Homeಕರ್ನಾಟಕಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣದ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂಡಿಯಾ ಮೈತ್ರಿ ಪಕ್ಷಗಳ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾವು ಕರ್ನಾಟಕದಲ್ಲಿ ಇಂಡಿಯಾ ಬಣದ 10 ಪಕ್ಷಗಳ ಬೆಂಬಲದ ಬಗ್ಗೆ ಚರ್ಚಿಸುತ್ತಿದ್ದೇವೆ, ಅವರು ಎಷ್ಟು ಮತಗಳನ್ನು ತರುತ್ತಾರೆ ಎಂಬುವುದು ಮುಖ್ಯವಲ್ಲ. ಮಿತ್ರ ಪಕ್ಷಗಳ ತತ್ವ, ಸಿದ್ಧಾಂತ, ಬದ್ದತೆ ಮುಖ್ಯ. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ, ಇಂದು ಪ್ರಜಾಪ್ರಭುತ್ವದ ಉಳಿವಿಗೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಿದ್ದವು, ಸಿಪಿಐ ಪಕ್ಷವು 17,000 ಮತಗಳನ್ನು ಗಳಿಸಿತು ಮತ್ತು ದೇವೇಗೌಡರು ಕೇವಲ 12,000 ಮತದಾನದ ಅಂತರದಿಂದ ಚುನಾವಣೆಯಲ್ಲಿ ಸೋತರು. 2024ರ ಚುನಾವಣೆಯಲ್ಲಿ ಅಂತಹ ಪರಿಸ್ಥಿತಿ ನಮಗೆ ಬೇಕಾಗಿಲ್ಲ. ಆದ್ದರಿಂದ, ನಮಗೆ ಎಲ್ಲಾ ಮೈತ್ರಿ ಪಕ್ಷಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಲು, ನಾವು ಈ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರ ಮೇಲೆ ಬಿಜೆಪಿ ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಈ ಕ್ರಮವನ್ನು ನಾವು ಒಂದೇ ಧ್ವನಿಯಲ್ಲಿ ಖಂಡಿಸುತ್ತೇವೆ, ಚುನಾವಣಾ ಬಾಂಡ್‌ಗಳ ಪ್ರಕರಣದಲ್ಲಿ ಬಿಜೆಪಿ ಸ್ಪಷ್ಟ ಪ್ರತಿಕ್ರಿಯೆ ನೀಡುತ್ತಿಲ್ಲ, ಅವರು ಎಡಪಕ್ಷಗಳಿಗೆ 11 ಕೋಟಿ ರೂ.ಗೆ ನೋಟಿಸ್ ನೀಡಿದ್ದಾರೆ, ಈ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ದೇಶದ ಜನರಿಗೆ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವು ಇಂಡಿಯಾ ಬ್ಲಾಕ್ ಪಕ್ಷಗಳ ಸಮನ್ವಯ ಸಮಿತಿಯನ್ನು ರಚಿಸುತ್ತೇವೆ. ಎಲ್ಲಾ ಮೈತ್ರಿ ಪಾಲುದಾರರು ನಮಗೆ ಬೆಂಬಲ ಪತ್ರವನ್ನು ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ಗೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಅನುಕೂಲವಾಗಲಿದೆ. ರಾಜಕಾರಣದಲ್ಲಿ 49 ಎಂದರೆ ಸೊನ್ನೆ, 51 ಎಂದರೆ ನೂರು ಎಂದರ್ಥ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಧ್ರುವನಾರಾಯಣ್ 1 ಮತದಿಂದ ಗೆದ್ದಿದ್ದರು. ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಲ್ಲೇ ಗೆದ್ದರು. ಸೌಮ್ಯಾ ರೆಡ್ಡಿ 16 ಮತಗಳಿಂದ ಸೋತರು, ಹೀಗಾಗಿ ಒಂದೊಂದು ಮತವೂ ಮುಖ್ಯ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಾಗಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಕಾಂಗ್ರೆಸ್‌ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಪಕ್ಷಗಳ ಬೆಂಬಲವನ್ನು ಕೂಡ ಪಡೆಯಲು ಮುಂದಾಗಿದೆ. ಮತ ವಿಭಜನೆಯನ್ನು ತಡೆಗಟ್ಟಲು ಮಹತ್ವದ ತಂತ್ರವನ್ನು ರೂಪಿಸುತ್ತಿದೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...