HomeUncategorizedಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

- Advertisement -
- Advertisement -

ಚಂಡೀಗಢ ಮೇಯರ್‌ ಚುನಾವಣೆಯ ಚುನಾವಣಾಧಿಕಾರಿ ಆಗಿದ್ದ ಅನಿಲ್‌ ಮಸೀಹ್‌ ಮತಪತ್ರಗಳನ್ನು ತಿರುಚಿದ್ದ ತಮ್ಮ ನಡವಳಿಕೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

ಜನವರಿ 30ರಂದು ನಡೆದಿದ್ದ ಚಂಡೀಗಢ ಮೇಯರ್ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದ ಅನಿಲ್ ಮಸಿಹ್ ಮತಪತ್ರಗಳು ಅಮಾನ್ಯವಾಗಿದೆ ಎಂದು “ಸುಳ್ಳು ಹೇಳಿಕೆ” ನೀಡಿದ್ದಕ್ಕೆ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಬಾರದು ಎಂದು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಮಸಿಹ್ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ, “ನಾನು ಸಂಪೂರ್ಣವಾಗಿ ಬೇಷರತ್ ಕ್ಷಮೆಯಾಚಿಸಿದ್ದೇನೆ” ಎಂದು ಮಸಿಹ್‌ ತಿಳಿಸಿರುವುದಾಗಿ ಹೇಳಿದ್ದಾರೆ.

ಅವರು ಮೊದಲ ಅಫಿಡವಿಟ್‌ನ್ನು ಹಿಂತೆಗೆದುಕೊಳ್ಳುತ್ತಾರೆ ಮತ್ತು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂದು ರೋಹಟಗಿ ಹೇಳಿದರು. ಇದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನ್ಯಾಯಾಲಯವು ಮುಂದಿನ ಜುಲೈನಲ್ಲಿ ಈ ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಮೇಯರ್ ಚುನಾವಣೆಯ ಸಂದರ್ಭದಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪದ ಮೇಲೆ ಫೆಬ್ರವರಿ 19ರಂದು ಸುಪ್ರೀಂ ಕೋರ್ಟ್‌ನಿಂದ ಟೀಕೆಗೆ ಗುರಿಯಾಗಿದ್ದ ಮಸಿಹ್ ಅವರು ತಮ್ಮ ಮೊದಲ ಅಫಿಡವಿಟ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗುವ ಮೊದಲು ರಾಜಕೀಯ ಪಕ್ಷಗಳಿಂದ ಟೀಕೆಗೆ ಒಳಗಾಗಿರುವುದಾಗಿ ಹೇಳಿದ್ದರು. ಇದು ಕುಟುಂಬದ ಸದಸ್ಯರನ್ನು ಅಪಾರ ಮಾನಸಿಕ ಆಘಾತಕ್ಕೆ ತಳ್ಳಿದೆ ಎಂದು ಹೇಳಿದ್ದರು. ನಾನು ಆತಂಕದಲ್ಲಿದ್ದು, ಖಿನ್ನತೆ ಎದುರಿಸುತ್ತಿದ್ದೇನೆ. ಮತಪತ್ರಗಳನ್ನು ತಿದ್ದಿದ ಆರೋಪವನ್ನು ನಿರಾಕರಿಸಿ ಈ ಹಿಂದೆ ಸಲ್ಲಿಸಿದ್ದ ಅಫಿಡವಿಟ್‌ನ್ನು ಹಿಂಪಡೆಯುವುದಾಗಿ ಮಸೀಹ್‌ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮನೋಜ ಸೋನ್ಕರ್ ಅವರನ್ನು ಮೇಯರ್ ಹುದ್ದೆಗೆ ಆಯ್ಕಯಾಗಿದ್ದಾರೆ ಎಂದು ಮಸೀಹ್ ಪ್ರಕಟಿಸಿದ್ದ ಚುನಾವಣಾ ಫಲಿತಾಂಶವನ್ನು ಫೆ.20ರಂದು ರದ್ದುಗೊಳಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಚಂಡಿಗಡ ಮೇಯರ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಕುಲದೀಪ್ ಕುಮಾರ್ ಗೆದ್ದಿದ್ದಾರೆ ಎಂದು ಘೋಷಿಸಿತ್ತು. ಮಸೀಹ್‌ ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದ್ದ ಸಂದರ್ಭದಲ್ಲಿ ನ್ಯಾಯಾಲಯವು, ಅವರು ಆಪ್ ನ ಕುಲದೀಪ್‌ ಕುಮಾರ್‌ ಪರವಾಗಿ ಚಲಾವಣೆಯಾಗಿದ್ದ ಮತಪತ್ರಗಳನ್ನು ಉದ್ದೇಶಪೂರ್ವಕವಾಗಿ ವಿರೂಪಗೊಳಿಸಿದ್ದಾರೆ ಎಂದು ಹೇಳಿತ್ತು.

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಹುಮತವಿದ್ದರೂ ‘ಇಂಡಿಯಾ’ ಬ್ಲಾಕ್‌ನ ಎಎಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಮೈತ್ರಿ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದ್ದು, ಚುನಾವಣಾಧಿಕಾರಿ ವಿರುದ್ಧ ‘ಟ್ಯಾಂಪರಿಂಗ್’ ಆರೋಪ ಕೇಳಿಬಂದಿತ್ತು. ಮತಪತ್ರಗಳನ್ನು ತಿದ್ದುತ್ತಿರುವ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಎಎಪಿಯ ಕುಲದೀಪ್ ಕುಮಾರ್ ಅವರ 12 ಮತಗಳಿಗೆ ಹೋಲಿಸಿದರೆ ಸೋಂಕರ್ ಅವರು 16 ಮತಗಳನ್ನು ಪಡೆದರು, ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಈ ಫಲಿತಾಂಶದ ಘೋಷಣೆಯು ಎಎಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್‌ಗಳಿಂದ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...