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಕಾಂಗ್ರೆಸ್ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ, MGNREGA ಯೋಜನೆಗಾಗಿ ಸಿಂಗ್ ಅವರನ್ನು ಪ್ರಶಂಸಿದ್ದಾರೆ. ದೇಶ ಮತ್ತು ವಿಶೇಷವಾಗಿ ಗ್ರಾಮೀಣ ಬಡವರು ಮಾಜಿ ಪ್ರಧಾನಿಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ, ಅವರು MGNREGA ಮೂಲಕ ಗ್ರಾಮೀಣ ಬಡವರಿಗೆ ಜೀವನೋಪಾಯವನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಪ್ರಧಾನಿ ಮಾತನಾಡುವಾಗಲೆಲ್ಲಾ ಇಡೀ ಜಗತ್ತು ಅವರ ಮಾತನ್ನು ಕೇಳುತ್ತದೆ ಎಂದು ಅಧ್ಯಕ್ಷ ಒಬಾಮಾ ನಿಮ್ಮ ಬಗ್ಗೆ ಪ್ರಸ್ತಾಪಿಸಿದ್ದು ನನಗೆ ನೆನಪಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ ನೀವು ಇಂದು ರಾಜ್ಯಸಭೆಯಿಂದ ನಿವೃತ್ತರಾಗುತ್ತಿದ್ದಂತೆ, ಒಂದು ಯುಗವು ಕೊನೆಗೊಳ್ಳುತ್ತದೆ. ಕೆಲವೇ ಜನರು ನಿಮ್ಮಂತೆ ಹೆಚ್ಚು ಸಮರ್ಪಣಾ ಮತ್ತು ಹೆಚ್ಚು ಶ್ರದ್ಧೆಯಿಂದ ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಬಹುದು. ವೈಯಕ್ತಿಕವಾಗಿ, ನಿಮ್ಮ ಸಚಿವ ಸಂಪುಟದ ಭಾಗವಾಗಿರುವುದು ನನಗೆ ಒಂದು ವಿಶೇಷವಾಗಿದೆ. ಕಳೆದ 10 ವರ್ಷಗಳಲ್ಲಿ, ನಾನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕನಾಗಿದ್ದಾಗ ನೀವು ನನಗೆ ಪ್ರಮುಖ ಸಲಹೆಗಾರರಾಗಿದ್ದೀರಿ, ನಾನು ನಿಮ್ಮನ್ನು ಗೌರವಿಸುತ್ತೇನೆ. ಕಳೆದ ಕೆಲವು ವರ್ಷಗಳಿಂದ ನೀವು ವೈಯಕ್ತಿಕ ಅನಾನುಕೂಲತೆಗಳ ನಡುವೆಯೂ ಕಾಂಗ್ರೆಸ್ ಪಕ್ಷಕ್ಕೆ ಲಭ್ಯವಾಗುವಂತೆ ಮಾಡಿದ್ದೀರಿ. ಇದಕ್ಕಾಗಿ ಪಕ್ಷ ಮತ್ತು ನಾನು ಸದಾ ಕೃತಜ್ಞರಾಗಿರುತ್ತೇವೆ ಎಂದು ಹೇಳಿದ್ದಾರೆ.

ಸೋನಿಯಾಗಾಂಧಿ ಮೊದಲ ಬಾರಿಗೆ ರಾಜಸ್ಥಾನದಿಂದ ರಾಜ್ಯಸಭೆ ಪ್ರವೇಶಿಸುತ್ತಿದ್ದು, 91 ವರ್ಷ ವಯಸ್ಸಿನ ಸಿಂಗ್ ತಮ್ಮ ಅಧಿಕಾರಾವಧಿಯನ್ನು ಏಪ್ರಿಲ್ 3ರಂದು ಕೊನೆಗೊಳಿಸುತ್ತಿದ್ದಂತೆಯೇ ಆ ಸ್ಥಾನವನ್ನು ಸೋನಿಯಾ ಗಾಂಧಿ ತುಂಬಲಿದ್ದಾರೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...